Karnataka By Election: ಕರ್ನಾಟಕ ಉಪಚುನಾವಣೆ; ಮೂರು ಕ್ಷೇತ್ರದಲ್ಲೂ ಇದೇ ಪಕ್ಷದ ಅಭ್ಯರ್ಥಿಗೆ ಗೆಲುವು

ರಾಜ್ಯದಲ್ಲಿ ತೆರವಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದ ಉಪಚುನಾವಣೆ ನವೆಂಬರ್‌ 13 ರಂದು ನಡೆಯಲಿದೆ. ರಾಜ್ಯದಲ್ಲಿ ನಡೆಯಲಿರುವ ಮೂರು ಕ್ಷೇತ್ರದ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದ್ದು, ವಿರೋಧ ಪಕ್ಷದಲ್ಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಆಡಳಿತಾರೂಢ ಕಾಂಗ್ರೆಸ್‌ಗೆ ಈ ಉಪ ಚುನಾವಣೆ ಬಹಳ ಮಹತ್ವದ್ದಾಗಿದೆ.

ರಾಜ್ಯದಲ್ಲಿ ನಡೆಯಲಿರುವ ಮೂರು ಕ್ಷೇತ್ರಗಳಿ ಜಾತಿ ರಾಜಕಾರಣದಿಂದಲೂ ವಿಭಿನ್ನವಾಗಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಡಿ ಕೆ ಬ್ರದರ್ಸ್‌ ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಅಸ್ತಿತ್ವ ಪ್ರಶ್ನೆಯಾಗಿದ್ರೆ, ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಕ್ಷೇತ್ರ ಅಸ್ತಿತ್ವದ ಪ್ರಶ್ನೆಯಾಗಿದೆ. ಇನ್ನೂ ಚನ್ನಪಟ್ಟದಲ್ಲಿ ಒಕ್ಕಲಿಗ ಸಮುದಾಯದವರೇ ನಿರ್ಣಾಯಕವಾಗಿದ್ದು, ಶಿಗ್ಗಾಂವಿಯಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಅಹಿಂದ ಮತದಾರರು ಅಭ್ಯರ್ಥಿಯ ಗೆಲುವನ್ನು ತೀರ್ಮಾನಿಸಲಿದ್ದಾರೆ.

Who Will Win The By-Elections In Three Constituencies In Karnataka

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಬಿಜೆಪಿ, ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಸಂಡೂರ್‌ನಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಬಿಜೆಪಿ- ಜೆಡಿಎಸ್‌ ಮೇಲುಗೈ ಸಾಧಿಸಿರುವ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಗೆದ್ದು ಸೇಡನ್ನು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಕಾಂಗ್ರೆಸ್ ಇದೆ. ಇತ್ತ ಆಡಳಿತರೂಢ ಕಾಂಗ್ರೆಸ್‌ ಠಕ್ಕರ್‌ ಕೊಡಬೇಕು ಎಂದು ಮೂರು ಕ್ಷೇತ್ರವನ್ನ ಗೆಲ್ಲುವ ಕಸರತ್ತನ್ನ ಮೈತ್ರಿ ನಾಯಕರು ನಡೆಸಿದ್ದಾರೆ.

ಚನ್ನಪಟ್ಟಣದ ಗದ್ದುಗೆ ಯಾರಿಗೆ?

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ದಿನದಿಂದಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಾಕಷ್ಟು ಸುದ್ದಿಯಲ್ಲಿದೆ. ಒಕ್ಕಲಿಗೆ ಪ್ರಾಬಲ್ಯದ ಚನ್ನಪಟ್ಟಣ ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಟ್ಟು ಡಿ ಕೆ ಬ್ರದರ್ಸ್ ಚನ್ನಪಟ್ಟಣದಲ್ಲಿ ಹೆಚ್ಚು ಓಡಾಡುತ್ತಿದ್ದು ತೀವ್ರ ಪೈಪೋಟಿ ‌ನಡೆಸಿದ್ದಾರೆ.

ಕಾಂಗ್ರೆಸ್‌ ನಿಂದ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರ ಕಣದಲ್ಲಿ ಅಬ್ಬರದ ಪ್ರಚಾರವನ್ನ ನಡೆಸಿದ್ರೆ, ಇತ್ತ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಸಹ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರವನ್ನ ನಡೆಸಿದ್ದಾರೆ. ಜೆಡಿಎಸ್ ಎರಡು ಬಾರಿ ಸತತವಾಗಿ ಗೆದ್ದಿರುವುದರಿಂದ ಕ್ಷೇತ್ರ ಉಳಿಸಿಕೊಳ್ಳಲೇಬೇಕು ಎಂಬ ತವಕದಲ್ಲಿ ಕುಮಾರಸ್ವಾಮಿ ಅವರು ಕ್ಷೇತ್ರವನ್ನ ಗೆಲ್ಲಲು ಪುತ್ರನನ್ನ ಕಣಕ್ಕಿಳಿಸಿದ್ದಾರೆ.

ಇತ್ತ ಎರಡು ಬಾರಿ ಸೋಲು ಕಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರಿಗೆ ರಾಜಕೀಯ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪಣತೊಟ್ಟಿದ್ದಾರ. ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ ಅವರನ್ನ ಅನುಕಂಪದ ಆಧಾರದ ಮೇಲೆ ಹಾಗೂ ಕುಮಾರಸ್ವಾಮಿ ಅವರ ಅಭಿವೃದ್ಧಿ ಕಾರ್ಯಗಳ ಮೇಲೆ ಚನ್ನಪಟ್ಟಣದ ಜನತೆ ನಿಖಿಲ್‌ ಕುಮಾರಸ್ವಾಮಿ ಅವರ ಕೈ ಹಿಡಿಯಲಿದ್ದಾರೆ ಎನ್ನಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

ಸಂಡೂರು ಶಾಸಕರಾಗಿದ್ದ ಇತುಕಾರಾಂ ಅವರು ಬಳ್ಳಾರಿ ಸಂಸದರಾದ ನಂತರ ತೆರವಾದ ಸ್ಥಾನಕ್ಕೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನವೆಂಬರ್‌ 13 ರಂದು ನಡೆಯುತ್ತಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮ್ಮ ಕುಟುಂಬದವರನ್ನೇ ಕಣಕ್ಕೆ ಇಳಿಸಲು ಇ. ತುಕಾರಾಂ ಅವರು ಅಬ್ಬರದ ಪ್ರಚಾರವನ್ನ ನಡೆಸಿದ್ದಾರೆ.

ಕಾಂಗ್ರೆಸ್ ಭದ್ರ ಕೋಟೆಯಾಗಿರುವ ಸಂಡೂರಿನಲ್ಲಿ ಈವರೆಗೂ ಬಿಜೆಪಿ ಒಮ್ಮೆಯೂ ಗೆಲುವು ಸಾಧಿಸಿಲ್ಲ. ಬಿಜೆಪಿಯಿಂದ ಎಸ್​ಟಿ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಬಂಗಾರು ಹನುಮಂತು ಮತ್ತು ಕಾಂಗ್ರೆಸ್‍ನಿಂದ ಸಂಸದ ತುಕಾರಾಂ ಅವರ ಪತ್ನಿ ಇ. ಅನ್ನಪೂರ್ಣ ಕಣದಲ್ಲಿದ್ದಾರೆ. ಉಭಯ ಪಕ್ಷಗಳ ಅಭ್ಯರ್ಥಿಗಳಿಬ್ಬರು ಮೊದಲ ಬಾರಿ ಚುನಾವಣೆ ಸ್ಪರ್ಧೆಗೆ ಇಳಿದಿದ್ದರಿಂದ ದಿನಗಳು ಕಳೆದಂತೆ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರೀರಾಮುಲು, ಜನಾರ್ದನ ರೆಡ್ಡಿ ಭರ್ಜರಿ ಕಸರತ್ತು ನಡೆಸಿದ್ದಾರೆ.

ಸಂಡೂರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಗಲ ಮೇಲಿದೆ. ಇದಕ್ಕೆ ಪ್ರಮುಖ ಕಾರಣ ಸಂಡೂರು ಕ್ಷೇತ್ರದಲ್ಲಿ ಅಹಿಂದ ಮತದಾರರೇ ಹೆಚ್ಚಿದ್ದಾರೆ. ಅಹಿಂದ ನಾಯಕ ಎನ್ನುವ ಹೆಗ್ಗಳಿಕೆ ಇರುವ ಸಿದ್ದರಾಮಯ್ಯ ಅವರಿಗೆ ಸಂಡೂರು ಮಾತ್ರ ಬಹಳ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಇತ್ತ ಕಳೆದ ಚುನಾವಣೆಯಲ್ಲಿ ಗೆಲುವು ಕಂಡ ಇ ತುಕಾರಾಂ ಅವರು ಹೆಚ್ಚು ಅಭ್ಯರ್ಥಿ ಕೆಲಸಗಳು ಈ ಬಾರಿ ಕೈ ಹಿಡಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಮತಗಳಿಂದಾಗಿ ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಯಾರಿಗೆ ವಿಜಯಮಾಲೆ?

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿಯಲಿದೆ. ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿದ್ದು, ಸ್ವಕ್ಷೇತ್ರವನ್ನ ಗೆಲ್ಲುವ ನಿಟ್ಟಿನಲ್ಲಿ ಬಸವರಾಜ ಬೊಮ್ಮಾಯಿ ಅವರನ್ನ ಭರ್ಜರಿ ಕಸರತ್ತನ್ನ ನಡೆಸಿದ್ದಾರೆ. , ಶಿಗ್ಗಾಂವಿಯಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಈ ಬಾರಿ ಮುಸ್ಲಿಂ ಅಭ್ಯರ್ಥಿಯನ್ನ ಕಣಕ್ಕಿಳಿಸಿದೆ.

ಈ ಕ್ಷೇತ್ರದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಂ ಮತದಾರರೇ ನಿರ್ಣಾಯಕರಾಗಿದ್ದರೂ ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರದಿಂದ ನಿರಂತರವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರ ವಿರುದ್ಧ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಿಲ್ಲುತ್ತಿದ್ದ ಮುಸ್ಲಿಂ ಅಭ್ಯರ್ಥಿಗಳು ಸೋಲು ಕಂಡಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅವರ ವಿರುದ್ಧ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್ ಅವರು ಕೈ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಪದೇ ಪದೇ ಸೋಲು ಅನುಭವಿಸಿರುವ ಕಾಂಗ್ರೆಸ್‌ಗೆ ಹಿಂದೂಗಳಲ್ಲಿ ಪ್ರಬಲ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಿದರೆ ಈ ಬಾರಿ ಮುಸ್ಲಿಂ ಹಾಗೂ ಇತರೆ ಸಮುದಾಯಗಳ ಮತಗಳು ಸಿಕ್ಕು ಗೆಲುವು ಸಾಧ್ಯ ಎಂದ ಲೆಕ್ಕಾಚಾರ ಕಾಂಗ್ರೆಸ್‌ನಲ್ಲಿತ್ತು. ಆದರೆ, ಈ ಬಾರಿಯೂ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದು, ಈ ಬಾರಿ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.

ಒಟ್ನಲಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನವೆಂವರ್‌ 13 ರಂದು ನಡೆಯಲಿದ್ದು, ಮೂರು ಕ್ಷೇತ್ರದಲ್ಲೂ ತೀವ್ರ ಪೈಪೋಟಿ ಜೋರಾಗಿದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಜಟಾಪಟಿ ಏರ್ಪಟಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿರುವ ನಿಖಿಲ್‌ ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಶಿಗ್ಗಾಂವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+