ಚಾಮರಾಜನಗರಕ್ಕೆ ಏಕೆ ಭೇಟಿ ಇಲ್ಲ?; ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಜುಲೈ 01; 'ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಕುರ್ಚಿ ಹೋಗುತ್ತೆ ಎನ್ನುವ ಮೂಢನಂಬಿಕೆ ಅವರಿಗಿದೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಟ್ವೀಟ್ ಮಾಡಿದ್ದಾರೆ.

ಗುರುವಾರ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದು ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. 'ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಲು ಹೊರಟಿದ್ದಾರೆ' ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ, 'ನಾನು ಮುಖ್ಯಮಂತ್ರಿಯಾದ ಮೇಲೆ 12 ಬಾರಿ ಚಾಮರಾಜನಗರಕ್ಕೆ ಹೋಗಿದ್ದೆ. ಪೂರ್ಣ 5 ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿಲ್ಲವೆ?' ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಕೋವಿಡ್ ನಂತಹ ಸಂದಿಗ್ಧ ಸಮಯದಲ್ಲಿ ಅಧಿವೇಶನ ಕರೆದು ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕು. ಆದರೆ ಸರ್ಕಾರಕ್ಕೆ ಇದ್ಯಾವುದೂ ಬೇಡ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಸರ್ಕಾರ ಅಧಿವೇಶನ ಕರೆಯುತ್ತಿಲ್ಲ

"ಕೊರೊನಾ ಎರಡನೇ ಅಲೆಯಿಂದಾಗಿ ಸಾವಿರಾರು ಜನ ಸಾವಿಗೀಡಾಗಿದ್ದಾರೆ, ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ. ಇಂಥಾ ಸಂದಿಗ್ಧ ಸಮಯದಲ್ಲಿ ಅಧಿವೇಶನ ಕರೆದು ವಿರೋಧ ಪಕ್ಷಗಳೊಂದಿಗೆ ಚರ್ಚಿಸಿ, ಸಲಹೆ ಪಡೆಯಬೇಕಿತ್ತು" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರಕ್ಕೆ ಭೇಟಿ

"ನಾನು ಮುಖ್ಯಮಂತ್ರಿಯಾದ ಮೇಲೆ 12 ಬಾರಿ ಚಾಮರಾಜನಗರಕ್ಕೆ ಹೋಗಿದ್ದೆ. ಪೂರ್ಣ 5 ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿಲ್ಲವೆ?. ಅಧಿಕಾರದ ಆಸೆಗೆ ಜನರ ಕಷ್ಟ ಕೇಳದೆ ದೂರ ಓಡಿದರೆ ಹೇಗೆ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕುಟುಂಬದ ನೋವು ಕೇಳುವವರು ಯಾರು?

"ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವನ್ನಪ್ಪಿ ಒಂದೂವರೆ ತಿಂಗಳಾದರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನೂ ಜಿಲ್ಲೆಗೆ ಭೇಟಿನೀಡಿಲ್ಲ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Recommended Video

    ಮಂಗಳಮುಖಿಯರ ಕಷ್ಟಗಳು ಹೇಗೆಲ್ಲಾ ಇರುತ್ತೇ ಗೊತ್ತಾ | Oneindia Kannada

    10ನೇ ತರಗತಿ ಪರೀಕ್ಷೆಯನ್ನು ನಡೆಸುವುದು

    "ಕೊರೊನಾ ಕಾರಣದಿಂದ ಪಿ.ಯು.ಸಿ ಪರೀಕ್ಷೆಯನ್ನೇ ಮುಂದೂಡಿರುವಾಗ ಹತ್ತನೇ ತರಗತಿಗೆ ಪರೀಕ್ಷೆ ನಡೆಸುವುದು ಅರ್ಥಹೀನ. ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಲು ಹೊರಟಿದ್ದಾರೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+