ಜೇಮ್ಸ್ ಚಿತ್ರ ನಿಲ್ಲಿಸಿ ಸಾಕು; ರಾಜ್ಯದಲ್ಲಿ ಹೀಗೆ ಹೇಳುತ್ತಿದ್ದಾರಾ ಬಿಜೆಪಿಯವರು!?
ಬೆಂಗಳೂರು, ಮಾರ್ಚ್ 22: ಕರ್ನಾಟಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟಿಸಿರುವ ಜೇಮ್ಸ್ ಸಿನಿಮಾ ಸಖತ್ ಹಿಟ್ ಆಗಿ ಓಡುತ್ತಿದೆ. ಇದರ ಮಧ್ಯೆ ಆ ಸಿನಿಮಾವನ್ನು ಥಿಯೇಟರ್ ನಿಂದ ತೆಗೆಯುವಂತೆ ಬಿಜೆಪಿ ಶಾಸಕರು ಹಾಗೂ ಕೆಲವೆಡೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಧಾನಸೌಧದ ಮೊಗಸಾಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕಾಗಿ ಜೇಮ್ಸ್ ಸಿನಿಮಾದ ವಿರುದ್ಧ ಬಿಜೆಪಿ ನಾಯಕರು ಹುನ್ನಾರ ನಡೆಸುತ್ತಿದ್ದಾರೆ ಎಂದು ದೂಷಿಸಿದರು.
"ನಿನ್ನೆ ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ನನ್ನನ್ನು ಭೇಟಿಯಾಗಿದ್ದರು. ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು, ಕಾರ್ಯಕರ್ತರು ಜೇಮ್ಸ್ ಚಿತ್ರ ಪ್ರದರ್ಶನ ನಡೆಯುತ್ತಿರುವ ಸಿನೆಮಾ ಮಂದಿರಕ್ಕೆ ಹೋಗಿ ನೀವು ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕಿ ಎಂದು ಒತ್ತಡ ಹೇರುತ್ತಿದ್ದಾರೆ. ಕೆಲವೆಡೆ ಜೇಮ್ಸ್ ಚಿತ್ರ ಪ್ರದರ್ಶನವನ್ನೂ ನಿಲ್ಲಿಸಿದ್ದಾರೆ. ಅದೇ ರೀತಿ ಇನ್ನೂ ಹಲವಾರು ಕಡೆ ಒತ್ತಡ ಹಾಕುತ್ತಿದ್ದಾರೆ ಎಂದು ನೋವು ತೋಡಿ ಕೊಂಡರು," ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ
"ಜೇಮ್ಸ್ ನಿರ್ಮಾಪಕರು ಚಿತ್ರ ಬಿಡುಗಡೆಗೂ ಮೊದಲೇ ಚಿತ್ರಮಂದಿರಗಳನ್ನು ಬುಕ್ ಮಾಡಿಕೊಂಡಿದ್ದರು. ಅಲ್ಲದೇ ಮುಂಗಡ ಹಣ ಪಾವತಿಸಿ ಬಿಡುಗಡೆ ಮಾಡಿದ್ದರು. ಈಗ ಬಿಜೆಪಿಯವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಾಗಿ ಜೇಮ್ಸ್ ಚಿತ್ರ ನಿಲ್ಲಿಸಿ ಎಂದು ಬಲವಂತ ಮಾಡುತ್ತಿರುವುದು ದೌರ್ಜನ್ಯ," ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಟ ಪುನೀತ್ ರಾಜಕುಮಾರ್ ಚಿತ್ರ ವೀಕ್ಷಣೆಗೆ ಅಭಿಮಾನಿಗಳು ಕಾತರ
ಸ್ಯಾಂಡಲ್‌ವುಡ್ ನಟ ಪುನೀತ್ ರಾಜಕುಮಾರ್ ಒಬ್ಬ ಸಮಾಜಮುಖಿ, ಪ್ರತಿಭಾನ್ವಿತರಾಗಿದ್ದವರು. ರಾಜ್ಯದಲ್ಲಿ ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರ ಕೊನೆ ಚಿತ್ರವನ್ನು ವೀಕ್ಷಿಸಬೇಕು ಎಂದು ಎಲ್ಲಾ ಅಭಿಮಾನಿಗಳಿಗೆ ಆಸೆ ಇದೆ. ಹೀಗಿರುವಾದಗ ಜೇಮ್ಸ್ ಚಿತ್ರ ತೆಗೆಸುತ್ತಿರುವ ಬಿಜೆಪಿ ಶಾಸಕರ ಯತ್ನಕ್ಕೆ ನನ್ನ ವಿರೋಧವಿದೆ. ಬಿಜೆಪಿಯವರು ತಮ್ಮನ್ನು ಸಜ್ಜನರು ಎಂದು ಹೇಳಿಕೊಂಡು ಇಂಥಾ ದೌರ್ಜನ್ಯದ ಕೆಲಸವನ್ನೇ ಮಾಡುತ್ತಿದ್ದಾರೆ. ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿರುವ ಶಾಸಕರ ಜೊತೆ ನಾನು ಮಾತನಾಡ್ತೇನೆ. ಯಾವೆಲ್ಲಾ ಟಾಕೀಸುಗಳು ಬುಕ್ ಆಗಿವೆ ಅಲ್ಲಿ ಸಿನಿಮಾ ತೋರಿಸಿ ಎಂದು ನಿಸಿಮಾ ನಿರ್ಮಾಪಕರಿಗೆ ಹೇಳಿದ್ದೇನೆ," ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜನರ ಮೇಲೆ ಕಾಶ್ಮೀರ್ ಫೈಲ್ ನೋಡುವಂತೆ ಒತ್ತಡ
"ರಾಜ್ಯದಲ್ಲಿ ಆಸಕ್ತಿ ಇದ್ದವರು ಕಾಶ್ಮೀರಿ ಫೈಲ್ಸ್ ಸಿನಿಮಾ ನೋಡಲಿ, ನಮ್ಮದೇನು ವಿರೋಧ ಇಲ್ಲ. ಆದರೆ ಒಂದು ಸಿನಿಮಾ ಸ್ಥಗಿತಗೊಳಿಸಿ ಇನ್ನೊಂದು ಚಿತ್ರ ನೋಡಿ ಎಂದು ಜನರ ಮೇಲೆ ಒತ್ತಡ ಹಾಕುವುದು ಸರಿಯಲ್ಲ. ಈ ಹಿಂದೆ ಮಹಾತ್ಮ ಗಾಂಧಿ ಕುರಿತಾದ ಸಿನೆಮಾ ಬಂದಿತ್ತು, ಸಾಮಾಜಿಕ ಕಳಕಳಿಯ ಜೈ ಭೀಮ್ ಸಿನಿಮಾ ಬಂತು. ನಾವು ಯಾರಾದರೂ ಇತರರ ಮೇಲೆ ಸಿನಿಮಾ ನೋಡುವಂತೆ ಒತ್ತಡ ಹಾಕಿದ್ದೀವಾ?, ಆಸಕ್ತಿ ಇದ್ದವರು ನೋಡುತ್ತಾರೆ," ಎಂದರು.

ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕಿತ್ತು ಎಂದ ಸಿದ್ದರಾಮಯ್ಯ
"ಕರ್ನಾಟಕದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಪುನೀತ್ ರಾಜಕುಮಾರ್ ಅಭಿನಯಿಸಿದ ಕೊನೆಯ ಚಿತ್ರ ಜೇಮ್ಸ್. ರಾಜ್ಯದಲ್ಲಿ ಈ ಚಿತ್ರಕ್ಕೂ ಸರ್ಕಾರದಿಂದ ತೆರಿಗೆ ವಿನಾಯಿತಿ ನೀಡಬೇಕಿತ್ತು. ಇನ್ನಾದರೂ ಜೇಮ್ಸ್ ಚಿತ್ರದ ಮೇಲಿನ ತೆರಿಗೆಗೆ ವಿನಾಯಿತಿ ನೀಡಿ ಹೆಚ್ಚು ಹೆಚ್ಚು ಜನರು ಸಿನಿಮಾ ನೋಡುವುದಕ್ಕೆ ಸರ್ಕಾರ ಅವಕಾಶ ನೀಡಬೇಕು," ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications