ಸಿಎಂ ಸಿದ್ದರಾಮಯ್ಯಗೆ ಮೈಸೂರು, ಚಾಮರಾಜನಗರ ಪ್ರತಿಷ್ಠೆಯ ಕ್ಷೇತ್ರ..ಏಕೆ?
ಚಾಮರಾಜನಗರ, ಫೆಬ್ರವರಿ 26: ಮುಖ್ಯ,ಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳು ಪ್ರತಿಷ್ಠೆಯಾಗಿ ಮಾರ್ಪಟ್ಟಿದ್ದು, ಇದೆರಡು ಕ್ಷೇತ್ರಗಳಿಗೂ ಬಿಜೆಪಿಯನ್ನು ಸುಲಭವಾಗಿ ಮಣಿಸುವ ಪ್ರಭಾವಿ ಅಭ್ಯರ್ಥಿಗಳು ಬೇಕಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ನಲ್ಲಿ ತಲಾಸೆ ಆರಂಭವಾಗಿದೆ.
ಮೈಸೂರು ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡು ಹಾಲಿ ಬಿಜೆಪಿಯ ಹಿಡಿತದಲ್ಲಿದೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿಯೂ ಬಿಜೆಪಿಯನ್ನು ಮಣಿಸಿ ಕಾಂಗ್ರೆಸ್ ಬಾವುಟ ಹಾರಿಸಬೇಕೆಂಬ ಆಲೋಚನೆಯಲ್ಲಿ ಸಿದ್ದರಾಮಯ್ಯ ಇದ್ದಾರೆಯಾದರೂ ಯಾರನ್ನು ಕಣಕ್ಕಿಳಿಸಿದರೆ ಗೆಲುವು ತಂದುಕೊಡಬಹುದು ಎಂಬ ಚಿಂತೆ ಅವರನ್ನು ಕಾಡಲಾರಂಭಿಸಿದೆ. ಎರಡು ಕ್ಷೇತ್ರಗಳಲ್ಲಿಯೂ ಸಚಿವ, ಶಾಸಕರನ್ನು ಕಣಕ್ಕಿಳಿಸಿ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ಚಿಂತನೆ ನಡೆದಿದೆಯಾದರೂ ಸಚಿವರಾಗಲೀ, ಶಾಸಕರಾಗಲೀ ರಾಜ್ಯ ರಾಜಕಾರಣ ಬಿಟ್ಟು ಕೇಂದ್ರದತ್ತ ಮುಖ ಮಾಡಲು ತಯಾರಿಲ್ಲ.

ಪ್ರಧಾನಿ ನರೇಂದ್ರಮೋದಿಯವರನ್ನು ಮಣಿಸಿ ಇಂಡಿಯಾ ಒಕ್ಕೂಟವನ್ನು ಅಧಿಕಾರಕ್ಕೆ ತರಲೇ ಬೇಕೆಂದು ಕೈ ನಾಯಕರು ಹಠಕ್ಕೆ ಬಿದ್ದಿದ್ದಲ್ಲದೆ, ಕರ್ನಾಟಕದಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾ ನಗಳೊಂದಿಗೆ ಅಧಿಕಾರ ಹಿಡಿದಿರುವ ಕಾರಣ ರಾಜ್ಯದಿಂದ ಹೆಚ್ಚಿನ ಅಂದರೆ ಸುಮಾರು ಇಪ್ಪತ್ತು ಸ್ಥಾ ನಗಳನ್ನು ಗೆಲ್ಲಿಸಿಕೊಡುವುದು ಒಂದು ಕಡೆಯಾದರೆ ತನ್ನ ತವರು ಕ್ಷೇತ್ರವನ್ನು ಗೆಲ್ಲಿಸಿ ತನ್ನ ಸಾಮರ್ಥ್ಯವೇನು ಎಂಬುದನ್ನು ಹೈಕಮಾಂಡ್ ಮುಂದೆ ಸಿಎಂ ಸಿದ್ದರಾಮಯ್ಯ ಸಾಬೀತು ಮಾಡಬೇಕಾದ ಪರಿಸ್ಥಿತಿಯೂ ಎದುರಾಗಿದೆ.
ಆಕಾಂಕ್ಷಿ ನಾಯಕರಿಗೆ ಕೊರತೆ ಇಲ್ಲ
ಈಗ ಕಣಕ್ಕಿಳಿಯಲು ಆಕಾಂಕ್ಷೆ ವ್ಯಕ್ತಪಡಿಸುತ್ತಿರುವ ನಾಯಕರ ಪೈಕಿ ಎಲ್ಲರೂ ಹೊಸ ಮುಖಗಳಾಗಿವೆ. ಜತೆಗೆ ಇಡೀ ಜಿಲ್ಲೆಯಲ್ಲಿ ಪ್ರಭಾವ ಬೀರುವ ನಾಯಕತ್ವ ಅವರದಲ್ಲ. ಹಾಗಾಗಿ ಮೇಲ್ನೋಟಕ್ಕೆ ಕಣಕ್ಕಿಳಿಯಲು ಅಭ್ಯರ್ಥಿಗಳಿಗೇನು ಕೊರತೆ ಇಲ್ಲವಾದರೂ ಗೆದ್ದು ಬರುವ ತಾಕತ್ ಇದೆಯಾ? ಎಂಬುದು ಕೂಡ ಇಲ್ಲಿ ಬಹುಮುಖ್ಯವಾಗಲಿದೆ.
ಚಾಮರಾಜನಗರ ಮೀಸಲು ಕ್ಷೇತ್ರವಾಗಿದೆ. ಈ ಹಿಂದೆ ಆರ್. ಧ್ರುವನಾರಾಯಣ್ ಇದ್ದರು. ಇವರು ಜಿಲ್ಲೆಯಲ್ಲಿ ತನ್ನದೇ ಪ್ರಭಾವ ಹೊಂದಿದ್ದರು. ಉತ್ತಮ ಕೆಲಸಗಾರ ಮತ್ತು ಸಜ್ಜನ ವ್ಯಕ್ತಿಯಾಗಿದ್ದರು. ಅಂತಹ ನಾಯಕ ಕಳೆದ 2019ರ ಚುನಾವಣೆಯಲ್ಲಿ ಸೋಲು ಕಾಣುವಂತಾಗಿತ್ತು. ಕಳೆದ ವಿಧಾನಸಭಾ ಚುನಾವಣೆ ವೇಳೆ ಅಕಾಲ ಮೃತ್ಯುಗೀಡಾಗುವಂತಾಯಿತು. ಅವರ ನಂತರ ಯಾರು ಎಂಬುದು ಕಳೆದ ವರ್ಷದಿಂದಲೇ ಕಾಂಗ್ರೆಸ್ ನಾಯಕರನ್ನು ಕಾಡುತ್ತಲೇ ಬಂದಿದೆ.
ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ
ಈಗ ಚುನಾವಣೆಗೆ ದಿನಗಳು ಹತ್ತಿರವಾಗಿವೆ. ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿಯೂ ಮುಂದೆ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಬಿಜೆಪಿಗೂ ಗೆಲುವು ಅಗತ್ಯವಾಗಿರುವುದರಿಂದ ಮತ್ತು ಗೆಲ್ಲಲು ಹಾಲಿ ಸಂಸದರ ಬೆಂಬಲವೂ ಬೇಕಾಗಿರುವ ಕಾರಣ ಅವರು ಯಾರನ್ನು ಶಿಫಾರಸ್ಸು ಮಾಡುತ್ತಾರೋ ಅವರಿಗೆ ಟಿಕೆಟ್ ಖಚಿತವಾಗಲಿದೆ ಎಂದರೂ ತಪ್ಪಾಗಲಾರದು.

ಸದ್ಯದ ಪರಿಸ್ಥಿತಿಯಲ್ಲಿ ಶ್ರೀನಿವಾಸ ಪ್ರಸಾದ್ ಅವರಿಗೂ ಗೊಂದಲ ಏರ್ಪಟ್ಟಿದೆ. ಅವರ ಅಳಿಯಂದಿರಾದ ಡಾ.ಮೋಹನ್ ಮತ್ತು ಮಾಜಿ ಶಾಸಕ ಹರ್ಷವರ್ಧನ್ ಇಬ್ಬರೂ ಆಕಾಂಕ್ಷಿಗಳಾಗಿದ್ದಾರೆ. ಇಲ್ಲಿ ರಾಜಕೀಯದಲ್ಲಿ ಅನುಭವ ಇರುವ ಹರ್ಷವರ್ಧನ್ ಅವರಿಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದರೂ ಅಚ್ಚರಿಯಿಲ್ಲ. ಅದರಾಚೆಗೆ ಚಾಮರಾಜನಗರ ಜಿಲ್ಲೆಯವರೇ ಆಗಿರುವ ಮತ್ತು ಜಿಲ್ಲೆಯ ಜನರ ನಾಡಿಮಿಡಿತ ಅರಿತಿರುವ ಮಾಜಿ ಸಚಿವ ಎನ್. ಮಹೇಶ್ ಅವರಿದ್ದಾರೆ. ಜತೆಗೆ ನಿವೃತ್ತ ಐಎಎಸ್ ಅಧಿಕಾರಿ ಶಿವರಾಂ ಹೀಗೆ ಒಂದಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ.
ಸಿಎಂಗೆ ಪ್ರತಿಷ್ಠೆಯಾದ 2 ಕ್ಷೇತ್ರದ ಗೆಲುವು
ಕಾಂಗ್ರೆಸ್ ನಿಂದ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದು ಬಹುಮುಖ್ಯವಾಗಿದೆ. ಈ ಬಾರಿ ಮತ ನೀಡುವವರು ಕೇಂದ್ರದ ಕೆಲಸ ನೋಡುತ್ತಾರೋ ಅಥವಾ ರಾಜ್ಯ ಸರ್ಕಾರದ ಕೆಲಸಗಳನ್ನು ನೋಡುತ್ತಾರೋ ಗೊತ್ತಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಲಿರುವುದರಿಂದ ಕಾಂಗ್ರೆಸ್ ಘಟಾನುಘಟಿ ನಾಯಕನನ್ನು ಕಣಕ್ಕಿಳಿಸಲೇ ಬೇಕಾಗಿದೆ. ಆ ನಾಯಕ ಯಾರಾಗಬೇಕು ಎಂಬುದೇ ಕೈ ನಾಯಕರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.
ಈಗಾಗಲೇ ಹಿರಿಯ ಸಚಿವರು ಮತ್ತು ನಾಯಕರು ತಾವು ಸ್ಪರ್ಧಿಸಲು ತಯಾರಿಲ್ಲ. ಆದರೆ ತಮ್ಮ ಮಕ್ಕಳನ್ನು ಕಣಕ್ಕಿಳಿಸಿ ಅವರ ಗೆಲುವಿಗೆ ಕೆಲಸ ಮಾಡಲು ತಯಾರಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರಿನ ಎರಡು ಕ್ಷೇತ್ರಗಳು ಸಮಸ್ಯೆಯಾಗಿ ಪರಿಣಮಿಸಿದೆ. ಆದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಇದ್ದೇ ಇರುತ್ತದೆ ಎನ್ನುವಂತೆ ಎರಡು ಕ್ಷೇತ್ರಗಳಿಗೆ ಯಾರನ್ನು ಕಣಕ್ಕಿಳಿಸುತ್ತಾರೆ ಎನ್ನುವುದರ ಮೇಲೆ ಈ ಎರಡು ಕ್ಷೇತ್ರಗಳಲ್ಲಿ ಮುಂದಿನ ರಾಜಕೀಯ ಚಟುವಟಿಕೆಗಳು ಆರಂಭವಾಗಲಿವೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications