ಪರಿಷತ್ ಸಭಾಪತಿ ಆಯ್ಕೆಗೆ ಡಿ.12ಕ್ಕೆ ಚುನಾವಣೆ, ಇನ್ನೂ ಹಗ್ಗ-ಜಗ್ಗಾಟ

ಬೆಂಗಳೂರು, ಡಿಸೆಂಬರ್ 11 : ವಿಧಾನ ಪರಿಷತ್‌ ಸಭಾಪತಿ ಯಾರು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಡಿಸೆಂಬರ್ 12ರಂದು ಮತದಾನ ನಿಗದಿಯಾಗಿದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್ ನಡುವೆ ಸಭಾಪತಿ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ.

ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿದ್ದಾರೆ. ಅವರನ್ನು ಮುಂದುವರೆಸಲು ಪಕ್ಷ ಬಯಸಿದೆ. ಆದರೆ, ಕಾಂಗ್ರೆಸ್‌ ಸಭಾಪತಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದೆ. ಇದರಿಂದಾಗಿ ಕುತೂಹಲ ಹೆಚ್ಚಾಗಿದೆ.

ಸಭಾಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನ 12 ಗಂಟೆಯ ತನಕ ಅವಕಾಶವಿದೆ. ಕಾಂಗ್ರೆಸ್‌ನಿಂದ ಎಸ್.ಆರ್.ಪಾಟೀಲ್ ಅವರನ್ನು ಸಭಾಪತಿ ಮಾಡಲು ಪಕ್ಷ ಬಯಸಿದೆ. ನಾಮಪತ್ರ ಸಲ್ಲಿಸಲು ಸಿದ್ಧವಾಗುವಂತೆ ಸೂಚಿಸಲಾಗಿದೆ.

Who will be the Legislative council chairman election on December 12

ಬಸವರಾಜ ಹೊರಟ್ಟಿ ಅವರನ್ನು ಮುಂದುವರೆಸಲು ಎಚ್.ಡಿ.ದೇವೇಗೌಡರು ಸಂಪೂರ್ಣ ಒಪ್ಪಿಗೆ ಕೊಟ್ಟಿಲ್ಲ. ದೆಹಲಿಯಲ್ಲಿ ಸೋಮವಾರ ಅವರು ಕಾಂಗ್ರೆಸ್ ನಾಯಕರ ಜೊತೆ ಸಭಾಪತಿ ಆಯ್ಕೆ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪಕ್ಷೇತರ ಸದಸ್ಯ ವಿವೇಕರಾವ್ ಪಾಟೀಲ ಸೇರಿ 39 ಸದಸ್ಯ ಬಲವನ್ನು ಕಾಂಗ್ರೆಸ್ ಹೊಂದಿದೆ. ಆದ್ದರಿಂದ, ಸಭಾಪತಿ ಸ್ಥಾನ ತಮಗೆ ಬೇಕು ಎಂದು ಪಕ್ಷ ಪಟ್ಟು ಹಿಡಿದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಎಸ್.ಆರ್.ಪಾಟೀಲ್ ಸಭಾಪತಿಯಾಗಬೇಕು ಎಂದು ಸೂಚನೆ ನೀಡಿ, ವಿದೇಶಕ್ಕೆ ತೆರಳಿದ್ದಾರೆ.

ಎಸ್.ಆರ್.ಪಾಟೀಲ್ ಅವರಿಗೆ ನಾಮಪತ್ರ ಸಲ್ಲಿಸಲು ಸಿದ್ಧವಾಗಲು ಸೂಚನೆ ನೀಡಲಾಗಿದೆ. ಕೊನೆ ಕ್ಷಣದಲ್ಲಿ ಹೈಕಮಾಂಡ್‌ ಸೂಚಿಸಿದರೆ ಮಾತ್ರ ಕಾಂಗ್ರೆಸ್ ಸಭಾಪತಿ ಹುದ್ದೆಯನ್ನು ಜೆಡಿಎಸ್‌ಗೆ ಬಿಟ್ಟುಕೊಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+