ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ-ಅಮಿತ್ ಶಾ ಭೇಟಿಯ ರಹಸ್ಯ ಬಹಿರಂಗ!

By Gururaj
|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಅಮಿತ್ ಶಾರನ್ನ ಭೇಟಿ ಮಾಡಿದ್ದರ ರಹಸ್ಯ ಬಹಿರಂಗ | Oneindia Kannada

ಬೆಂಗಳೂರು, ಜೂನ್ 26 : ಬಿ.ಎಸ್.ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭೇಟಿಯ ರಹಸ್ಯ ಬಯಲಾಗಿದೆ. 'ಕರ್ನಾಟಕದ ಮೈತ್ರಿ ಸರ್ಕಾರದ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ' ಎಂದು ಅಮಿತ್ ಶಾ ಯಡಿಯೂರಪ್ಪ ಅವರಿಗೆ ಭರವಸೆ ನೀಡಿದ್ದಾರೆ.

ಸೋಮವಾರ ಅಹಮದಾಬಾದ್‌ನಲ್ಲಿ ಯಡಿಯೂರಪ್ಪ ಅವರು ಅಮಿತ್ ಶಾ ಭೇಟಿಯಾಗಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನಲೆಯಲ್ಲಿ ಈ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಯಡಿಯೂರಪ್ಪ ಜೊತೆ ಬಸವರಾಜ ಬೊಮ್ಮಾಯಿ ಅವರು ಸಹ ಗುಜರಾತ್‌ಗೆ ತೆರಳಿದ್ದರು.

ರಹಸ್ಯವಾಗಿ ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ!ರಹಸ್ಯವಾಗಿ ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ!

ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಅಮಿತ್ ಶಾ ಭೇಟಿಯ ರಹಸ್ಯ ಬಿಚ್ಚಿಟ್ಟಿದ್ದಾರೆ. 'ರಾಜ್ಯ ರಾಜಕೀಯದ ಬಗ್ಗೆ ಯಾವುದೇ ಚರ್ಚೆಯನ್ನು ನಡೆಸಿಲ್ಲ. ಪಕ್ಷದ ವಿಚಾರವನ್ನು ಮಾತ್ರ ಚರ್ಚಿಸಲಾಗಿದೆ' ಎಂದು ಹೇಳಿದರು.

ಲೋಕಸಭಾ ಚುನಾವಣೆ: ರಾಜ್ಯದ ಸಂಭಾವ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ: ರಾಜ್ಯದ ಸಂಭಾವ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

'ರಾಜ್ಯ ಕಾರ್ಯಕಾರಣಿಗೆ ಆಹ್ವಾನ ನೀಡಲು ಅಹಮದಾಬಾದ್‌ಗೆ ಹೋಗಿದ್ದೆ' ಎಂದು ಯಡಿಯೂರಪ್ಪ ಹೇಳಿದರು. ಈ ವಾರಾಂತ್ಯದಲ್ಲಿ ನಡೆಯುವ ರಾಜ್ಯ ಕಾರ್ಯಕಾರಣಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆಯೇ?, ಅಥವ ಬೇರೆ ರಾಷ್ಟ್ರೀಯ ನಾಯಕರನ್ನು ಕಳುಹಿಸಲಿದ್ದಾರೆಯೇ? ಕಾದು ನೋಡಬೇಕು.

ಜೂನ್ 29ರಂದು ಸಭೆ

ಜೂನ್ 29ರಂದು ಸಭೆ

ಅಹಮದಾಬಾದ್‌ನಲ್ಲಿ ಜೂನ್ 25ರಂದು ಅಮಿತ್ ಶಾ ಅವರನ್ನು ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದರು. ಸುಮಾರು 1 ಗಂಟೆಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದರು. ಈ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿತ್ತು.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 'ಜೂನ್ 29ರಂದು ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ ಸಭೆಗೆ ಆಹ್ವಾನ ನೀಡಲು ತೆರಳಿದ್ದೆ. ಸಮಯ ನೋಡಿಕೊಂಡು ಸಭೆಗೆ ಆಗಮಿಸುತ್ತೇನೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ' ಎಂದರು.

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲು ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ನಿರ್ಧರಿಸಿದೆ. ಆದ್ದರಿಂದ, ಬಿಜೆಪಿ ಯಾವ ಕಾರ್ಯತಂತ್ರ ರೂಪಿಸಲಿದೆ? ಕಾದು ನೋಡಬೇಕು.

ಕರ್ನಾಟಕ ಬಜೆಟ್, ವಿಧಾನಪರಿಷತ್ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಮಿತ್ ಶಾ ಸಭೆಗೆ ಆಗಮಿಸದಿದ್ದರೂ ರಾಷ್ಟ್ರೀಯ ನಾಯಕರೊಬ್ಬರನ್ನು ಕಳುಹಿಸಿಕೊಡುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ವಿರುದ್ಧ ಹೋರಾಟ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ

ಅಮಿತ್ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಗಮನ ಕೊಡಿ ಎಂದು ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಕರ್ನಾಟಕದ ಮೈತ್ರಿ ಸರ್ಕಾರದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ತಂಡ ಗುಪ್ತವಾಗಿ ಕೆಲಸ ಮಾಡುತ್ತಿದೆ ಎಂದು ಅಮಿತ್ ಶಾ ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ

ಲೋಕಸಭೆ ಚುನಾವಣೆ

ಕರ್ನಾಟಕದ ಮೈತ್ರಿ ಸರ್ಕಾರ ಲೋಕಸಭೆ ಚುನಾವಣೆ ವೇಳೆಗೆ ಪತನವಾಗಲಿದೆ ಎಂಬುದು ಬಿಜೆಪಿ ವಲಯದಲ್ಲಿ ಹಬ್ಬಿರುವ ಮಾತು. ಆದ್ದರಿಂದ, ಅಮಿತ್ ಶಾ ಮತ್ತು ಯಡಿಯೂರಪ್ಪ ಭೇಟಿ ಕುತೂಹಲಕ್ಕೆ ಕಾರಣವಾಗಿತ್ತು.

English summary
Day after B.S.Yeddyurappa and Amit Shah meeting Yeddyurappa clarified why he met party national president. Yeddyurappa met party chief in Ahmedabad on June 25, 2018. This meeting had set off speculations that the BJP is trying to unseat Chief Minister HD Kumaraswamy in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X