ಕಾಂಗ್ರೆಸ್ ನಲ್ಲಿರುವವರು ತಲೆಹಿಡಿಯುವ ಕೆಲಸ ಮಾಡುತ್ತಾರೆ ಎಂಬ ಕುಮಾರಸ್ವಾಮಿ: ಡಿಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಮೇ 27:ಕಾಂಗ್ರೆಸ್ ನಲ್ಲಿರುವವರು ತಲೆಹಿಡಿಯುವ ಕೆಲಸ ಮಾಡುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಡಿ ಕೆ ಶಿವಕುಮಾರ್‌ ಅವರು ಮಾತನಾಡಿದ್ದು, ಕುಮಾರಸ್ವಾಮಿ ಅವರು ಏನು ಹೇಳಿದ್ದಾರೆ ಎಂಬ ವಿಚಾರವನ್ನು ನಾನು ತಿಳಿದುಕೊಂಡು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಉತ್ತರಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Whosoever has done wrong will be dealt with according to law Says DK Shivakumar

ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ದೇಶಬಿಟ್ಟು ಒಂದು ತಿಂಗಳು ಪೂರೈಸಿದ್ದು, ಎಸ್ಐಟಿ ತನಿಖೆ ಎಲ್ಲಿಯವರೆಗೆ ಬಂದಿದೆ ಎಂಬ ವಿಚಾರವಾಗಿ ಕೇಳಿದಾಗ, "ತನಿಖೆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ದೇಶದ ಒಳಗಾಗದರೆ ರಾಜ್ಯ ಸರ್ಕಾರ ಏನುಬೇಕಾದರೂ ಕ್ರಮಕೈಗೊಳ್ಳಬಹುದು. ವಿದೇಶದ ವಿಚಾರಕ್ಕೆ ಬಂದಾಗ ಕೇಂದ್ರ ಸರ್ಕಾರ ಹೆಚ್ಚು ಕಾರ್ಯಪ್ರವೃತ್ತವಾಗಬೇಕು. ನಮ್ಮ ಗೃಹಸಚಿವರು ಈ ಪ್ರಕರಣ ತನಿಖೆಯನ್ನು ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನೂ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ತೆರಳುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಾತನಾಡಿ, "ಪಕ್ಷದ ಅಧ್ಯಕ್ಷನಾಗಿ ಹೋಗುವುದು ನನ್ನ ಕರ್ತವ್ಯ. ಹೀಗಾಗಿ ಹೋಗುತ್ತೇನೆ ಎಂದು ಹೇಳಿದರು.

ಇನ್ನು ಪ್ರಧಾನಮಂತ್ರಿಗಳು ವಾಸ್ತವ್ಯ ಹೂಡಿದ್ದ ಮೈಸೂರಿನ ಹೊಟೇಲ್ ಬಿಲ್ 85 ಲಕ್ಷ ಮೊತ್ತದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಯಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+