Shiggaon By Election ಶಿಗ್ಗಾಂವಿಯಲ್ಲಿ ಇವರ ಗೆಲುವು ಫಿಕ್ಸ್: ಇಲ್ಲಿದೆ ಸಮೀಕ್ಷೆ ನೀಡಿದ ಪಕ್ಕಾ ಮಾಹಿತಿ
ಹಾವೇರಿ, ನವೆಂಬರ್ 21: ಶಿಗ್ಗಾಂವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ನವೆಂಬರ್ 13 ರಂದು ನಡೆಯಲಿದೆ. ಉಪಚುನಾವಣೆ ಫಲಿತಾಂಶ ಪ್ರಕಟವಾಗಲು ಇನ್ನು 48 ಗಂಟೆ ಬಾಕಿ ಉಳಿದಿದ್ದು, ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಮೂಡಿದ್ದು, ಶಿಗ್ಗಾಂವಿಯಲ್ಲಿ ನಮ್ಮ ಗೆಲುವೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಇನ್ನೂ ಬುಧವಾರ ಪ್ರಕಟವಾದ P- Marq ಮತದಾನೋತ್ತರ ಸಮೀಕ್ಷೆಯ ಪ್ರಕಟಗೊಂಡಿದ್ದು, ಶಿಗ್ಗಾಂವಿಯಲ್ಲಿ ಎನ್ಡಿಎ ಕೂಟ ಮುನ್ನಡೆ ಸಾಧಿಸಿದ್ದಾಗಿ ಹೇಳಿವೆ.

ಇತ್ತ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ತೆರವಾಗಿದ್ದ ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಡಿತ ಸಾಧಿಸಿದೆ ಎಂದು ಹೇಳಲಾಗಿದೆ. ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕಣದಲ್ಲಿದ್ದರೆ, ಕಾಂಗ್ರೆಸ್ನಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ ನಡೆಸಿದ್ದರು. ಇನ್ನೂ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಭಿನ್ನಮತ ಉಂಟಾಗಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ಕೊನೆಯಲ್ಲಿ ನಾಮಪತ್ರ ಸಲ್ಲಿಸಿ ಮತ್ತೆ ವಾಪಸ್ ಪಡೆದಿದ್ದರು.
ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರ ನಡೆಯಿಂದಾಗಿ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ದಿ ಕಾರ್ಯಗಳನ್ನ ನೀಡಿದ್ದು, ಈ ಎಲ್ಲಾ ಅಂಶಗಳಿಂದ ಈ ಬಾರಿಯ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಹಾಗೂ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರನ್ನ ಶಿಗ್ಗಾಂವಿ ಜನತೆ ಕೈ ಹಿಡಿಯಲಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications