Karnataka CM Race: ಇಂದು ಬೆಂಗಳೂರಿನಲ್ಲೇ ನೂತನ ಮುಖ್ಯಮಂತ್ರಿ ಹೆಸರು ಘೋಷಣೆ?! ಯಾರಾಗ್ತಾರೆ ಕರುನಾಡ ಸಿಎಂ?

ಕರ್ನಾಟಕ ಸಿಎಂ: ಬೆಂಗಳೂರು, ಮೇ 17: ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಪಾಳಯದಲ್ಲಿ ಕರುನಾಡ ಮುಖ್ಯಮಂತ್ರಿ ಯಾರಾಗ್ಬೇಕು ಎನ್ನುವ ಚರ್ಚೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದ್ದು, ಇಂದು(ಬುಧವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ ಪಾಳಯದಲ್ಲಿ ಹತ್ತು ಹಲವು ವಿಚಾರಗಳು ಚರ್ಚೆಯಾಗುತ್ತಿದ್ದು, ಕರುನಾಡ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಜಟಾಪಟಿ ಮುಂದುವರೆದಿದೆ.

chief minister of karnataka

ಈಗಾಗಲೇ ನನಗೆ ಕೊಟ್ಟರೇ ಸಿಎಂ ಸ್ಥಾನವನ್ನ ಕೊಡಿ ಬೇರೆ ಸ್ಥಾನ ಬೇಡ ಎಂದು ಡಿ ಕೆ ಶಿವಕುಮಾರ್‌ ಪಟ್ಟು ಹಿಡಿದಿದ್ದಾರೆ. ಇತ್ತ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಿ ಎಂದು ಬಹುತೇಕ ಶಾಸಕರು ಬೆಂಬಲವನ್ನ ಸೂಚಿಸಿದ್ದು, ಹೈಕಮಾಂಡ್‌ ಗೆ ದೊಡ್ಡ ತಲೆನೋವಾಗಿದೆ.

ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಜೊತೆಗೆ ಎಐಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಪ್ರತ್ಯೇಕವಾಗಿ 50 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಇಬ್ಬರು ನಾಯಕರು ಸಿಎಂ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದ್ದಾರೆ.

chief minister of karnataka

ಇತ್ತ ಡಿ ಕೆ ಶಿವಕುಮಾರ್‌ ಕೊಟ್ಟರೇ ಮುಖ್ಯಮಂತ್ರಿ ಸ್ಥಾನವನ್ನ ನೀಡಿ ಇಲ್ಲ, ಅಧ್ಯಕ್ಷನಾಗಿಯೇ ಪಕ್ಷ ಸಂಘಟನೆಯನ್ನ ಮಾಡುತ್ತೇನೆ, ನನಗೆ ಯಾವ ಮಂತ್ರಿ ಸ್ಥಾನವು ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

135 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಗೆ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ಸವಾಲಾಗಿದೆ. ದೆಹಲಿ ನಾಯಕರು ಈಗಾಗಲೇ ಸಾಲು ಸಾಲು ಸಭೆಗಳನ್ನ ನಡೆಸಿರುವ ಕಾಂಗ್ರೆಸ್‌ ಹೈಕಮಾಂಡ್‌,ಬುಧವಾರ ಬೆಳಗ್ಗೆ ಮಲ್ಲಿಕಾರ್ಜುನ್‌ ಖರ್ಗೆ ನಿವಾಸದಲ್ಲಿ ಅಂತಿಮ ಸುತ್ತಿನ ಸಭೆ ನಡೆಸಲಿದ್ದಾರೆ.

chief minister of karnataka

ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದು, ಅಂತಿಮವಾಗಿ ಸಭೆಯ ಬಳಿಕ ಮುಖ್ಯಮಂತ್ರಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣಾ ಹಿನ್ನಲೆ ಬಹುತೇಕ ಶಾಸಕರ ಅಭಿಪ್ರಾಯದಂತೆ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಲು ಹೈಕಮಾಂಡ್‌ ಮುಂದಾಗಿತ್ತು ಎನ್ನಲಾಗಿದೆ. ಆದರೆ ಡಿ ಕೆ ಶಿವಕುಮಾರ್‌ ಪಟ್ಟು ಹಿಡಿದಿದ್ದು, ಇನ್ನೂ ಸಿಎಂ ಯಾರು ಎನ್ನುವ ಬಗ್ಗೆ ಹೈಕಮಾಂಡ್‌ ಸ್ಪಷ್ಟ ನಿಲುವನ್ನ ತೆಗೆದುಕೊಂಡಿಲ್ಲ.

ಇತ್ತ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ರಾಹುಲ್‌ ಗಾಂಧಿ ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದ್ದು, ಇಂದು ನಡೆಯುವ ಅಂತಿಮ ಸಭೆಯಲ್ಲಿ ಕರುನಾಡ ಸಿಎಂ ಯಾರು ಎಂದು ತಿಳಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+