ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಓವೈಸಿ: ಕಾಂಗ್ರೆಸ್ ಮತಬ್ಯಾಂಕ್‌ಗೆ ಕನ್ನ ಹಾಕುವ ಪ್ರಯತ್ನವೇ?
ಬೆಂಗಳೂರು, ಏಪ್ರಿಲ್. 27: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಸ್ಲಿಂ ಸಮುದಾಯದ ಮತಗಳಿರುವ, ಅದರಲ್ಲೂ ಉರ್ದು ಭಾಷಿಕರಿರುವ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ಕಾಂಗ್ರೆಸ್ ಮತಗಳನ್ನು ಸೆಳೆಯುವ ಸಾಧ್ಯತೆಯಿದೆ.
ಈ ಹಿಂದೆ ಅಸಾದುದ್ದೀನ್ ಓವೈಸಿ ನೇತೃತ್ವದ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸುಮಾರು 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿತ್ತು ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳದ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಒಸ್ಮಾನ್ ಘನಿ ಹೇಳಿದ್ದರು. ಆದರೆ ಚುಣಾವಣೆಗೂ ಮೊದಲೇ ಎಐಎಂಐಎಂ- ಜೆಡಿಎಸ್ ಮೈತ್ರಿ ಮುರಿದು ಬಿದ್ದಿದೆ.

ಸದ್ಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರ - 2 ಕ್ಷೇತ್ರದಿಂದ ಲತೀಫ್ಖಾನ್ ಅಮೀರ್ಖಾನ್ ಪಠಾಣ್, ಬಸವನ ಭಾಗೇವಾಡಿ ಕ್ಷೇತ್ರದಿಂದ ಅಲ್ಲಾಬಕ್ಷ್ ಬಿಜಾಪುರ ಮತ್ತು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಿಂದ ದುರ್ಗಪ್ಪ ಕಾಶಪ್ಪ ಬಿಜವಾಡ ಅವರನ್ನು ಸ್ಪರ್ಧೆಗಿಳಿಸಿದೆ.
ಬೆಳಗಾವಿ ಉತ್ತರದಲ್ಲಿ ಬಿಜೆಪಿಯ ರವಿ ಪಾಟೀಲ ಕಾಂಗ್ರೆಸ್‌ನ ಅಸೀಪ್ ಸೇಠ್ ಮತ್ತು ಎಎಪಿ ರಾಜಕುಮಾರ ಟೋಪಣ್ಣನವರ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಆಡಳಿತವಿದ್ದು, ಹಾಲಿ ಶಾಸಕ ಅನಿಲ ಬೆನಕೆಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ. ಆದರೆ, ಈ ಕ್ಷೇತ್ರದಲ್ಲಿ ಎಐಎಂಐಎಂ ತನ್ನ ಅಭ್ಯರ್ಥಿಯಾಗಿ ತೀಫ್ಖಾನ್ ಅಮೀರ್ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಪಾಲಾಗಲಿರುವ ಮತಗಳಲ್ಲಿ ವಿಭಜನೆಯಾಗುವ ಸಾಧ್ಯತೆಯಿದೆ.

ಬಸವನ ಬಾಗೇವಾಡಿ ಕ್ಷೇತ್ರದಿಂದ ಅಲ್ಲಾಬಕ್ಷ್ ಬಿಜಾಪುರ ಅವರನ್ನು ಎಐಎಂಐಎಂ ಕಣಕ್ಕಿಳಿಸಿದೆ. ಬಿಜೆಪಿ ಕೆಎಸ್ ಬೆಳ್ಳುಬ್ಬಿ, ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಶಿವಾನಂದ ಪಾಟೀಲರನ್ನೇ ಕಣಕ್ಕಿಳಿಸಿದೆ. ಈಗಾಗಲೇ ಎಐಎಂಐಎಂ ಅಭ್ಯರ್ಥಿ ಅಲ್ಲಾಬಕ್ಷ್ ಬಿಜಾಪುರ ಅವರು ಅಲ್ಪ ಸಂಖ್ಯಾತ ಸಮುದಾಯದವರು ರಾಷ್ಟ್ರೀಯ ಪಕ್ಷಗಳನ್ನು ಬಹಿಷ್ಕರಿಸಬೇಕು ಎಂದು ಮತಯಾಚನೆ ಆರಂಭಿಸಿದ್ದಾರೆ. ಇದು ಕಾಂಗ್ರೆಸ್‌ನ ಮತಗಳಿಗೆ ಕೊಂಚವಾದರೂ ಪೆಟ್ಟು ನೀಡುವ ಸಾಧ್ಯತೆಯಿದೆ.
ಎಐಎಂಐಎಂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಿಂದ ದುರ್ಗಪ್ಪ ಕಾಶಪ್ಪ ಬಿಜವಾಡ ಅವರನ್ನು ಸ್ಪರ್ಧೆಗಿಳಿಸಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ ಕ್ರಾಂತಿ ಕಿರಣ್ ಅವರನ್ನು ಕಣಕ್ಕಿಳಿಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಸ್ಥಾನದಿಂದ ಪ್ರಸಾದ್ ಅಬ್ಬಯ್ಯ ಅವರನ್ನು ಕಣಕ್ಕಿಳಿಸಿದೆ. ಅಬ್ಬಯ್ಯ ಈ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.
ಕಾಂಗ್ರೆಸ್‌ನ ಪ್ರಸಾದ್ ಅಬ್ಬಯ್ಯ 2013 ರಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷವು ಹುಬ್ಬಳ್ಳಿ ಧಾರವಾಡ ಪೂರ್ವದಿಂದ ಬಸವರಾಜ ತೆಡ್ರಾಲ್ ಅವರನ್ನು ಮತ್ತು ಜಾತ್ಯತೀತ ಜನತಾ ದಳ ವೀರಭದ್ರಪ್ಪ ಅವರನ್ನು ಕಣಕ್ಕಿಳಿಸಿದೆ. ಇಲ್ಲಿ ಅಲ್ಪ ಸಂಖ್ಯಾತ ಮತಗಳ ಮೇಲೆ ಕಣ್ಣು ಹಾಕಿರುವ ಎಐಎಂಐಎಂ ದುರ್ಗಪ್ಪ ಕಾಶಪ್ಪ ಬಿಜವಾಡ ಅವರನ್ನು ಕಣಕ್ಕಿಳಿಸಿದೆ.

ಇನ್ನು, ಒಬಿಸಿ ವರ್ಗದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಬಸವರಾಜ ಬೊಮ್ಮಾಯಿ ಸರ್ಕಾರದ ಇತ್ತೀಚಿನ ನಿರ್ಧಾರವನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಓವೈಸಿ ಕರೆದಿದ್ದು, ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಯಾಕೆ ಪ್ರತಿಭಟನೆಗಳು ನಡೆಯುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
"ಕರ್ನಾಟಕದಲ್ಲಿ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಮುಸ್ಲಿಂ ಮತಗಳ "ವಿಭಜನೆ"ಗೆ ಕಾರಣವಾಗುತ್ತದೆ ಎಂದು ಕೆಲವು ಪಕ್ಷಗಳು ಪದೇ ಪದೇ ಟೀಕಿಸುತ್ತಿವೆ. ಆದರೆ, ಜಾತ್ಯತೀತ ನಾಯಕರು ಮತ್ತು ಪಕ್ಷಗಳು ಇದಕ್ಕೆ ಸಂಬಂಧಿಸಿ ಗಟ್ಟಿಯಾದ ಟೀಕೆಗಳು ಏಕೆ ಮಾಡಲಿಲ್ಲ" ಎಂದು ಟೀಕಿಸಿದ್ದಾರೆ.
ಇನ್ನು, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕಿದ್ದ ಅಸಾದುದ್ದೀನ್ ಓವೈಸಿ ಅದನ್ನು ಇಲ್ಲಿಗೆ ಬಿಟ್ಟಿದ್ದಾರೆ. ಕರ್ನಾಟಕದಲ್ಲಿ 224 ಸದಸ್ಯರ ವಿಧಾನಸಭೆಗೆ 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಎಐಎಂಐಎಂ ಜೆಡಿಎಸ್ ಅನ್ನು ಬೆಂಬಲಿಸಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ಆದರೆ, ಈ ಬಾರಿ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಲಿಸಿ ಕಾಂಗ್ರೆಸ್ ಮತಗಳಿಗೆ ಕನ್ನ ಹಾಕಲು ಹೊರಟಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications