HC Mahadevappa: ನಾನು ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ: ಸಚಿವ ಹೆಚ್ ಸಿ ಮಹದೇವಪ್ಪ ಘೋಷಣೆ
ಬೆಂಗಳೂರು, ಅಕ್ಟೋಬರ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ಹಿರಿಯ ಸಚಿವ ಹೆಚ್.ಸಿ ಮಹದೇವಪ್ಪ ಅವರು ಹಿಂದೂ ಧರ್ಮದಲ್ಲಿನ ಜಾತಿಯತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಬೌದ್ಧ ಧರ್ಮದ ಬಗ್ಗೆ ಪ್ರಚಾರ ಮಾಡುವುದಾಗಿ ಹಾಗೂ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಘೋಷಣೆ ಮಾಡಿದ್ದಾರೆ.
ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಯಶ ಕೋರಿರುವ ಸಚಿವ ಸಂಪುಟದ ಹಿರಿಯ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಬೌದ್ಧ ಧರ್ಮವನ್ನು ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನೂ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ ಸುಧಾರಣೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ ಎಂದು ಸಚಿವ ಹೆಚ್ಸಿ ಮಹಾದೇವಪ್ಪ ಕಿರಿಕಾರಿದ್ದಾರೆ.
ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಬಾಬಾ ಸಾಹೇಬರ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂದು ಸಾಮಾಜಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.












Click it and Unblock the Notifications