BJP Star Campaigner ಪಟ್ಟಿಯಿಂದ ಮೂವರು ಔಟ್: ಬಿಜೆಪಿಯಲ್ಲಿ ಪ್ರಭಾವ ಕಮ್ಮಿ ಆಯಿತೇ ಈ ಯುವ ನಾಯಕರದ್ದು?
ಬೆಂಗಳೂರು, ಏಪ್ರಿಲ್. 20: ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಜೆಪಿ ತನ್ನ ಪ್ರಮುಖ ಯುವ ನಾಯಕರಲ್ಲಿ ಒಬ್ಬರಾದ ತೇಜಸ್ವಿ ಸೂರ್ಯ ಅವರನ್ನು ಕೈಬಿಟ್ಟಿದೆ. ಇದು ರಾಜ್ಯ ರಾಜಕೀಯದಲ್ಲಿ ತೇಜಸ್ವಿ ಸೂರ್ಯ ಅವರ ಪಾತ್ರ ಮತ್ತು ಪ್ರಭಾವದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ.
30 ವರ್ಷದ ತೇಜಸ್ವಿ ಸೂರ್ಯ ಅವರು ಬಿಜೆಪಿಯ ಯುವ ಘಟಕದ ಅಧ್ಯಕ್ಷರು ಮತ್ತು ಬೆಂಗಳೂರು ದಕ್ಷಿಣದ ಸಂಸದರಾಗಿದ್ದಾರೆ. ಅವರು ಪಕ್ಷದ ಹಿಂದುತ್ವದ ಅಜೆಂಡಾವನ್ನು ಮತ್ತಷ್ಟು ಏರು ಧ್ವನಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷಗಳನ್ನು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ವಿರುದ್ಧದ ಟೀಕೆಗಳಿಗೆ ಹೆಸರುವಾಸಿಯಾಗಿದ್ದಾರೆ.

ಆದರೆ, ಬಿಜೆಪಿ ಬುಧವಾರ ಬಿಡುಗಡೆ ಮಾಡಿರುವ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿಲ್ಲ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಮತ್ತು ಕೇಂದ್ರದ ಹಲವಾರು ಹಿರಿಯ ನಾಯಕರು ಇದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ, ತೇಜಸ್ವಿ ಸೂರ್ಯ ಅವರನ್ನು ಕೈಬಿಟ್ಟಿರುವುದು ಅವರ ಬಗ್ಗೆ ಪಕ್ಷದಲ್ಲಿ ಯಾವುದೇ ಕೆಟ್ಟ ಅಭಿಪ್ರಾಯವಿದೆ ಎಂಬ ಸಂಕೇತವಲ್ಲ. ಬದಲಿಗೆ, ಅವರ ಕ್ಷೇತ್ರ ಮತ್ತು ಅವರ ಸಂಘಟನಾ ಕಾರ್ಯದ ಮೇಲೆ ಗಮನವನ್ನು ಕೇಂದ್ರೀಕರಿಸುವಂತೆ ಮಾಡುವ ಕಾರ್ಯತಂತ್ರದ ನಿರ್ಧಾರವಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅವರು ಟೇಕ್-ಆಫ್ ಆಗುವ ಮೊದಲು ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಟೀಕೆಗೆ ಗುರುಯಾಗಿತ್ತು. ಜೊತೆಗೆ ಟ್ರೋಲ್ ಪೇಜ್‌ಗಳಿಗೆ ಆಹಾರವಾಗಿದ್ದರು.

"ಅವರು ರಾಜ್ಯದ ಸಂಸದರು ಜೊತೆಗೆ ನಮ್ಮ ಜನಪ್ರಿಯ ನಾಯಕರಾಗಿದ್ದಾರೆ. ಅವರು ಹೇಗಾದರೂ ಹಲವು ವಾರಗಳಿಂದ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ತುರ್ತು ಸಭೆಗಳಿಗೆ ನೀಡಲಾಗುವ ಸೂಚನೆಯಲ್ಲಿ ಕಳುಹಿಸಬಹುದಾದ ಸಂಘಟನೆಯ ಜನರು ನಮಗೆ ಬೇಕು. ಎಲ್ಲರಿಗೂ ಚುನಾವಣೆಯ ಸಾರ್ವಕಾಲಿಕ ಪ್ರಚಾರದ ಜವಾಬ್ದಾರಿಯನ್ನು ಹೊರಲು ಸಾಧ್ಯವಿಲ್ಲ" ಎಂದು ಹೆಸರು ಹೇಳಲು ಇಚ್ಚಿಸದ ಬಿಜೆಪಿ ನಾಯಕರೊಬ್ಬರನ್ನು ಎನ್‌ಡಿಟಿವಿಗೆ ಉಲ್ಲೇಖಿಸಿದೆ.
ಪಟ್ಟಿಯಿಂದ ತೇಜಸ್ವಿ ಸೂರ್ಯ ಅವರನ್ನು ಹೊರಗಿಟ್ಟ ಮಾತ್ರಕ್ಕೆ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಇರುವುದಿಲ್ಲ. ಪ್ರಚಾರಕ್ಕೆ ಬರುವುದಿಲ್ಲ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಸದ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎಲ್ಲಾ ಯುವ ನಾಯಕರನ್ನು ಪಟ್ಟಿಯಿಂದ ಹೊರಗಿಡಲು ಬಿಜೆಪಿ ನಾಯಕತ್ವ ನಿರ್ಧರಿಸಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ರಾಜ್ಯಾದ್ಯಂತ ಕನಿಷ್ಠ 50 ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವಂತೆ ತೇಜಸ್ವಿ ಸೂರ್ಯ ಅವರನ್ನು ಕೋರಲಾಗಿದ್ದು, ನಾಳೆ ಅವರು ಪುತ್ತೂರು, ಬೈಂದೂರು ಮತ್ತು ಶಿವಮೊಗ್ಗದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ತೇಜಸ್ವಿ ಸೂರ್ಯ ಅವರ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಹಿಂದುತ್ವದ ಅಜೆಂಡಾದಿಂದ ಹೆಸರುವಾಸಿಯಾಗಿದ್ದಾರೆ. ಇಬ್ಬರೂ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಹೊರಗುಳಿದಿದ್ದಾರೆ.
ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನೂ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಗೆ ಸೇರಿಸಿಕೊಂಡಿಲ್ಲ. ವಿಜಯೇಂದ್ರ ಅವರನ್ನು ಬಿಎಸ್ ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ನೋಡಲಾಗುತ್ತಿದೆ. 224 ಸದಸ್ಯ ಬಲದ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications