ಬಿಜೆಪಿಯ ಅಧಿಕಾರದಾಹದ ಬಗ್ಗೆ ಪ್ರಶ್ನಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು, ಜುಲೈ 22 : ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲಿನ ಚರ್ಚೆ ಸೋಮವಾರವೂ ಮುಂದುವರೆದಿದೆ. ಚರ್ಚೆಯ ನಡುವೆಯೇ ಕಾಂಗ್ರೆಸ್ ಸದಸ್ಯರು ಆಪರೇಷನ್ ಕಮಲದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಆಪರೇಷನ್ ಕಮಲದ ವಿಚಾರವನ್ನು ಪ್ರಸ್ತಾಪಿಸಿದರು. ಬಿಜೆಪಿ ನಾಯಕರು ಶಾಸಕರ ರಾಜೀನಾಮೆ ಹಿಂದೆ ಇದ್ದಾರೆ ಎಂಬ ಮಾಧ್ಯಮಗಳ ವರದಿಗಳನ್ನು ಪ್ರಸ್ತಾಪಿಸಿದರು.

Why BJP not accepting it wants the chair asks DK Shivakumar

ಸಚಿವ ಡಿ. ಕೆ. ಶಿವಕುಮಾರ್ ಮಾತನಾಡಿ, "ತಮಗೆ ಕುರ್ಚಿ ಬೇಕು ಎಂಬುದನ್ನು ಬಿಜೆಪಿ ನಾಯಕರು ಏಕೆ ಒಪ್ಪಿಕೊಳ್ಳುತ್ತಿಲ್ಲ. ಆಪರೇಷನ್ ಕಮಲದ ಹಿಂದೆ ನಾವಿದ್ದೇವೆ ಎಂಬುದನ್ನು ಅವರು ಏಕೆ ಒಪ್ಪಿಕೊಳ್ಳುತ್ತಿಲ್ಲ?" ಎಂದು ಪ್ರಶ್ನೆ ಮಾಡಿದರು.

"ರೆಬಲ್ ಶಾಸಕರ ಜೊತೆ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಾರೆ" ಎಂಬುದನ್ನು ಅವರು ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ನಾಯಕರನ್ನು ಒತ್ತಾಯಿಸಿದರು.

ಸಚಿವ ಕೃಷ್ಣ ಬೈರೇಗೌಡ ಸಹ ಆಪರೇಷನ್ ಕಮಲದ ಬಗ್ಗೆ ವಿಷಯವನ್ನು ಪ್ರಸ್ತಾಪಿಸಿದರು. "ಅತೃಪ್ತರನ್ನು ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋದವರು ಯಾರು?. ಕರ್ನಾಟಕ ಮಾತ್ರವಲ್ಲ ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿಯೂ ಆಪರೇಷನ್ ಕಮಲ ಆಗಿದೆ" ಎಂದು ಸದನಲ್ಲಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+