ಲೋಕಸಮರಕ್ಕೆ ರಮೇಶ್ ಜಾರಕಿಹೊಳಿ ಸಜ್ಜು; ಗುಪ್ತ್ ಗುಪ್ತ್ ಸಭೆಯ ಹಿಂದಿನ ಅಸಲಿ ಕಾರಣವೇನು?
ಬೆಂಗಳೂರು, ಸೆಪ್ಟೆಂಬರ್22: 2023 ರ ವಿಧಾನಸಭಾ ಚುನಾವಣೆಯಲ್ಲಿ ಬಾರೀ ಗೆಲುವು ಸಾಧಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಗೂ ಭರ್ಜರಿ ತಯಾರಿ ನಡೆಸುತ್ತಿದೆ. ಇತ್ತ ರಾಜ್ಯ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಕಮಲ - ದಳ ನಾಯಕರು ಮಾಸ್ಟರ್ ಪ್ಲಾನ್ ನಡೆಸುತ್ತಿದ್ದಾರೆ.
ಹೌದು, ಈ ಬಾರೀ ಅತೀ ಹೆಚ್ಚು ಸ್ಥಾನಗಳನ್ನ ಗೆಲ್ಲುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದು, ಅದರಂತೆ ಡಿ ಕೆ ಶಿವಕುಮಾರ್ ಆಪರೇಷನ್ ಹಸ್ತದ ಮೂಲಕ ತಯಾರಿ ನಡೆಸುತ್ತಿದ್ದಾರೆ. ಇತ್ತ ಡಿ ಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ರಾಜ್ಯ ರಾಜಕಾರಣದಲ್ಲಿ ಗೋಕಾಕ್ ಸಾಹುಕಾರ್ ಫುಲ್ ಆಕ್ಟಿವ್ ಆಗಿದ್ದು, ಗುಪ್ತವಾಗಿ ಸರಣಿ ಸಭೆಗಳನ್ನ ನಡೆಸುತ್ತಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್ ಕೊಡಲು ಸಿದ್ದತೆ ನಡೆಸಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಿ ಕೆ ಬ್ರದರ್ಸ್ ಗೆ ಸೋಲಿನ ರುಚಿ ತೋರಿಸುವ ತಂತ್ರಗಾರಿಕೆ ರೆಡಿ ಮಾಡಿದ್ದಾರೆ ಎನ್ನಲಾಗಿದೆ.
ಹೌದು, 2024 ರ ಲೋಕಸಭಾ ಚುನಾವಣೆಯಲ್ಲಿ ಈ ಬಾರೀ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಡಿ ಕೆ ಸುರೇಶ್ ಅವರನ್ನ ಚುನಾವಣೆಯಲ್ಲಿ ಸೋಲಿಸಲು ಬೆಳಗಾವಿ ಸಾಹುಕಾರ್ ಹಾಗೂ ಎಚ್ ಡಿ ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಅದರಂತೆ ಈ ಬಾರೀ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವರಾದ ಸಿ ಪಿ ಯೋಗೇಶ್ವರ್ ಅವರು ಸ್ಪರ್ಧೆ ನಡೆಸುವ ಕುರಿತು ಇಚ್ಚೆ ಹೊಂದಿದ್ದು, ಮೈತ್ರಿ ವೇಳೆ ನಾಲ್ಕು ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಬಿಜೆಪಿಗೆ ಬಿಟ್ಟುಕೊಡುವಂತೆ ಕುಮಾರಸ್ವಾಮಿ ಜೊತೆಗೆ ಸಾಹುಕಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಅಲ್ಲದೇ ಸಿ ಪಿ ಯೋಗೇಶ್ವರ್ ಗೆ ಬೆಂಬಲಕ್ಕೆ ನಿಲ್ಲುವಂತೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕುಮಾರಸ್ವಾಮಿ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಇತ್ತ ಆಪ್ತ ಬಳಗವನ್ನು ಚುನಾವಣೆಗೆ ಸಜ್ಜುಗೊಳಿಸಲು ಮುಂದಾದ ರಮೇಶ್ ಜಾರಕಿಹೊಳಿ, ಈಗಾಗಲೇ ಬೆಂಗಳೂರು ಗ್ರಾಮಾಂತರದಲ್ಲಿ ಗೆಳೆಯ ಸಿಪಿ ಯೋಗೇಶ್ವರ್ ಗೆ ಟಿಕೆಟ್ ಕುರಿತಂತೆ ಎಚ್ ಡಿ ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಸಿರುವ ಸಾಹುಕಾರ್, ವಿಧಾನಸಭಾ ಚುನಾವಣಯಲ್ಲಿ ಸೋಲು ಕಂಡಿರುವ ಆಪ್ತ ನಾಯಕ ಹಾಗೂ ಮಾಜಿ ಸಚಿವ ಡಾ, ಕೆ ಸುಧಾಕರ್ ಸಹ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸಲು ತೆರೆಮರೆಯಲ್ಲಿ ತಯಾರಿ ನಡೆಸುತ್ತಿದ್ದು, ಈ ಬಗ್ಗೆಯೂ ಸಹ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ರಮೇಶ್ ಜಾರಕಿಹೊಳಿ ಮಾತನಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಕುಮಾರಸ್ವಾಮಿ ಜೊತೆಗೂ ಸಹ ಚಿಕ್ಕಬಳ್ಳಾಪುರ ಕ್ಷೇತ್ರದ ಕುರಿತು ಮಾತುಕತೆ ನಡೆಸಿದ್ದು, 28 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳನ್ನ ಕೇಳಿರುವ ಜೆಡಿಎಸ್ ಕೇಳಿದ್ದು, ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನ ಬಿಟ್ಟು ಬೇರೆ ಕ್ಷೇತ್ರಗಳನ್ನ ಕೇಳುವ ಕುರಿತು ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಸಿದ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಜಿ ಸಚಿವ ಡಾ ಕೆ ಸುಧಾಕರ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೈತ್ರಿ ಮಾತುಕತೆಯ ಕುರಿತು ಬಿಜೆಪಿ ದೆಹಲಿ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿರುವ ಕುಮಾರಸ್ವಾಮಿ ಮೈತ್ರಿ ಕುರಿತು ಇಂದು ಅಂತಿಮ ನಿರ್ಧಾರವನ್ನ ಪ್ರಕಟಿಸುವ ಸಾಧ್ಯತೆ ಇದೆ. ಇತ್ತ ಕುಮಾರಸ್ವಾಮಿ ದೆಹಲಿಗೆ ತೆರಳಿದ ಬಳಿಕ ಒಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.












Click it and Unblock the Notifications