• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿ ತೀರ್ಪು: ಕಾಂಗ್ರೆಸ್ ಸ್ವಾಗತ

|

ಬೆಂಗಳೂರು, ಮೇ 10: ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಬಡ್ತಿಯಲ್ಲಿ ಜೇಷ್ಠತಾ ಪಟ್ಟಿ ಆಧಾರದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಸರ್ಕಾರಿ ನೌಕರರ ಮೀಸಲಾತಿ ಆಧಾರಿತ ಬಡ್ತಿ ನೌಕರರ ಜೇಷ್ಠತಾ ನಿರ್ಣಯ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಈ ತೀರ್ಪನ್ನು ಸ್ವಾಗತಿಸಿ ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಕಾಯ್ದೆ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಈ ಕಾಯ್ದೆ ನ್ಯಾಯಯುತವಾಗಿಲ್ಲ. ಇದು ಸರ್ಕಾರಿ ವಲಯದಲ್ಲಿನ ತಾರತಮ್ಯವನ್ನು ಹೆಚ್ಚಿಸುತ್ತದೆ. ಹಿರಿತನದ ಆಧಾರದಲ್ಲಿ ಅರ್ಹರಾಗಿದ್ದರೂ ಸಾಮಾನ್ಯ ವರ್ಗದ ನೌಕರರಿಗೆ ಸೂಕ್ತ ಸಮಯಕ್ಕೆ ಬಡ್ತಿ ಸಿಗುವುದಿಲ್ಲ. ನಿವೃತ್ತಿ ವಯಸ್ಸು ದಾಟಿದರೂ ಎರಡು ಅಥವಾ ಮೂರನೇ ಹಂತದ ಬಡ್ತಿಯನ್ನು ಪಡೆದಿರುವುದಿಲ್ಲ. ಆದರೆ, ಈ ಕಾಯ್ದೆಯಡಿ ಬರುವ ನೌಕರರು ಆರೇಳು ಹಂತದ ಬಡ್ತಿ ಪಡೆಯುವ ಅವಕಾಶ ಪಡೆಯುತ್ತಾರೆ. ಅಲ್ಲದೆ, ಅರ್ಹತೆ ಮತ್ತು ದಕ್ಷತೆ ಆಧಾರದ ಬಡ್ತಿ ನಿಯಮ ಮೂಲೆ ಗುಂಪಾಗುತ್ತದೆ. ಅನರ್ಹರಿಗೆ ಅಧಿಕಾರ ದೊರಕುತ್ತದೆ ಎಂದು ಆರೋಪಗಳು ಕೇಳಿಬಂದಿವೆ.

ಬಡ್ತಿ ಮೀಸಲು: ಎಸ್‌ಸಿ ಎಸ್‌ಟಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್ ಶುಕ್ರವಾರ ಬಿ.ಕೆ. ಪವಿತ್ರಾ ಅವರ ಅರ್ಜಿಯನ್ನು ವಜಾಗೊಳಿಸಿ ರಾಜ್ಯ ಸರ್ಕಾರದ ಪರವಾದ ತೀರ್ಪು ನೀಡಿದೆ. ಇದರ ಬಗ್ಗೆ ದೇಶದ ಅನೇಕ ಕಡೆ ಚರ್ಚೆಗಳಾಗುತ್ತಿವೆ. ಕಾಂಗ್ರೆಸ್ ನಾಯಕರು ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಹೋರಾಟಕ್ಕೆ ಸಂದ ಜಯ ಎಂದಿದ್ದಾರೆ.

ಎಸ್‌ಸಿ ಎಸ್‌ಟಿಗಳಿಗೆ ಸಾಮಾಜಿಕ ನ್ಯಾಯ

ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್‌ಸಿ/ಎಸ್‌ಟಿ ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಸಂಬಂಧ ನಮ್ಮ ಸರ್ಕಾರ ರೂಪಿಸಿದ್ದ ಕಾಯ್ದೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಇದು ಹಿಂದುಳಿದ ಸಮುದಾಯಗಳಿಂದ ಬಂದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸುತ್ತದೆ ಮತ್ತು ಮಹತ್ವದ ಹುದ್ದೆಗಳನ್ನು ನೀಡಿ ತಾರತಮ್ಯವನ್ನು ತಗ್ಗಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟ

ದಿನೇಶ್ ಗುಂಡೂರಾವ್

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಿದ್ಧಪಡಿಸಿದ ಕಾಯ್ದೆಯ ಮಾನ್ಯತೆಯನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇದು ಸಮಾಜದಲ್ಲಿ ಹಿಂದುಳಿದಿರವ ವರ್ಗಗಳ ಜನರನ್ನು ಮೇಲೆತ್ತಲು ನೆರವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಖಾಸಗಿ ಕ್ಷೇತ್ರಗಳಲ್ಲಿಯೂ SC/ST ಮೀಸಲಾತಿಗೆ ಮುಂದಾದ ಕೇಂದ್ರ?

ಕರ್ನಾಟಕ ಕಾಂಗ್ರೆಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎಸ್.ಸಿ, ಎಸ್.ಟಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಮೀಸಲಾತಿ ಆಧರಿಸಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸಲು ಈಗ ಸಾಧ್ಯ. ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಡ್ತಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ರದ್ದು: ಕರ್ನಾಟಕಕ್ಕೆ ಸುಪ್ರೀಂ ಆದೇಶ

ಕಾಂಗ್ರೆಸ್ ಹೋರಾಟಕ್ಕೆ ಜಯ

ಬಡ್ತಿ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದ್ದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ಕಾರೀ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಬೇಕೆಂಬುದರ ಸಲುವಾಗಿ ಕಾನೂನಾತ್ಮಕವಾಗಿ ಹೋರಾಟ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪ್ರಯತ್ನಕ್ಕೆ ಕೊನೆಗೂ ಫಲ ದೊರೆತಿದೆ ಎಂದು ಮಾಜಿ ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

ಭಾರಿ ಗೆಲುವು ಎಂದ ಇಂದಿರಾ ಜೈ ಸಿಂಗ್

ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಭಾರಿ ಗೆಲುವು. ನ್ಯಾಯಮೂರ್ತಿಗಳಾದ ಲಲಿತ್ ಮತ್ತು ಡಿವೈ ಚಂದ್ರಚೂಡ್ ಅವರನ್ನು ಒಳಗೊಂಡ ನ್ಯಾಯಪೀಠವು ಜೇಷ್ಠತೆಯ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡುವುದನ್ನು ಎತ್ತಿ ಹಿಡಿದಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈ ಸಿಂಗ್ ಟ್ವೀಟ್ ಮಾಡಿದ್ದಾರೆ.

ಜಿ. ಪರಮೇಶ್ವರ್

ಜಿ. ಪರಮೇಶ್ವರ್

ಎಸ್‌.ಸಿ. ಮತ್ತು ಎಸ್‌ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ದೊರಕುವುದರಿಂದ ಆ ವರ್ಗಗಳ ಜನರಿಗೆ ನೆರವಾಗಲಿದೆ. ಇದರ ಜಾರಿ ಎಲ್ಲವೂ ಕಾನೂನಿನ ಚೌಕಟ್ಟಿನಲ್ಲಿ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತುಮಕೂರಿನಲ್ಲಿ ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court on Friday upholds the SC ST reservation in promotion act of Karnataka State Government. Congress claimed it was a victory for then Siddaramaiah government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more