ನಂದಿಬೆಟ್ಟದಲ್ಲಿ ಕಾಡ್ಗಿಚ್ಚು, ನೂರಾರು ಎಕರೆ ಹುಲ್ಲು ನಾಶ
ಚಿಕ್ಕಬಳ್ಳಾಪುರ, ಫೆಬ್ರವರಿ 23: ಪ್ರವಾಸಿ ತಾಣವಾದ ನಂದಿಬೆಟ್ಟದ ತಪ್ಪಲಲ್ಲಿ ಗುರುವಾರ ಮಧ್ಯಾಹ್ನ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಪ್ರದೇಶದಲ್ಲಿದ್ದ ಬಾದೆ ಹುಲ್ಲು ಬೆಂಕಿಗೆ ಆಹುತಿಯಾಗಿದೆ.
ಬೆಟ್ಟದ ತಪ್ಪಲು ಪ್ರದೇಶಕ್ಕೆ ಹೊಂದಿಕೊಂಡಿರುವ ಅಂಗಟ್ಟ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡಿದೆ. ಅರಣ್ಯ ಇಲಾಖೆಯ 25 ಸಿಬ್ಬಂದಿ ಮಧ್ಯಾಹ್ನ 1ರಿಂದ ರಾತ್ರಿ 7.30 ವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
'ಮಳೆಗಾಲದಲ್ಲಿ ಬೆಟ್ಟದಲ್ಲಿ ದನಕರು ಮೇಯಿಸಲು ಹುಲ್ಲು ಚೆನ್ನಾಗಿ ಬೆಳೆಯಲಿ ಎನ್ನುವ ಉದ್ದೇಶಕ್ಕೆ ರೈತರು ಆಗಾಗ ಅರಣ್ಯಕ್ಕೆ ಬೆಂಕಿ ಹಾಕುತ್ತಿರುತ್ತಾರೆ. ಆ ರೀತಿ ಇಲ್ಲಿ ಬೆಂಕಿ ಹಾಕಿರುವ ಸಾಧ್ಯತೆ ಇದೆ. ಬೆಂಕಿಯಿಂದ ಗಿಡಮರಗಳಿಗೆ ಹಾನಿ ಆಗಿಲ್ಲ. ಪಕ್ಷಿಗಳ ಗೂಡುಗಳು ಸುಟ್ಟಿರುವುದು ಹೊರತುಪಡಿಸಿದಂತೆ ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿ ಆಗಿಲ್ಲ' ಎಂದು ವಲಯ ಅರಣ್ಯಾಧಿಕಾರಿ ವಿಕ್ರಂ ರೆಡ್ಡಿ ತಿಳಿಸಿದ್ದಾರೆ.

'ಬೆಟ್ಟದಲ್ಲಿ ಬೆಂಕಿ ವ್ಯಾಪಿಸುವುದನ್ನು ತಡೆದಿದ್ದೇವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಾತ್ರಿ ಕಾಡ್ಗಿಚ್ಚಿನ ಸ್ಥಳದಲ್ಲಿಯೇ ಬೀಡು ಬಿಟ್ಟಿರುವ ನಮ್ಮ ಸಿಬ್ಬಂದಿ ಪರಿಸ್ಥಿತಿ ಮೇಲೆ ನೀಗಾ ಇಟ್ಟಿದ್ದಾರೆ' ಎಂದು ಅವರು ಹೇಳಿದರು.












Click it and Unblock the Notifications