ವಿಜಯೇಂದ್ರ ಪದಗ್ರಹಣಕ್ಕೆ ರಮೇಶ್ ಜಾರಕಿಹೊಳಿ ಸೇರಿದಂತೆ ಬಾಂಬೆ ಬಾಯ್ಸ್ ಗೈರು! ಮುನಿಸೇನು?
ಬೆಂಗಳೂರು, ನವೆಂಬರ್ 15: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಕಾರ್ಯಕರ್ತರ ಜಯಕಾರ, ಹಿರಿಯರಿಂದ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಆದರೆ, ವಲಸಿಗ ಬಿಜೆಪಿಗರಾದ ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಹೌದು, ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಆಯ್ಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಹಲವು ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಸಿದ್ದಾರೆ. ಇನ್ನೂ ಮಾಜಿ ಸಚಿವರಾದ ಸಿ ಟಿ ರವಿ, ವಿ ಸೋಮಣ್ಣ ಅಸಮಾಧಾನಗೊಂಡಿದ್ರೆ, ಇತ್ತ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮೌನಕ್ಕೆ ಜಾರಿದ್ದಾರೆ. ಅಲ್ಲದೇ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿಗರ ನಡುವೆ ಸಾಕಷ್ಟು ಮನಸ್ತಾಪಕ್ಕೆ ಕಾರಣವಾಗಿದೆ.
ಈಗಾಗಲೇ ಮೂಲ ಬಿಜೆಪಿ ಸೇರ್ಪಡೆಯಾದ 17 ಜನ ವಲಸಿಗ ನಾಯಕರಲ್ಲಿ ಹೆಚ್ ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಎಸ್ ಟಿ ಸೋಮಶೇಖರ್, ಕೆ ಗೋಪಾಲಯ್ಯ, ಹಾಗೂ ಶಿವರಾಮ್ ಹೆಬ್ಬಾರ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಕೇಳಿ ಬಂದಿತ್ತು.
ಅಲ್ಲದೇ ಕೆಲವು ವಲಸಿಗ ಬಿಜೆಪಿಗರಿಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಕೊಟ್ಟ ಮಾತನ್ನ ಈಡೇರಿಸಿಲ್ಲ ಎಂಬ ಅಸಮಾಧಾನವನ್ನ ವ್ಯಕ್ತಪಡಿಸಿದರು. ಇದೀಗ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಹುದ್ದೆಯನ್ನ ಅಲಂಕರಿಸಿರುವ ವಿಚಾರವಾಗಿ ಮೂಲ ವಲಸಿಗರು ಮೌನಕ್ಕೆ ಜಾರಿದ್ದಾರೆ.

ಇನ್ನೂ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಪದಗ್ರಹಣಕ್ಕೆ ಹಲವಾರು ಬಿಜೆಪಿ ಘಟನುಘಟಿ ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಮೇಶ್ ಜಾರಕಿಹೊಳಿ ಸೇರಿದಂತೆ ಬಹುತೇಕ ಎಲ್ಲಾ ವಲಸಿಗ ಬಿಜೆಪಿಗರು ಗೈರಾಗಿದ್ದರೆ.
ನೂತನ ಅಧ್ಯಕ್ಷರಾದ ಬಿವೈ ವಿಜಯೇಂದ್ರರ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ಬಿಜೆಪಿ ನಾಯಕರಾದ ಆರ್. ಅಶೋಕ್, ಅಶ್ವಥ್ ನಾರಾಯಣ, ಸಿಟಿ ರವಿ, ವಿ. ಸೋಮಣ್ಣ, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾಳಿ, ಎಸ್‌ಟಿ ಸೋಮಶೇಖರ್, ಡಾ.ಕೆ. ಸುಧಾಕರ್ ಮುಂತಾದ ಹಿರಿಯ ನಾಯಕರು ಗೈರಾಗಿದ್ದರು.
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ಅಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ್, ಹಿರಿಯ ನಾಯಕ ರಾಮಚಂದ್ರ ಗೌಡ, ಮುರುಗೇಶ್ ನಿರಾಣಿ, ಎನ್ ಮಹೇಶ್, ರಾಮಚಂದ್ರಗೌಡ, ಶ್ರೀರಾಮುಲುಮಾಜಿ ಸಚಿವರು, ಮಾಜಿ ಹಾಲಿ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರು, ಪಕ್ಷದ ರಾಜ್ಯ-ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications