Siddaramaiah: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್​ರನ್ನು ಆಹ್ವಾನಿಸಿದ್ದೇಕೆ: ಮೌನಮುರಿದ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 31: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ.

Why Banu Mushtaq Invited for Dasara Inauguration Here s Siddaramaiah Clarification

ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ಧರ್ಮ ಧರ್ಮಾಂಧರು ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು.

ಜನ ಸಾಹಿತ್ಯ ಸಮ್ಮೇಳನದಲ್ಲಿ ನಾನು ಮುಷ್ತಾಕ್ ಅವರು ಕನ್ನಡ ತಾಯಿಯ ಬಗ್ಗೆ ಗೌರವವಿಲ್ಲದೆ ಮಾತನಾಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಕನ್ನಡದಲ್ಲಿ ಬರೆಯುತ್ತಾರೆಯೇ ಎಂದರು.

ಎದೆಯ ಹಣತೆ ಭಾಷಾಂತರ ಮಾಡಿದ ದೀಪಾ ಭಾಸ್ತಿಯವರಿಗೂ ಅರಮನೆಯ ಮುಂದೆ ಗೌರವ ಸಲ್ಲಿಸಬೇಕಿತ್ತು ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಸರ್ಕಾರ ಈಗಾಗಲೇ ದೀಪಾ ಭಾಸ್ತಿ ಹಾಗೂ ಭಾನು ಮುಸ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂಗಳನ್ನು ನೀಡಿ ಇಬ್ಬರನ್ನು ಸರ್ಕಾರ ಸನ್ಮಾನಿಸಿ, ಗೌರವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಎಸ್ ಐ.ಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ. ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್ ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ವಿಪಕ್ಷಗಳು ಕೂಡ ಇದನ್ನು ಸ್ವಾಗತಿಸಿದ್ದರು ಎಂದರು.

ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ.

2017 ರಲ್ಲಿ ಜಿಎಸ್ ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು 12% ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದರು.

ಜಿಎಸ್‌ಟಿ ವಿಚಾರವಾಗಿ ರಾಜ್ಯದ ಸಚಿವರು ಹಾಗೂ ಸಂಸದರು ನಿಯೋಗ ತರಳಲಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ವಿಪಕ್ಷಗಳ ಸಂಸದರು ಎಂದಿಗೂ ಇದನ್ನು ಒತ್ತಾಯಿಸುವುದಿಲ್ಲ. ಕರ್ನಾಟಕಕ್ಕೆ 11950 ಕೋಟಿಗಳು ನಷ್ಟವಾಯಿತು. ವಿಪಕ್ಷಗಳ ಸಂಸದರು ಈ ಬಗ್ಗೆ ಮಾತನಾಡಿಯೇ ಇಲ್ಲ. ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದ್ದಾರೆ. ಆದರೆ ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಯಾವಾಗ ಮಾತನಾಡಿದ್ದಾರೆ? ಧರ್ಮಸ್ಥಳದ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಧರ್ಮಸ್ಥಳದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂಬ ಒತ್ತಾಯವಿರುವ ಬಗ್ಗೆ ಮಾತನಾಡಿ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದರು. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದರು. ತನಿಖೆ ನಡೆಯುವಾಗ ಎಲ್ಲಾ ಪಕ್ಷಗಳು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿ ಧರ್ಮದ ಪರವಾಗಿ ಯಾತ್ರೆ ಮಾಡುತ್ತಿದ್ದು, ದೂರಿನ ಆಧಾರದ ಮೇಲೆ ಸತ್ಯವನ್ನು ತಿಳಿಯಬೇಕಾಗಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+