ದೇವೇಗೌಡ ಕುಟುಂಬದ ಮೋದಿ ಭೇಟಿ ವೇಳೆ ನಿಖಿಲ್‌ ಕಾಣಿಸಿಕೊಂಡಿಲ್ಲವೇಕೆ?

ಬೆಂಗಳೂರು,ಡಿಸೆಂಬರ್‌ 22: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಲೋಕಸಭಾ ಚುನಾವಣೆಯತ್ತ ಕರ್ನಾಟಕದ ರಾಜಕೀಯ ನಾಯಕರು ಗಮನಹರಿಸಿದ್ದಾರೆ. 2024 ರ ಲೋಕಸಭಾ ಚುನಾವಣೆ ಹಿನ್ನಲೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಹೌದು, ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದ ಮಧ್ಯೆಯೇ ಹಾಲಿ, ಮಾಜಿ ಪ್ರಧಾನಿಗಳು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

Why Was Nikhil Kumaraswamy Absent During Former PM Deve Gowdas Family Meeting With PM Modi?

ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಭೇಟಿಯಾಗಿದ್ದಾರೆ, ಆದರೆ ನಿಖಿಲ್‌ ಕುಮಾರಸ್ವಾಮಿ ಈ ವೇಳೆ ಯಾಕೆ ಕಾಣಿಸಿಕೊಂಡಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂ‌ಬ ಮಾತುಗಳು ಕೇಳಿ ಬಂದಿತ್ತು. ಅದು ಅಲ್ಲದೇ ಲೋಕಸಭಾ ಚುನಾವಣೆಗೆ ಕ್ಷೇತ್ರ ಹಂಚಿಕೆ ವಿಚಾರವಾಗಿ ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದ್ದರು. ಈ ವೇಳೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನ ಕುಮಾರಸ್ವಾಮಿ ಕರೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿತ್ತು.

ಅನಾರೋಗ್ಯದ ಸಮಸ್ಯೆ ಎದುರಿಸುತ್ತಿರುವ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಹಾಗೂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ನಿಖಿಲ್‌ ಕುಮಾರಸ್ವಾಮಿಯ ರಾಜಕೀಯ ನೆಲೆಯನ್ನ ರೂಪಿಸಬೇಕು ಎಂಬ ಚಿಂತನೆಯೊಂದಿಗೆ ಅಮಿತ್‌ ಶಾ ಹಾಗೂ ಜೆ ಪಿ ನಡ್ಡಾ ಅವರನ್ನ ನಿಖಿಲ್‌ ಕುಮಾರಸ್ವಾಮಿ ಅವರನ್ನ ಕುಮಾರಸ್ವಾಮಿ ಅವರು ಭೇಟಿ ಮಾಡಿಸಿದ್ದರು. ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಮುಂದಿನ ಐದು ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂಬ ಮಾತಿಗೆ ಜೆಡಿಎಸ್‌ ನ ಹಲವು ಶಾಸಕರು ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಒತ್ತಡ ಹಾಕಿದ್ದರು ಅದರಂತೆ ನಿಖಿಲ್‌ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಈ ಬಾರೀ ಮೋದಿ ಭೇಟಿ ವೇಳೆ ನಿಖಿಲ್‌ ಕುಮಾರಸ್ವಾಮಿ ಅವರು ಕಾಣಿಸಿಕೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈಗಾಗಲೇ ಎರಡು ಬಾರೀ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ ಈ ಬಾರೀಯೂ ಸ್ಪರ್ಧೆ ನಡೆಸಿದರೇ ಕುಟುಂಬ ರಾಜಕಾರಣದ ಹಣೆ ಪಟ್ಟಿ ಮತ್ತೆ ಬರಲಿದೆ ಎನ್ನಲಾಗಿದೆ. ಅಲ್ಲದೇ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಪ್ರಬಲ್ಯ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಈ ಬಾರೀಯೂ ಸ್ಪರ್ಧೆ ನಡೆಸಿದರೇ ಮತ್ತೆ ಸೋಲು ಸಂಭವಿಸಬಹುದು ಎಂದು ಹೇಳಲಾಗಿದೆ.

ಈ ಬಾರೀ ಕಾರ್ಯಕರ್ತರಿಗೆ ಅವಕಾಶವನ್ನ ಕಲ್ಪಿಸಿಕೊಡಬೇಕು ಎಂದು ಕೊಡಿರುವ ದಳಪತಿಗಳು ಮಂಡ್ಯದಿಂದ ದೊಡ್ಡಗೌಡ ಸ್ಪರ್ಧೆ ಮಾಡಿದರೇ ಸುಲಭವಾಗಿ ಗೆಲ್ಲಬಹುದು ಎಂಬುದು ಹೆಚ್‌ ಡಿ ಕುಮಾರಸ್ವಾಮಿ ಅವರ ಲೆಕ್ಕಾಚಾರವಾಗಿದೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆ ಕಣದಿಂದ ನಿಖಿಲ್‌ ಕುಮಾರಸ್ವಾಮಿ ದೂರ ಉಳಿಯಲಿದ್ದಾರೆ. ಹೀಗಾಗಿ ಪ್ರಧಾನಿ ಭೇಟಿಯ ವೇಳೆ ನಿಖಿಲ್‌ ಕುಮಾರಸ್ವಾಮಿ ಅವರು ಕಾಣಿಸಿಕೊಂಡಿಲ್ಲ ಎನ್ನಲಾಗಿದೆ.

ಹಾಸನದಿಂದ 2024 ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರಾದ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಹೇಳಿದ್ದಾರೆ. ಅಲ್ಲದೇ ಮಂಡ್ಯ ಅಥವಾ ತುಮಕೂರು ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ದೇವೇಗೌಡರು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಇನ್ನೂ ನಿಖಿಲ್‌ ಕುಮಾರಸ್ವಾಮಿ ಈ ಬಾರೀಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, 28 ಕ್ಷೇತ್ರಗಳಲ್ಲಿ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+