ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆಗೆ ಕಾರಣ ಯಾರು?
ಬೆಂಗಳೂರು, ಜುಲೈ 08 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಿಗಳ ವಿಚಾರದಲ್ಲಿ ಪದೇ-ಪದೇ ಇಕ್ಕಟ್ಟಿಗೆ ಸಿಲುಕುತ್ತಿದೆ. ಒಂದೇ ವಾರದಲ್ಲಿ ಇಬ್ಬರು ಡಿವೈಎಸ್‌ಪಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.
ಅಧಿಕಾರಿಗಳ ಆತ್ಮಹತ್ಯೆಗೆ ವೈಯಕ್ತಿಕ ಕಾರಣವೇ?, ಹಿರಿಯ ಅಧಿಕಾರಿಗಳ ಒತ್ತಡ ಕಾರಣವೇ? ಎಂದು ಚರ್ಚೆ ನಡೆಯುತ್ತಿದೆ. ಆದರೆ, ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕೆಲವು ಅಧಿಕಾರಿಗಳ ಸಾವಿಗೆ ಒತ್ತಡ ಕಾರಣ ಎಂಬುದು ಗುಟ್ಟಾಗಿ ಉಳಿದಿಲ್ಲ. [ಕೊನೆಯಲ್ಲಿ ಡಿವೈಎಸ್ ಪಿ ಗಣಪತಿ ಹೇಳಿದ್ದೇನು?]

ಗುರುವಾರ ಮಂಗಳೂರು ಐಜಿ ಕಚೇರಿ (ಪಶ್ಚಿಮ ವಿಭಾಗ) ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಸ್ಥಳೀಯ ವಾಹಿನಿ ಜೊತೆ ಮಾತನಾಡಿರುವ ಗಣಪತಿ ಅವರು, ಸಾವಿಗೆ ಹಿರಿಯ ಅಧಿಕಾರಿ ಮತ್ತು ಸಚಿವರನ್ನು ದೂಷಿಸಿದ್ದಾರೆ. [ಗಣಪತಿ ಆತ್ಮಹತ್ಯೆ, ಸಚಿವ ಜಾರ್ಜ್ ಹೇಳುವುದೇನು?]
ಜುಲೈ 5ರ ಮಂಗಳವಾರ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡಿದ್ದರು.
ಕಳೆದ ತಿಂಗಳು ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದರು. ತಮ್ಮ ರಾಜೀನಾಮೆಗೆ ಅಧಿಕಾರಿಗಳು ಮತ್ತು ರಾಜಕೀಯ ನಾಯಕರ ಕಿರುಕುಳ ಕಾರಣ ಎಂದು ಆರೋಪಿಸಿದ್ದರು. [ಚಿಕ್ಕಮಗಳೂರು DySP ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ]
ಸರ್ಕಾರದ ವರ್ತನೆ ಬದಲಾಗಬೇಕು : ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅದು ವೈಯಕ್ತಿಕ ಕಾರಣದಿಂದ ಎಂಬ ತೀರ್ಮಾನಕ್ಕೆ ಸರ್ಕಾರ ಬಂದು ಬಿಡುತ್ತದೆ. 2015ರಲ್ಲಿ ಐಎಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಮಾಡಿಕೊಂಡಾಗ ಸರ್ಕಾರ ವೈಯಕ್ತಿಕ ಕಾರಣ ಎಂದು ಘೋಷಣೆ ಮಾಡಿಬಿಟ್ಟಿತ್ತು.
ಅನುಪಮಾ ಶೆಣೈ ರಾಜೀನಾಮೆ ವಿಚಾರದಲ್ಲಿಯೂ ಸರ್ಕಾರ ಇದೇ ನೀತಿ ಅನುಸರಿಸಿತು. ಸಾಮಾಜಿಕ ಜಾಲ ತಾಣದಲ್ಲಿ ಸರ್ಕಾರದ ವಿರುದ್ಧ ಅವರು ಸಾಕಷ್ಟು ಆರೋಪಗಳನ್ನು ಮಾಡಿದರು. ಆದರೆ, ಸರ್ಕಾರ ಯಾವುದಕ್ಕೂ ಪ್ರತಿಕ್ರಿಯೆ ನೀಡಲಿಲ್ಲ. [ಶೆಣೈ ಆರೋಪದಲ್ಲಿ ಹುರುಳಿಲ್ಲ, ತನಿಖೆಗೆ ಸಿದ್ಧ : ಬಳ್ಳಾರಿ ಎಸ್ಪಿ]
ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೆ ಮುನ್ನ ವಾಹಿನಿಯೊಂದರ ಜೊತೆ ಮಾತನಾಡಿ ಹಿಂದೆ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರ ಕಿರುಕುಳವೂ ನನ್ನ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ. ಸಿಐಡಿ ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ತನಿಖೆ ನಡೆಸುವ ಅಧಿಕಾರಿಗಳು ಈ ನಿಟ್ಟಿನಲ್ಲಿಯೂ ತನಿಖೆ ನಡೆಸಬೇಕಿದೆ.
ಗಣಪತಿ ಅವರ ಹೇಳಿಕೆ ವಿಡಿಯೋ
ಅಧಿಕಾರಿಗಳು ಒತ್ತಡ ಬರುತ್ತಿದೆ ಎಂದು ದೂರು ಕೊಟ್ಟರೆ ಸರ್ಕಾರ ತಕ್ಷಣ ಸ್ಪಂದಿಸುವುದಿಲ್ಲ ಎಂಬುದು ಕೆಲವು ಅಧಿಕಾರಿಗಳ ಆರೋಪ. ರಾಜಕೀಯ ವ್ಯಕ್ತಿಗಳಿಂದ ಒತ್ತಡ ಬರುತ್ತಿದೆ ಎಂದರೆ ಸರ್ಕಾರ ಅದನ್ನು ಪರಿಗಣಿಸುತ್ತಿಲ್ಲ. ಇದರಿಂದಾಗಿ ಕೆಲವರು ರಾಜೀನಾಮೆ ಮತ್ತು ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುತ್ತಾರೆ ಕೆಲವು ಅಧಿಕಾರಿಗಳು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications