ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ಏಕೆ ನೀಡಿಲ್ಲ?

|
Google Oneindia Kannada News

ಬೆಂಗಳೂರು, ಮೇ 03; ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಬೆಂಗಳೂರಿಗೆ ಆಗಮಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆಯೇ? ಎಂಬ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರವಹಿಸಿಕೊಂಡು ಒಂದು ವರ್ಷವೂ ಕಳೆದಿಲ್ಲ.

ಮಂಗಳವಾರ ಕರ್ನಾಟಕ ಕಾಂಗ್ರೆಸ್ ಬಿಜೆಪಿಗೆ ಟ್ವೀಟ್ ಬಾಣ ಬಿಟ್ಟಿದೆ. "ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಅವರ ಮುನ್ಸೂಚನೆ ನಿಜವೇ ಬಿಜೆಪಿ ಕರ್ನಾಟಕ?" ಎಂದು ಹೇಳಿದೆ.

Breaking; ಬಿಜೆಪಿ ಕುಟುಂಬ ರಾಜಕಾರಣಕ್ಕೆ ತಡೆ ಹಾಕಬೇಕು; ವಿಶ್ವನಾಥ್ Breaking; ಬಿಜೆಪಿ ಕುಟುಂಬ ರಾಜಕಾರಣಕ್ಕೆ ತಡೆ ಹಾಕಬೇಕು; ವಿಶ್ವನಾಥ್

Why BJP Not Issued Notice To Basanagouda Patil Yatnal Asked Congress

"ನಿಜವಲ್ಲ ಎಂದಾದರೆ, ಇತರ ಪಕ್ಷಗಳ ನಾಯಕರಿಗೆ ನೋಟಿಸ್ ಸಲಹೆ ಕೊಡುವ ತಾವು ಯತ್ನಾಳ್ ಅವರಿಗೆ ನೋಟಿಸ್ ಏಕೆ ನೀಡಿಲ್ಲ?. ಬಿಜೆಪಿ ನಾಯಕತ್ವವಿಲ್ಲದೆ ಒದ್ದಾಡುವ ಸ್ಥಿತಿ ಬಂದಿದೆ, ಅದೆಷ್ಟೇ ಬದಲಾವಣೆಯ ಸರ್ಕಸ್ ಮಾಡಿದರೂ ನಾಯಕತ್ವ ಸೃಷ್ಟಿಸಲು ಸಾಧ್ಯವಿಲ್ಲ" ಎಂದು ಟೀಕಿಸಿದೆ.

Breaking; ಬಿಜೆಪಿ ನಾಯಕರ ಆರೋಪಕ್ಕೆ ಟ್ವೀಟ್‌ ಬಾಣ ಬಿಟ್ಟ ಜಮೀರ್ Breaking; ಬಿಜೆಪಿ ನಾಯಕರ ಆರೋಪಕ್ಕೆ ಟ್ವೀಟ್‌ ಬಾಣ ಬಿಟ್ಟ ಜಮೀರ್

ಇನ್ನು ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲಿಸುವ ಪ್ರಶ್ನೆಯೇ ಇಲ್ಲ. ಅವರು ಕಾಮನ್ ಮ್ಯಾನ್ ಸಿಎಂ" ಎಂದು ಹೇಳಿದರು.

ನಾನು ಮೌನವಾಗಿಲ್ಲ; ನಮ್ಮ ಕ್ರಮಗಳೇ ಮಾತನಾಡುತ್ತಿವೆ: ಸಿಎಂ ಬಸವರಾಜ ಬೊಮ್ಮಾಯಿನಾನು ಮೌನವಾಗಿಲ್ಲ; ನಮ್ಮ ಕ್ರಮಗಳೇ ಮಾತನಾಡುತ್ತಿವೆ: ಸಿಎಂ ಬಸವರಾಜ ಬೊಮ್ಮಾಯಿ

"ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕು ಎಂದು ಜನರೂ ಬಯಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸಲಾಗುತ್ತದೆ. ಮುಂದಿನ ಮುಖ್ಯಮಂತ್ರಿ ಅವರೇ ಆಗಲಿದ್ದಾರೆ" ಎಂದು ಸ್ಪಷ್ಟಪಡಿಸಿದರು.

English summary
In a tweet Congress asked BJP why it not issued notice to BJP MLA Basanagouda Patil Yatnal in the issue of the change in leadership comment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X