ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಬೂರಾವ್ ಚಿಂಚನಸೂರು ಬಿಜೆಪಿಗೆ, ಖರ್ಗೆ ಸೋಲಿಸಲು ತಂತ್ರ!

By Gururaj
|
Google Oneindia Kannada News

Recommended Video

ಮಲ್ಲಿಕಾರ್ಜುನ ಖರ್ಗೆಯವರನ್ನ ಸೋಲಿಸಲು ಬಿಜೆಪಿ ತಂತ್ರ | ಬಾಬೂರಾವ್ ಚಿಂಚನಸೂರು ಬಿಜೆಪಿಗೆ | Oneindia Kannada

ಬೆಂಗಳೂರು, ಆಗಸ್ಟ್ 30 : ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಬಿಜೆಪಿ ಸೇರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಇದರು ಮಹತ್ವದ ಬೆಳವಣಿಗೆಯಾಗಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಬಿಜೆಪಿಗೆ, ಖರ್ಗೆ ವಿರುದ್ಧ ಸ್ಪರ್ಧೆ?ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಬಿಜೆಪಿಗೆ, ಖರ್ಗೆ ವಿರುದ್ಧ ಸ್ಪರ್ಧೆ?

2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಾಬೂರಾವ್ ಚಿಂಚನಸೂರು ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಿರಿಯ ನಾಯಕನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ಏಕೆ? ಎಂಬುದು ಹಲವರ ಪ್ರಶ್ನೆ.

ಕಾಂಗ್ರೆಸ್ ತೊರೆದ ಕಾರಣ ಬಿಚ್ಚಿಟ್ಟ ಬಾಬೂರಾವ್ ಚಿಂಚನಸೂರು!ಕಾಂಗ್ರೆಸ್ ತೊರೆದ ಕಾರಣ ಬಿಚ್ಚಿಟ್ಟ ಬಾಬೂರಾವ್ ಚಿಂಚನಸೂರು!

ಕೋಲಿ ಸಮಾಜಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಹೈದರಾಬಾದ್-ಕರ್ನಾಟಕ ಭಾಗದ ಪ್ರಮುಖ ನಾಯಕರು. ಮಾಲೀಕಯ್ಯ ಗುತ್ತೇದಾರ್ ಮತ್ತು ಬಾಬೂರಾವ್ ಚಿಂಚನಸೂರು ಅವರು ಕಾಂಗ್ರೆಸ್ ಪಕ್ಷ ತೊರೆದಿರುವುದು ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವುದಂತೂ ಖಚಿತ.

ಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳುಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳು

2008, 2013ರ ಚುನಾವಣೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದಿದ್ದ ಬಾಬೂರಾವ್ ಚಿಂಚನಸೂರು ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು ಆಗಿದ್ದರು. ಆದರೆ, 2018ರ ಚುನಾವಣೆಯಲ್ಲಿನ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಬಾಬೂರಾವ್ ಚಿಂಚನಸೂರು ಅವರು ಆರೋಪ ಮಾಡುತ್ತಿದ್ದಾರೆ.

ಬಿಜೆಪಿಗೆ ಚಿಂಚನಸೂರು ಸೇರಿದ್ದೇಕೆ?

ಬಿಜೆಪಿಗೆ ಚಿಂಚನಸೂರು ಸೇರಿದ್ದೇಕೆ?

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಬಾಬೂರಾವ್ ಚಿಂಚನಸೂರು ಅವರು, 'ನನ್ನ ಆಸೆ ಎರಡೇ ಒಂದು ಗುರುಮಿಠಕಲ್ ಜನರ ಸೇವೆ ಮಾಡುವುದು, ಮತ್ತೊಂದು ನಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು' ಅದಕ್ಕಾಗಿ ಬಿಜೆಪಿ ಸೇರಿದ್ದೇನೆ ಎಂದು

ಕೋಲಿ ಸಮುದಾಯಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ಬಿಜೆಪಿಗೆ ಹೇಗೆ ಸಹಾಯಕವಾಗಲಿದೆ? ಎಂಬ ಚರ್ಚೆ ಆರಂಭವಾಗಿದೆ. ಬಾಬೂರಾವ್ ಚಿಂಚನಸೂರು ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ತಂತ್ರ ರೂಪಿಸಿದೆ.

ಬಾಬೂರಾವ್ ಚಿಂಚನಸೂರು

ಬಾಬೂರಾವ್ ಚಿಂಚನಸೂರು

ಕೋಲಿ ಸಮಾಜಕ್ಕೆ ಸೇರಿದ ಬಾಬೂರಾವ್ ಚಿಂಚನಸೂರು ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಎಂದು ಹೆಸರುಗಳಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.


ಗುರುಮಿಠಕಲ್, ಚಿತ್ತಾಪುರ ಭಾಗದಲ್ಲಿ ಕೋಲಿ ಸಮುದಾಯದ ಮತಗಳು ಸಾಕಷ್ಟಿವೆ. ಅವುಗಳನ್ನು ಸೆಳೆದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಬೇಕು ಎಂಬುದು ಬಿಜೆಪಿಯ ತಂತ್ರವಾಗಿದೆ.

ರಾಷ್ಟ್ರಮಟ್ಟದಲ್ಲಿ ಮುಜುಗರ

ರಾಷ್ಟ್ರಮಟ್ಟದಲ್ಲಿ ಮುಜುಗರ

ಮಲ್ಲಿಕಾರ್ಜುನ ಖರ್ಗೆ ಅವರು 9 ಬಾರಿ ವಿಧಾನಸಭೆಗೆ ಮತ್ತು 2 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕರು ಅವರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ತಂದಂತೆ ಆಗುತ್ತದೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ರಾಷ್ಟ್ರಮಟ್ಟದ ನಾಯಕನನ್ನು ಸೋಲಿಸಿದಂತೆ ಆಗುತ್ತದೆ. ಆದ್ದರಿಂದ, ಬಾಬೂರಾವ್ ಚಿಂಚನಸೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಖರ್ಗೆ ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.

ಇಬ್ಬರು ಪ್ರಭಾವಿ ನಾಯಕರು ಬಿಜೆಪಿಗೆ

ಇಬ್ಬರು ಪ್ರಭಾವಿ ನಾಯಕರು ಬಿಜೆಪಿಗೆ

ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್, ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕ ಬಾಬೂರಾವ್ ಚಿಂಚನಸೂರು ಅವರು ಬಿಜೆಪಿ ಸೇರಿದ್ದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ.

ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ಅದರ ಪ್ರಭಾವ ಬೇರೆ ಜಿಲ್ಲೆಗಳ ಮೇಲೂ ಪರಿಣಾಮ ಬೀರಬಹುದು. ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಯಾರು? ಎಂಬುದರ ಮೇಲೆ ಸೋಲು-ಗೆಲುವು ನಿರ್ಧಾರವಾಗಲಿದೆ.

ಕಳೆದ ಬಾರಿ ಸೋತಿದ್ದರು

ಕಳೆದ ಬಾರಿ ಸೋತಿದ್ದರು

2014ರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬಿಜೆಪಿ ಅಭ್ಯರ್ಥಿಯಾಗಿ ರೇವು ನಾಯಕ್ ಬೆಳಮಗಿ ಸ್ಪರ್ಧಿಸಿದ್ದರು. 432,460 ಮತಗಳನ್ನು ಪಡೆದು ಸೋಲು ಕಂಡಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ರೇವು ನಾಯಕ್ ಬೆಳಮಗಿ ಜೆಡಿಎಸ್ ಸೇರಿದ್ದರು. ಆದ್ದರಿಂದ, ಈ ಬಾರಿ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

English summary
Former Congress leader and Minister Baburao Chinchansur from Yadgiri district joined the BJP. Why Baburao Chinchansur joined BJP here are the reasons.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X