Siddaramaiah: ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ ರೀ... ನಮ್ಮ ಪಕ್ಷಕ್ಕೆ ಯಾರೇ ಬಂದರು ಸ್ವಾಗತ: ಸಿದ್ದರಾಮಯ್ಯ

ಮೈಸೂರು, ಆಗಸ್ಟ್‌ 28: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ 20 ಕ್ಕೂ ಹೆಚ್ಚು ಸ್ಥಾನಗಳನ್ನ ಪಡೆಯಲು ಮುಂದಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಗಾಳ ಹಾಕಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ಯ ಪಕ್ಷದ ನಾಯಕರಿಗೆ ನೇರವಾಗಿ ಆಹ್ವಾನ ನೀಡಿದ್ದಾರೆ.

ಹೌದು, ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಯಾರೇ ಬಂದರು ಸ್ವಾಗತ. ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ, ನಮ್ಮ ಪಕ್ಷಕ್ಕೆ ಯಾರೇ ಬಂದರು ಸ್ವಾಗತ‌. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಹೇಳಿದ್ದಾರೆ.

Whoever Comes To Our Party Is Welcome Said Chief Minister Siddaramaiah

ಇನ್ನೂ ಈ ವೇಳೆ ರಾಜ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ ರೀ, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ. ಸರ್ಕಾರ ಬಂದು ನೂರು ದಿನ‌ ಆಗಿದೆ ಎಂದು ರಾಜ್ಯ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಪ್ರಧಾನಿ ಬಿಜೆಪಿ ನಾಯಕರನ್ನ ಭೇಟಿ ಮಾಡದ ವಿಚಾರವಾಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿನೇ ಇವರನ್ನ ಭೇಟಿ ಬರಬೇಡಿ ಅಂದಿದ್ರತೆ ಅಂಥ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇನ್ನೂ ರಾಜ್ಯದಲ್ಲಿ ಬರ ವಿಚಾರವಾಗಿ ಮಾತನಾಡಿ, ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯೊಂದ ಯಾವುದೇ ಪ್ರಯೋಜನೆ ಇಲ್ಲ, ಬರಕ್ಕೆ ಬೇಕಾದಂತಹ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಬರ ಪೀಡಿತ ಪ್ರದೇಶ ಘೋಷಣೆ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ದೇಶದಲ್ಲೇ ಗೃಹಲಕ್ಷ್ಮಿ ಯೋಜನೆ ದೊಡ್ಡ ಕಾರ್ಯಕ್ರಮವಾಗಿದೆ. ಈ ವರ್ಷ 18 ಸಾವಿರ ಕೋಟಿ ರೂ. ಖರ್ಚು ಮಾಡ್ತಿದ್ದೇವೆ. ಒಂದು ಕೋಟಿ 33 ಲಕ್ಷ ಕುಟುಂಬಕ್ಕೆ 2 ಸಾವಿರ ರೂ.ಕೊಡ್ತೀವಿ. 'ಗೃಹಲಕ್ಷ್ಮಿ' ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ. ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ನಾಳಿದ್ದು ಅನುಷ್ಠಾ‌ನಗೊಳ್ಳಲಿದೆ. ರಾಜ್ಯದಾದ್ಯಂತ 1.30 ಕೋಟಿ ಕುಟುಂಬದ ಯಜಮಾನಿಯರು ಇದರ ಫಲಾನುಭವಿಗಳಾಗಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಬೆಳಗಾವಿಯಿಂದ ಈ ಕಾರ್ಯಕ್ರಮ ಮೈಸೂರಿಗೆ ಶಿಫ್ಟ್‌ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+