ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲ ಪಟ್ಟಿಯಲ್ಲಿ ರಾಜ್ಯದ ಏಳು ಕ್ಷೇತ್ರಗಳ ಬಿಟ್ಟ ಬಿಜೆಪಿ, ಕಾರಣವೇನು?

|
Google Oneindia Kannada News

Recommended Video

Lok Sabha Elections 2019 : ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಈ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿಲ್ಲ

ಬೆಂಗಳೂರು, ಮಾರ್ಚ್ 22: ಲೋಕಸಭೆ ಚುನಾವಣೆ 2019ಗೆ ಬಿಜೆಪಿಯು 184 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಗುರುತಿಸಲಾಗಿದೆ. ಉಳಿದ ಏಳು ಕ್ಷೇತ್ರಗಳ ಬಗ್ಗೆ ಚರ್ಚೆ ಇನ್ನೂ ನಡೆಯುತ್ತಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಚಿಕ್ಕೋಡಿ, ಕೊಪ್ಪಳ, ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿಲ್ಲ. ಪ್ರಸ್ತುತ ಬಿಡುಗಡೆ ಆಗಿರುವ ಪಟ್ಟಿಯಲ್ಲಿ 21 ಕ್ಷೇತ್ರಗಳಿಗಷ್ಟೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ

ಉಳಿದ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಕೆಲವು ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಲಾಭಿ ನಡೆಯುತ್ತಿದ್ದರೆ, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಹೈಕಮಾಂಡ್ ಸ್ವತಃ ಗೊಂದಲದಲ್ಲಿದೆ.

ಮಂಡ್ಯದಲ್ಲಿ ಸುಮಲತಾ ಗೆ ಬೆಂಬಲ?

ಮಂಡ್ಯದಲ್ಲಿ ಸುಮಲತಾ ಗೆ ಬೆಂಬಲ?

ಮಂಡ್ಯ ಕ್ಷೇತ್ರದಲ್ಲಿ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯು ಬೆಂಬಲ ಸೂಚಿಸುವ ಸಾಧ್ಯತೆ ದಟ್ಟವಾಗಿದೆ. ಯಡಿಯೂರಪ್ಪ ಅವರು ಸಹ ಇದರ ಬಗ್ಗೆ ಉತ್ಸುಕರಾಗಿದ್ದಾರೆ ಹಾಗಾಗಿಯೇ ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು?

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು?

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಟಿಕೆಟ್ ನೀಡಬಹುದೆಂಬ ಲೆಕ್ಕಾಚಾರವಿತ್ತು, ಬೆಂ.ಗ್ರಾಮಾಂತರ ಕ್ಷೇತ್ರವು ಡಿಕೆ.ಸುರೇಶ್ ಅವರ ಕ್ಷೇತ್ರವಾಗಿದ್ದು, ಅವರ ವಿರುದ್ಧ ಸೆಣೆಸಲು ಶಕ್ತ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ. ಚೆನ್ನಪಟ್ಟಣದ ಯೋಗೀಶ್ವರ್ ಅವರನ್ನು ಸಹ ಪರಿಗಣಿಸಲಾಗಿದೆ.

ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಯುವ ಅಭ್ಯರ್ಥಿ?

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಯುವ ಅಭ್ಯರ್ಥಿ?

ಬೆಂಗಳೂರು ದಕ್ಷಿಣ ಕ್ಷೇತ್ರವು ದಿವಂಗತ ಅನಂತ್‌ಕುಮಾರ್ ಅವರ ಕ್ಷೇತ್ರವಾಗಿದೆ. ಇಲ್ಲಿ ಅವರ ಪತ್ನಿ ತೇಜಸ್ವಿನಿ ಅನಂತ್‌ ಕುಮಾರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ರಾಜ್ಯ ಮುಖಂಡರು ನಿರ್ಧರಿಸಿದ್ದಾರೆ. ಆದರೆ ಹೈಕಮಾಂಡ್ ಇದಕ್ಕೆ ಇನ್ನೂ ಒಪ್ಪಿಗೆ ನೀಡಿಲ್ಲ, ಯುವಕರೊಬ್ಬರನ್ನು ಈ ಕ್ಷೇತ್ರದಿಂದ ಪರಿಚಯಿಸಬೇಕು ಎಂಬುದು ಹೈಕಮಾಂಡ್ ನಿಲವಾಗಿದೆ ಎನ್ನಲಾಗಿದೆ.

ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?

ಕೋಲಾರ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿ ಇಲ್ಲ

ಕೋಲಾರ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿ ಇಲ್ಲ

ಸತತ ಏಳು ಬಾರಿ ಗೆದ್ದಿರುವ ಕೆ.ಎಚ್.ಮುನಿಯಪ್ಪ ಅವರು ಕಾಂಗ್ರೆಸ್‌ ನ ಅಭ್ಯರ್ಥಿ. ಇಲ್ಲಿ ಸ್ಥಳೀಯ ಬಿಜೆಪಿ ಅಭ್ಯರ್ಥಿ ಇಲ್ಲ. ಆದರೆ ಪ್ರಸ್ತುತ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಕೆ.ಎಚ್.ಮುನಿಯಪ್ಪ ವಿರುದ್ಧ ತಿರುಗಿಬಿದ್ದಿರುವ ಕಾರಣ ಕೈ ಅಭ್ಯರ್ಥಿ ಅಂತಿಮವಾದ ಬಳಿಕ ಹೊರಗಿನಿಂದ ಅಭ್ಯರ್ಥಿಯೊಬ್ಬರನ್ನು ಕರೆತಂದು ಇಲ್ಲಿಂದ ಟಿಕೆಟ್ ನೀಡುವ ಬಗ್ಗೆ ರಾಜ್ಯ ನಾಯಕರು ಚಿಂತಿಸುತ್ತಿದ್ದಾರೆ.

ಕೆಎಚ್ ಮುನಿಯಪ್ಪ ವಿರುದ್ಧ ಸ್ಪೀಕರ್ ರಮೇಶ್ ಕುಮಾರ್ ರಿಂದ ಎಂಥ ಮಾತು!ಕೆಎಚ್ ಮುನಿಯಪ್ಪ ವಿರುದ್ಧ ಸ್ಪೀಕರ್ ರಮೇಶ್ ಕುಮಾರ್ ರಿಂದ ಎಂಥ ಮಾತು!

ಚಿಕ್ಕೋಡಿ ಕ್ಷೇತ್ರದಲ್ಲಿ ಟಿಕೆಟ್‌ಗೆ ಲಾಭಿ

ಚಿಕ್ಕೋಡಿ ಕ್ಷೇತ್ರದಲ್ಲಿ ಟಿಕೆಟ್‌ಗೆ ಲಾಭಿ

ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಪಡೆಯಲು ಮೂವರು ಬಿಜೆಪಿ ಮುಖಂಡರ ನಡುವೆ ಭಾರಿ ಲಾಭಿ ನಡೆದಿದೆ, ಹೀಗಾಗಿ ಈ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿಲ್ಲ. ಚಿಕ್ಕೋಡಿಯಲ್ಲಿ ಬಿಜೆಪಿಯು ಕಳೆದ ಚುನಾವಣೆಯಲ್ಲಿ ಸೋತಿದ್ದು, ಸೋತ ಅಭ್ಯರ್ಥಿ ರಮೇಶ್ ಕತ್ತಿ ಅವರು ಟಿಕೆಟ್‌ ಗಾಗಿ ಯತ್ನಿಸುತ್ತಿದ್ದಾರೆ. ಜೊತೆಗೆ ಲಕ್ಷ್ಮಣ್ ಸವಧಿ ಹಾಗೂ ಅಣ್ಣಾ ಸಾಹೇಬ್ ಜೊಲ್ಲೆ ಅವರೂ ಸಹ ಟಿಕೆಟ್‌ಗಾಗಿ ಯತ್ನಿಸುತ್ತಿದ್ದಾರೆ.

ಕರ್ನಾಟಕ ಸಂಸದರಿಗೆ ಅನುದಾನ ಸಿಕ್ಕಿದ್ದೆಷ್ಟು, ಅವರು ಕ್ಷೇತ್ರದಲ್ಲಿ ಖರ್ಚು ಮಾಡಿದ್ದೆಷ್ಟು, ಉಳಿಸಿಕೊಂಡಿದ್ದೆಷ್ಟು?

ಕೊಪ್ಪಳ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು?

ಕೊಪ್ಪಳ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು?

ಸಂಗಣ್ಣ ಕರಡಿ ಅವರು ಕೊಪ್ಪಳ ಕ್ಷೇತ್ರದ ಹಾಲಿ ಬಿಜೆಪಿ ಸಂಸದರಾಗಿದ್ದಾರೆ. ಮೊದಲ ಪಟ್ಟಿಯಲ್ಲಿ ಕೊಪ್ಪಳದ ಅಭ್ಯರ್ಥಿ ಹೆಸರು ಘೋಷಣೆ ಮಾಡದೇ ಇರುವುದು ಸಂಗಣ್ಣ ಅವರಿಗೆ ಟಿಕೆಟ್ ತಪ್ಪುತ್ತದೆಯೇ ಎಂಬ ಅನುಮಾನ ಮೂಡಿಸಿದೆ. ಕೊಪ್ಪಳ ಟಿಕೆಟ್ ಗಾಗಿ ಬಿಜೆಪಿಯ ಡಾ.ಬಸವರಾಜ, ವಿರುಪಾಕ್ಷ ಸಿಂಗನಾಳ, ಸಿ.ವಿ.ಚಂದ್ರಶೇಖರ್ ಅವರು ಲಾಭಿ ಮಾಡುತ್ತಿದ್ದಾರೆ.

ರಾಯಚೂರಿನಲ್ಲಿ ಶಕ್ತ ಅಭ್ಯರ್ಥಿಗೆ ಹುಡುಕಾಟ

ರಾಯಚೂರಿನಲ್ಲಿ ಶಕ್ತ ಅಭ್ಯರ್ಥಿಗೆ ಹುಡುಕಾಟ

ರಾಯಚೂರು ಕ್ಷೇತ್ರದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 1499 ಮತಗಳ ಅತ್ಯಲ್ಪ ಅಂತರದಿಂದ ಸೋಲನ್ನಪ್ಪಿದೆ. ಹಾಗಾಗಿ ಈ ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲೇ ಬೇಕು ಎಂಬ ಛಲದಲ್ಲಿರುವ ಬಿಜೆಪಿ ಶಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.

English summary
BJP releases its first candidate list of 184 members for Lok sabha elections 2019. High command announce only 21 constituency candidates. Total 28 constituency is there in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X