ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕೋಲಾರ ಕ್ಷೇತ್ರವೇ ಏಕೆ, ಸಿದ್ದರಾಮಯ್ಯ ಪ್ರತಿಕ್ರಿಯೆ

ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸ್ಪರ್ಧಿಸಲು ಏಕೆ ಕೋಲಾರವನ್ನು ಆಯ್ಕೆ ಮಾಡಿಕೊಳ್ಳಲಾಯಿತು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

|
Google Oneindia Kannada News

ಬೆಂಗಳೂರು, ಫೆಬ್ರವರಿ 05; ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಪ್ರಸ್ತುತ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಶಾಸಕರು.

ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಕೋಲಾರ ಕ್ಷೇತ್ರವೇ ಏಕೆ? ಎಂದು ಹೇಳಿದ್ದಾರೆ. "ಚಾಮುಂಡೇಶ್ವರಿಯಲ್ಲಿ ಸೋಲಿನ ಸುಳಿವು ಸಿಕ್ಕಿದ್ದರಿಂದಲೇ ಬಾದಾಮಿಯಲ್ಲಿ ಕಣಕ್ಕಿಳಿದೆ" ಎಂದು ಹಿಂದಿನ ಚುನಾವಣೆ ಸೋಲನ್ನು ನೆನಪಿಸಿಕೊಂಡರು.

Siddaramaiah; ಕೋಲಾರ ಕ್ಷೇತ್ರ ಆಯ್ಕೆ ಹಿಂದಿನ ಲೆಕ್ಕಾಚಾರಗಳುSiddaramaiah; ಕೋಲಾರ ಕ್ಷೇತ್ರ ಆಯ್ಕೆ ಹಿಂದಿನ ಲೆಕ್ಕಾಚಾರಗಳು

Why Kolar Reveals Former CM Siddaramaiah

ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, "ಬಾದಾಮಿ ಕ್ಷೇತ್ರದ ಜನರು ಹೆಲಿಕಾಪ್ಟರ್ ತಂದು ಕೊಡುತ್ತೀವಿ ಎಂದು ಹೇಳುತ್ತಿದ್ದಾರೆ. ಅಲ್ಲಿನ ಜನ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ಅವರು ನನ್ನನ್ನು ಸೋಲಿಸಲ್ಲ" ಎಂದರು.

ಸಿದ್ಧರಾಮಯ್ಯ ಹರಕೆಯ ಕುರಿ; ಅವರಿಗೆ ಕೋಲಾರ ಸೇಫ್ ಅಲ್ಲ: ಹೆಚ್.ಡಿ.ಕುಮಾರಸ್ವಾಮಿಸಿದ್ಧರಾಮಯ್ಯ ಹರಕೆಯ ಕುರಿ; ಅವರಿಗೆ ಕೋಲಾರ ಸೇಫ್ ಅಲ್ಲ: ಹೆಚ್.ಡಿ.ಕುಮಾರಸ್ವಾಮಿ

"ಹತ್ತಿರ ಎನ್ನುವ ಕಾರಣಕ್ಕೆ ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಹೈಕಮಾಂಡ್ ಫೈನಲ್ ಮಾಡಿದರೆ ನೂರಕ್ಕೆ ನೂರರಷ್ಟು ಕೋಲಾರದಲ್ಲಿ ಗೆಲ್ಲುತ್ತೇನೆ" ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

 17 ಕೋಟಿ, ಮಿನಿಸ್ಟರ್‌ ಪೋಸ್ಟ್‌: ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಬಿಟ್ಟುಕೊಟ್ಟ ಶ್ರೀನಿವಾಸ ಗೌಡರ ಆಡಿಯೊ ವೈರಲ್‌- ಅಂತದ್ದೇನಿದೆ 17 ಕೋಟಿ, ಮಿನಿಸ್ಟರ್‌ ಪೋಸ್ಟ್‌: ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಬಿಟ್ಟುಕೊಟ್ಟ ಶ್ರೀನಿವಾಸ ಗೌಡರ ಆಡಿಯೊ ವೈರಲ್‌- ಅಂತದ್ದೇನಿದೆ

ಹೈಕಮಾಂಡ್ ಒಪ್ಪಿಗೆ ನೀಡಬೇಕಿದೆ; ಜನವರಿ 9ರಂದು ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಸಿದ್ದರಾಮಯ್ಯ ಮಾತನಾಡಿದರು. ಆಗ ಕೋಲಾರದಲ್ಲಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, "ಕೆಲವರು ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ" ಎಂದು ಹೇಳಿದ್ದರು.

"ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ. ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ" ಎಂದು ತಿಳಿಸಿದ್ದರು.

"ಆದರೆ ಹೈಕಮಾಂಡ್‌ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ. ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್‌ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಸ್ಪಷ್ಟಪಡಿಸಿದ್ದರು.

ಸಿದ್ದರಾಮಯ್ಯ ಘೋಷಣೆ ಮಾಡಿದ ದಿನದಿಂದ ಅವರ ಸ್ಪರ್ಧೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸಹ ಕೋಲಾರಕ್ಕೆ ಭೇಟಿ ನೀಡಿ, ಸಿದ್ದರಾಮಯ್ಯಗೆ ಬಾಡಿಗೆ ಮನೆಯನ್ನು ನೋಡಿದ್ದಾರೆ.

English summary
In Kalaburagi former CM Siddaramaiah revealed that why he chose Kolar for Karnataka assembly elections 2023
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X