Channapatna By-Election: ಚನ್ನಪಟ್ಟಣದಲ್ಲಿ ಇವರು ಗೆಲ್ಲುವುದು ಪಕ್ಕಾ? ಸಮೀಕ್ಷೆಯಿಂದ ಹೊರಬಿತ್ತು ನಿಖರ ಮಾಹಿತಿ

ಬೆಂಗಳೂರು, ನವೆಂಬರ್21:‌ ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಭರಾಟೆ ಮುಗಿದಿದೆ. ಇನ್ನೇನಿದ್ದರೂ ಫಲಿತಾಂಶ ಬರಬೇಕು. ಈ ನಡುವೆ ಗೆಲ್ಲುವ ಕುದುರೆ ಯಾರೆಂಬ ಲೆಕ್ಕಾಚಾರ ತೀವ್ರಗೊಂಡಿದೆ. ಚನ್ನಪಟ್ಟಣ ಕ್ಷೇತ್ರಗಳಲ್ಲಿ ಬೆಟ್ಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅಖಾಡಲ್ಲಿದ್ದಾರೆ. ಈ ಚುನಾವಣೆ ತೀವ್ರ ಹಣಾಹಣಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದತ್ತ ಬೆಟ್ಟಿಂಗ್ ದಾರರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಚನ್ನಪಟ್ಟಣ ಡಿ ಕೆ ಬ್ರದರ್ಸ್‌ ಗೆ ಪ್ರತಿಷ್ಠೆಯಾಗಿದ್ರೆ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಗೆ ಅಸ್ತಿತ್ವದ ಪ್ರಶ್ನೆಯಾಗಿದೆ.

Channapatna By Election Nikhil Kumaraswamy Will Win In Channapatna

ಚನ್ನಪಟ್ಟಣದಲ್ಲಿ ಎನ್‌ಡಿಎ ವರ್ಸಸ್ ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಚುನಾವಣೆಯಲ್ಲಿ ಸೋಲು ಗೆಲುವು 50-50 ಆಧಾರದಲ್ಲೇ ಇರುವುದರಿಂದ ಬೆಟ್ಟಿಂಗ್ ನಲ್ಲೂ ಇದೇ ನಂಬರ್ ನಡಿಯುತ್ತಿದೆ ಎಂದು ಹೇಳಲಾಗಿದೆ. ಇನ್ನೂ ಈ ಎಲ್ಲಾ ಬೆಳವಣೆಗೆಗಳ ನಡುವೆ ಬುಧವಾರ ಪ್ರಕಟವಾದ P- Marq ಮತದಾನೋತ್ತರ ಸಮೀಕ್ಷೆಯ ಪ್ರಕಾರ ಎನ್​ಡಿಎ ಕೂಟ ಮುನ್ನಡೆ ಸಾಧಿಸಿದ್ದಾಗಿ ಹೇಳಿವೆ. ನವೆಂಬರ್​ 23 ರಂದು ನಿಖರ ಫಲಿತಾಂಶ ಹೊರಬೀಳಲಿದೆ.

P- Marq ಮತದಾನೋತ್ತರ ಸಮೀಕ್ಷೆಯ ಪ್ರಕಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ನಿಂದ ಸ್ಪರ್ಧೆ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಯಿಂದ ನಿಖಲ ಮಾಹಿತಿ ಹೊರಬಿದ್ದಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್‌ ಭದ್ರಕೋಟೆಯಾಗಿದ್ದು, ಜೆಡಿಎಸ್​​ ಪಕ್ಷಕ್ಕೆ ಚನ್ನಪಟ್ಟಣ ಪ್ರತಿಷ್ಠೆಯ ಕಣವನ್ನಾಗಿ ಪರಿಗಣಿಸಿತ್ತು. ಇತ್ತ ಕಾಂಗ್ರೆಸ್​ ಕೂಡ ಗೆಲ್ಲಲೇಬೇಕೆಂದು ತೀವ್ರ ಪೈಪೋಟಿ ಒಡ್ಡಿದ್ದು, ಜೆಡಿಎಸ್​​ನಿಂದ ನಿಖಿಲ್​ ಕುಮಾರಸ್ವಾಮಿ ಅವರು ಕಣಕ್ಕಿಳಿದರೆ, ಕಾಂಗ್ರೆಸ್​​ನಿಂದ ಸಿ.ಪಿ.ಯೋಗೇಶ್ವರ್​​ ಅಭ್ಯರ್ಥಿಯಾಗಿದ್ದು, ಪ್ರಚಾರದ ವೇಳೆ ಭಾರೀ ವಾಕ್ಸಮರ ಉಂಟಾಗಿತ್ತು.

ಆರಂಭದಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಿ ಪಿ ಯೋಗೇಶ್ವರ್‌ ಅವರೇ ಮೇಲುಗೈ ಸಾಧಿಸಿದ್ದರು. ಆದರೆ ಬರಬರುತ್ತಾ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರಲ್ಲಿ ಆತ್ಮವಿಶ್ವಾಸ ಎದ್ದು ಕಾಣುತ್ತಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿದ್ದ ಹೇಳಿಕೆ ಚನ್ನಪಟ್ಟಣ ಉಪ ಚುನಾವಣೆಯ ಮೇಲೆ ತೀವ್ರ ಪ್ರಭಾವ ಬೀರಿದೆ. ಇದನ್ನು ಸ್ವತಃ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಅವರೇ ಒಪ್ಪಿಕೊಂಡಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಗೆಲ್ಲುವ ಬಗ್ಗೆ ಪೂರ್ತಿ ವಿಶ್ವಾಸವನ್ನು ಸಿ ಪಿ ಯೋಗೇಶ್ವರ್‌ ಅವರು ವ್ಯಕ್ತಪಡಿಸಿಲ್ಲ, ಹೀಗಾಗಿ ಎರಡು ಬಾರಿ ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ ಅವರು ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ಮಹಾರಾಷ್ಟ್ರ, ಜಾರ್ಖಂಡ್​ ವಿಧಾನಸಭೆ ಚುನಾವಣೆಯ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನೋತ್ತರ ಸಮೀಕ್ಷೆ ಹೊರಬಿದಿದ್ದು, ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಬುಧವಾರ ಪ್ರಕಟವಾದ P- Marq ಮತದಾನೋತ್ತರ ಸಮೀಕ್ಷೆಯ ಪ್ರಕಾರ ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ನವೆಂಬರ್​ 23 ರಂದು ನಿಖರ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+