ಎಲ್ಲವನ್ನೂ ಬಿಟ್ಟು, ಗ್ರಾಮ ಪಂಚಾಯಿತಿ ಚುನಾವಣೆಗಳ ಮೇಲಷ್ಟೇ ಏಕೆ ನಿರ್ಬಂಧ?
ಬೆಂಗಳೂರು, ಮೇ 31: ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್ ಕೆ ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Recommended Video
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಚುನಾವಣಾ ಆಯೋಗದ ಮೇಲೆ ಒತ್ತಡ ತಂದು, ಕೊರೊನಾ ನೆಪ ಹೇಳಿ ಮುಂದಿನ ತಿಂಗಳು ನಡೆಯಬೇಕಿದ್ದ ಚುನಾವಣೆಗಳನ್ನು ಮುಂದಕ್ಕೆ ಹಾಕಿದೆ. ರಾಜ್ಯದಲ್ಲಿ ಲಾಕ್‌ಡೌನ್ ಬಹುತೇಕ ಅಂತ್ಯಗೊಂಡ ಸೂಚನೆ ಕಾಣಿಸುತ್ತಿದೆ. ಪರಿಸ್ಥಿತಿ ಹೀಗಿರುವಾಗ ಎಲ್ಲವನ್ನೂ ಬಿಟ್ಟು ಗ್ರಾಮ ಪಂಚಾಯಿತಿ ಚುನಾವಣೆಗಳ ಮೇಲಷ್ಟೇ ಏಕೆ ನಿರ್ಬಂಧ ಎಂದು ಪ್ರಶ್ನಿಸಿದ್ದಾರೆ.
ಚುನಾವಣೆಗಳನ್ನು ಮುಂದಕ್ಕೆ ಹಾಕಿ ಬಿಜೆಪಿ, ತನ್ನ ಬೆಂಬಲಿಗರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಅನುಕೂಲ ಮಾಡಿ ಕೊಡಲು ಹೊರಟಿದೆ. ಆಡಳಿತ ಸಮಿತಿ ರಚಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಚುನಾವಣಾ ಆಯೋಗ ತನ್ನ ನಿರ್ಧಾರ ಹಿಂಪಡೆಯದಿದ್ದರೇ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ
ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕೊರೊನಾವೈರಸ್ ಹಾವಳಿಯಿಂದ ಮುಂದಕ್ಕೆ ಹಾಕಿ ಚುನಾವಣಾ ಆಯೋಗ ಆದೇಶಿಸಿದೆ. ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಹೀಗಾಗಿ ಈ ಹಂತದಲ್ಲಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಚುನಾವಣಾ ಆಯೋಗ ಬಂದಿದೆ. ಈ ಹಿಂದೆ ಚುನಾವಣೆ ನಡೆಸಬೇಕೂ ಬೇಡವೋ ಎಂಬ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆಯೋಗ ವರದಿ ಕೇಳಿತ್ತು.

6 ಸಾವಿರ ಗ್ರಾಮ ಪಂಚಾಯಿತಿ
ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಲು ಕಷ್ಟ ಎಂಬ ವರದಿಯನ್ನು ನೀಡಿದ್ದರು. ಈ ವರದಿ ಅನ್ವಯ ಆಯೋಗ ಚುನಾವಣೆಗಳನ್ನು ಮುಂದೂಡಿದೆ. ಆದರೆ, ದಿನಾಂಕ ಇನ್ನೂ ತಿಳಿಸಿಲ್ಲ. ರಾಜ್ಯದ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳ ಅಧಿಕಾರವಧಿ ಬಹುತೇಕ ಈ ತಿಂಗಳೇ ಅಂತ್ಯವಾಗುತ್ತೆ. ಸುಗಮ ಆಡಳಿತಕ್ಕಾಗಿ ಈಗ ಸರ್ಕಾರವೇ ಆಡಳಿತ ಸಮಿತಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ರಚಿಸಬೇಕಿದೆ. ಚುನಾವಣೆ ಆಯೋಗದ ನಿರ್ದಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಬೆಂಬಲಿಗರಿಗೆ ಮಣೆ ಹಾಕಲು
ರಾಜ್ಯ ಚುನಾವಣಾ ಆಯೋಗದ ಮೇಲೆ ಆಡಳಿತಾರೂಢ ಬಿಜೆಪಿ ಸರ್ಕಾರ ಒತ್ತಡ ತಂದು ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದಕ್ಕೆ ಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಮ್ಮ ಬೆಂಬಲಿಗರಿಗೆ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ನಡೆಸಲು ಅನುವು ಮಾಡಿ ಕೊಡುವ ಉದ್ದೇಶ ಇದರ ಹಿಂದೆ ಇದೆ ಎಂದು ಆರೋಪಿಸಲಾಗಿದೆ.

ಬಿಜೆಪಿ ತಾಳಕ್ಕೆ ಆಯೋಗ ಡ್ಯಾನ್ಸ್
ಕೊರೊನಾವೈರಸ್ ಸೋಂಕು ಹರಡುತ್ತದೆ ಎಂದು ನೆಪ ಹೇಳಿ ಚುನಾವಣಾ ಆಯೋಗ ಚುನಾವಣೆಗಳನ್ನು ಮುಂದೂಡಿಲ್ಲ. ಬದಲಿಗೆ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಚುನಾವಣಾ ಆಯೋಗ ಕುಣಿಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು












Click it and Unblock the Notifications