ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು?

|
Google Oneindia Kannada News

Recommended Video

ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? | Oneindia Kannada

ಬೆಂಗಳೂರು, ಫೆಬ್ರವರಿ 12 : ಬೆಂಗಳೂರು ನಗರದಲ್ಲಿ ಹೆಚ್ಚು ಕುತೂಹಲ ಹುಟ್ಟಿಸಿರುವ ಕ್ಷೇತ್ರ ಯಶವಂತಪುರ. ಉತ್ತರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಇದು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಪ್ರತ್ಯೇಕ ಕ್ಷೇತ್ರವಾಯಿತು.

ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರು. ಈ ಬಾರಿಯ ಚುನಾವಣೆಯಲ್ಲಿಯೂ ಸೋಮಶೇಖರ್ ಅವರಿಗೆ ಟಿಕೆಟ್ ಖಚಿತ.

ಪುಟ್ಟಣ್ಣ ಬಿಜೆಪಿ ಸೇರಿದರೆ ಯಶವಂತಪುರದಿಂದ ಸ್ಪರ್ಧೆ?ಪುಟ್ಟಣ್ಣ ಬಿಜೆಪಿ ಸೇರಿದರೆ ಯಶವಂತಪುರದಿಂದ ಸ್ಪರ್ಧೆ?

2008ರಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿ ಗೆದ್ದಿದ್ದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್ ಗೆದ್ದಿದ್ದಾರೆ. 2018ರಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲ ಮೂಡಿಸಿದೆ.

ಆರ್‌.ಆರ್‌.ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಆರ್.ಅಶೋಕ?ಆರ್‌.ಆರ್‌.ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಆರ್.ಅಶೋಕ?

ಕಳೆದ ಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರದಲ್ಲಿ 3ನೇ ಸ್ಥಾನ ಪಡೆದಿತ್ತು. ಜೆಡಿಎಸ್‌ ನಾಯಕ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅವರು ಪಕ್ಷ ಸೇರಿದರೆ ಬಿಜೆಪಿ ಅಭ್ಯರ್ಥಿಯಾಗುವುದು ಖಚಿತ.

ಬಿಟಿಎಂ ಲೇಔಟ್ : ಗೃಹ ಸಚಿವರ ವಿರುದ್ಧ ಯಾರಿಗೆ ಗೆಲುವು?ಬಿಟಿಎಂ ಲೇಔಟ್ : ಗೃಹ ಸಚಿವರ ವಿರುದ್ಧ ಯಾರಿಗೆ ಗೆಲುವು?

ಒಂದು ವೇಳೆ ಬಿಜೆಪಿ ಹೈಕಮಾಂಡ್ ಸಂಸದರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ನೀಡಿದರೆ, ಶೋಭಾ ಕರಂದ್ಲಾಜೆ ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಜೆಡಿಎಸ್‌ಗೆ ಅನುಕಂಪದ ಅಲೆ

ಜೆಡಿಎಸ್‌ಗೆ ಅನುಕಂಪದ ಅಲೆ

2008, 2013ರ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಯಶವಂತಪುರದ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿ ಗೌಡ ಸ್ಪರ್ಧಿಸಿದ್ದರು. ಎರಡು ಬಾರಿಯೂ ಅವರು ಸೋಲು ಕಂಡಿದ್ದಾರೆ. ಈ ಅನುಕಂಪದಿಂದಾಗಿಯೇ ಚುನಾವಣೆಯಲ್ಲಿ ಅವರು ಜಯಗಳಿಸಲಿದ್ದಾರೆಯೇ? ಕಾದು ನೋಡಬೇಕು.

ಕಾಂಗ್ರೆಸ್‌ ಅಭ್ಯರ್ಥಿ ಬದಲಾವಣೆ ಇಲ್ಲ

ಕಾಂಗ್ರೆಸ್‌ ಅಭ್ಯರ್ಥಿ ಬದಲಾವಣೆ ಇಲ್ಲ

ಕಾಂಗ್ರೆಸ್‌ನಿಂದ ಹಾಲಿ ಶಾಸಕ ಎಸ್.ಟಿ.ಸೋಮಶೇಖರ್ ಕಣಕ್ಕಿಳಿಯುವುದು ಖಚಿತವಾಗಿದೆ. ಕ್ಷೇತ್ರದಲ್ಲಿ ಹಲವು ಕೆಲಸಗಳನ್ನು ಅವರು ಮಾಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದರ ಮೇಲೆ ಪೈಪೋಟಿ ನಿರ್ಧಾರವಾಗಲಿದೆ.

ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ?

ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ?

ಜೆಡಿಎಸ್ ನಾಯಕ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಬಿಜೆಪಿ ಸೇರಲಿದ್ದಾರೆ? ಎಂಬ ಸುದ್ದಿ ಹಬ್ಬಿದೆ. ಅವರು ಪಕ್ಷ ಸೇರಿದರೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಟಿಕೆಟ್‌ ಆಕಾಂಕ್ಷಿಗಳು

ಟಿಕೆಟ್‌ ಆಕಾಂಕ್ಷಿಗಳು

ಪುಟ್ಟಣ್ಣ ಅವರು ಪಕ್ಷ ಸೇರದಿದ್ದರೆ ಬಿಡದಿಯ ರುದ್ರೇಶ್, ಯಶವಂತಪುರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಾರೇಗೌಡ ಟಿಕೆಟ್ ಪಡೆಯುವ ಸಾಧ್ಯತೆ ಇದೆ. ಒಂದು ವೇಳೆ ಪಕ್ಷದ ಹೈಕಮಾಂಡ್ ಸಂಸದರಿಗೆ ಟಿಕೆಟ್ ನೀಡಲು ಒಪ್ಪಿದರೆ ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿಯಾಗಲಿದ್ದಾರೆ.

2013ರ ಫಲಿತಾಂಶ

2013ರ ಫಲಿತಾಂಶ

2013ರ ಚುನಾವಣೆಯಲ್ಲಿ ಎಸ್‌.ಟಿ.ಸೋಮಶೇಖರ್ 1,20,380 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್‌ನ ಟಿ.ಎನ್.ಜವರಾಯಿ ಗೌಡ 91,280 ಮತಗಳನ್ನು ಪಡೆದಿದ್ದರು. ಬಿಜೆಪಿಯ ಕೃಷ್ಣಪ್ಪ 12,747 ಮತ ಪಡೆದಿದ್ದರು.

English summary
Who will win Yeshwanthpur assembly constituency, Bengaluru. Congress leader S.T.Somashekar sitting MLA of the constituency. T.N.Javarayi Gowda will contest as JD(S) candidate. Who will get BJP ticket?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X