• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಎಲ್‌ಪಿ ಸಭೆಗೆ ಗೈರು, ಸಿದ್ದರಾಮಯ್ಯಗೆ ಎಂಟಿಬಿ ನಾಗರಾಜ್ ಪತ್ರ

|

ಬೆಂಗಳೂರು, ಜುಲೈ 09 : ವಸತಿ ಸಚಿವ, ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದರು. ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಮಂಗಳವಾರ ನಡೆದ ಸಿಎಲ್‌ಪಿ ಸಭೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 10 ಶಾಸಕರು ಗೈರಾಗಿದ್ದರು. ಇನ್ನೂ ಕೆಲವು ಶಾಸಕರು ಅನುಮತಿ ಪಡೆದು ಗೈರಾಗಿದ್ದಾರೆ ಎಂದು ಸಭೆಯ ಬಳಿಕ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

ವಸತಿ ಸಚಿವ, ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಅವರು ಸಭೆಗೆ ಗೈರಾಗಿದ್ದರು. ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರಿಗೆ ಅವರು ಪತ್ರ ಬರೆದಿದ್ದು ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದ್ದರು.

8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು

ಗಾಂಧಿ ಪ್ರತಿಮೆ ಮುಂದೆ ಧರಣಿ ಕುಳಿತ ಕಾಂಗ್ರೆಸ್ ನಾಯಕರು

ಪತ್ರದಲ್ಲಿ ಏನಿದೆ?

ಇಂದು ದಿನಾಂಕ 9/7/2019ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಗೆ ನಾನು ನನ್ನ ಅನಾರೋಗ್ಯದ ನಿಮಿತ್ಯ ಹಾಜರಾಗಲು ಸಾಧ್ಯವಾಗುತ್ತಿಲ್ಲದ ಕಾರಣ ನನ್ನ ಗೈರು ಹಾಜರಿಯನ್ನು ಅನ್ಯಾತಾ ಭಾವಿಸಬಾರದೆಂದು ಹಾಗೂ ಈ ಸಭೆಯ ಗೈರು ಹಾಜರಿಗೆ ತಮ್ಮಲ್ಲಿ ಕ್ಷಮೆ ಕೋರುತ್ತೇನೆ

ಎಂದು ಎಂ.ಟಿ.ಬಿ.ನಾಗರಾಜ್ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

English summary
Housing minister and Hoskote Congress MLA M.T.B.Nagaraj absent for CLP meeting held on July 9, 2019. In a letter to CLP leader Siddaramaiah he explained why he is not attending meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X