ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಣ್ಯ ಹುತಾತ್ಮರ ಪರಿಹಾರ: 30 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಳ: ಸಿಎಂ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 11: ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ ಹಾಲಿ 30 ಲಕ್ಷ ರೂ.ಇದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಂಗಳೂರಿನಲ್ಲಿ ಭಾನುವಾರ ಅರಣ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ಸಮಾರಂಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿದರು. ಅರಣ್ಯ ಹುತಾತ್ಮರಿಗೆ 20 ಲಕ್ಷ ರೂ.ಗಳಿದ್ದ ಪರಿಹಾರವನ್ನು 30 ಲಕ್ಷ ರೂ.ಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಚ್ಚಿಸಿದ್ದರು. ಹುತಾತ್ಮರ ನೇಮಕಾತಿ, ಕಲ್ಯಾಣ ಎಲ್ಲವನ್ನೂ ಸರ್ಕಾರ ಅತ್ಯಂತ ಸಹಾನುಭೂತಿಯಿಂದ ಮಾಡಲಿದೆ. ನೀವು ಅರಣ್ಯ ರಕ್ಷಣೆ ಮಾಡಿ, ಸರ್ಕಾರ ನಿಮ್ಮ ರಕ್ಷಣೆ ಮಾಡುತ್ತದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಹೇಳಿದ ಕಟೀಲ್!ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಹೇಳಿದ ಕಟೀಲ್!

ಅರಣ್ಯ ಸೂಕ್ಷ್ಮ ಪ್ರದೇಶಗಳನ್ನು ಉಳಿಸಿಕೊಳ್ಳಲು ವಿಶೇಷ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ಮಾಡಿದೆ. ಅರಣ್ಯ ಮತ್ತು ಪರಿಸರ ಇಲಾಖೆ ನೈಸರ್ಗಿಕ ಸಂಪತ್ತು ರಕ್ಷಿಸುತ್ತಿದೆ. ಪರಿಸರ ನಷ್ಟವನ್ನು ತಪ್ಪಿಸುವ ಪ್ರಯತ್ನವನ್ನು ಆಸಕ್ತಿ ವಹಿಸಿ ಮಾಡುತ್ತಿರುವ ಇಲಾಖೆಗೆ ಅಭಿನಂದನೆಗಳು.

ಒಂದು ವರ್ಷದಲ್ಲಿ ಗುವ ಪರಿಸರ ನಷ್ಟವನ್ನು ಅದೇ ವರ್ಷ ತುಂಬುವ ಕೆಲಸ ಮಾಡಬೇಕು.

ಭಾರತದ ದೇಶದಲ್ಲಿ ಪರಿಸರ ಆಯವ್ಯಯ ರೂಪಿಸಿದ ಪ್ರಥಮ ರಾಜ್ಯ ನಮ್ಮದು. ನೂರು ಕೋಟಿ ರೂ.ಗಳನ್ನು ಇದಕ್ಕೆ ಮೀಸಲಿಡಲಾಗಿದೆ. ಈಗಾಗಲೇ ಪರಿಸರ ಆಯವ್ಯಯ ಮಾಡುವ ಬಗೆಯನ್ನು ಇಲಾಖೆ ರೂಪಿಸಿದೆ. ಸರ್ಕಾರ ಕ್ರಿಯಾಯೋಜನೆಗೆ ಅನುಮೋದನೆ ಕೂಡ ನೀಡಿದೆ. ಈ ವರ್ಷ 100 ಕೋಟಿ ರೂ.ಗಳಲ್ಲಿ ಅರಣ್ಯೀಕರಣ ಹೆಚ್ಚಿಸಬಹುದು ಎಂದರು.

ಶೇ.21 ರಷ್ಟಿರುವ ಅರಣ್ಯ ಪ್ರದೇಶ ಶೇ.30ಕ್ಕೆ ಹೆಚ್ಚಿಸುವ ಗುರಿ

ಶೇ.21 ರಷ್ಟಿರುವ ಅರಣ್ಯ ಪ್ರದೇಶ ಶೇ.30ಕ್ಕೆ ಹೆಚ್ಚಿಸುವ ಗುರಿ

ಕರ್ನಾಟಕ ರಾಜ್ಯದಲ್ಲಿ ಸರಿಸುಮಾರು ನಾಲ್ಕು ಲಕ್ಷ ಹೆಕ್ಟೇರ್‌ಗಿಂತಲೂ ಅಧಿಕ ಬಂಜರು ಭೂಮಿ ಇದೆ. ಇದನ್ನು ನಾವು ಅರಣ್ಯೀಕರಣ ಮಾಡುವ ಮೂಲಕ ಅರಣ್ಯ ಪ್ರದೇಶ ಹೆಚ್ಚಿಸಬಹುದಾಗಿದೆ. ಬಹಳಷ್ಟು ಗುಡ್ಡಗಾಡುಗಳಿವೆ. ಅಲ್ಲಿ ಮೂಲ ಗಿಡಗಳನ್ನು ಬೆಳೆಸುವ ಮೂಲಕ ಉತ್ತಮಗೊಳಿಸಬಹುದು. ಟಾಟಾ ಸಂಸ್ಥೆಯ ಕಬ್ಬಿಣದ ಅದಿರಿನ ಗಣಿಗಳು ಜಮ್ ಶೇಡ್ ಪುರದಲ್ಲಿದ್ದು, ಆ ಪ್ರದೇಶ ಸಂಪೂರ್ಣ ಹಸರಿನಿಂದ ಕಂಗೊಳಿಸುತ್ತಿದೆ. ಗಣಿಗಳಲ್ಲಿ ಮಾಡಬಹುದಾದರೆ ಗುಡ್ಡಗಾಡಿನಲ್ಲಿ ಸಾಧ್ಯವಿಲ್ಲವೇ. ಇಚ್ಚಾಶಕ್ತಿ ಇದ್ದರೆ ಅರಣ್ಯ ಪ್ರದೇಶ ಹೆಚ್ಚಿಸೋಣ. ಜನಾಂಗಕ್ಕೆ ಇದಕ್ಕಿಂತ ಹೆಚ್ಚಿನ ಕೊಡುಗೆ ಮತ್ತೊಂದಿಲ್ಲ ಎಂದು ಬೊಮ್ಮಾಯಿ ಕರೆ ನೀಡಿದರು.

ಆನೆ ರಕ್ಷಣೆಯ ವಿಧಾನಕ್ಕೆ 100ಕೋಟಿ ರೂ.

ಆನೆ ರಕ್ಷಣೆಯ ವಿಧಾನಕ್ಕೆ 100ಕೋಟಿ ರೂ.

ಅರಣ್ಯ ಇಲಾಖೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಕಡಿಮೆ ಮಾಡುವತ್ತ ಶ್ರಮಿಸಬೇಕು. ಆನೆಗಳ ಕಾಟ ದೊಡ್ಡ ಪ್ರಮಾಣದಲ್ಲಿ ಇದೆ. ಅವುಗಳನ್ನು ರಕ್ಷಣೆಗಾಗಿ ಹೊಸ ವಿಧಾನ ಬಳಸಲು 100 ಕೋಟಿ ರೂ.ಗಳನ್ನು ಇದಕ್ಕಾಗಿಯೇ ಒದಗಿಸಲಾಗಿದೆ. ದಿವಂಗತ ಉಮೇಶ್ ಕತ್ತಿಯವರು ಬಹಳ ಆಸಕ್ತಿ ವಹಿಸಿದ್ದರು. ಬೇಲಿ ಹಾಕುವ ಹೊಸ ವಿಧಾನಗಳ ಬಗ್ಗೆ ಚರ್ಚೆ ಮಾಡಿ ಬಂಡೀಪುರದಲ್ಲಿ ಅದರ ಪ್ರಯೋಗವೂ ನಡೆಯುತ್ತಿದೆ. ಉಮೇಶ್ ಕತ್ತಿಯವರು ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅವರ ಕರ್ತವ್ಯವನ್ನು ಸೂಕ್ತವಾಗಿ ನಿರ್ವಹಿಸಿ ಯಾವುದೇ ರಾಜಿಯನ್ನು ಮಾಡಿಕೊಳ್ಳದ ವ್ಯಕ್ತಿಯಾಗಿದ್ದರು. ಒತ್ತಡಗಳಿಗೆ ಮಣಿಯಲಿಲ್ಲ. ಇನ್ನಷ್ಟು ದಿನ ಅರಣ್ಯ ಸಚಿವರಾಗಿ ಕೆಲಸ ಮಾಡಬೇಕಿತ್ತು. ಅಕಾಲಿಕವಾಗಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅವರ ನೆನಪು ಸದಾ ಕಾಲ ಮನದಾಳದಲ್ಲಿ ಇರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಅರಣ್ಯ ನಮ್ಮ ಬದುಕಿನ ಭಾಗವಾಗಿದೆ

ಅರಣ್ಯ ನಮ್ಮ ಬದುಕಿನ ಭಾಗವಾಗಿದೆ

ಅರಣ್ಯ ಕೇವಲ ನಿಸರ್ಗದ ಭಾಗವಲ್ಲ ನಮ್ಮ ಬದುಕಿನ ಭಾಗವೂ ಹೌದು. ಅರಣ್ಯ ಮತ್ತು ನಾಗರೀಕತೆಗೆ ಸಂಬಂಧವಿಲ್ಲದಂತೆ ನಾವು ವರ್ತಿಸುತ್ತಿದ್ದೇವೆ. ಅರಣ್ಯ ನಮಗೆ ಮಳೆ, ಬೆಳೆ, ಆಹಾರ ಕೊಟ್ಟು ಶುದ್ಧವಾದ ಗಾಳಿಯನ್ನು ನೀಡುತ್ತದೆ. ಯಾವ ದೇಶಕ್ಕೆ ಅರಣ್ಯ ಇಲ್ಲವೋ ಅವು ಮರಳುಗಾಡಾಗಿದೆ. ನಮ್ಮ ಪುಣ್ಯ ನಮ್ಮ ದೇಶದಲ್ಲಿ ಅರಣ್ಯವಿದ್ದು, ಬೆಳೆಸಲೂ ಅವಕಾಶವಿದೆ. ಪಶ್ಚಿಮ ಘಟ್ಟಗಳು ಇಲ್ಲದೇ ಕರ್ನಾಟಕ ಮತ್ತು ಇತರ ದಕ್ಷಿಣದ ರಾಜ್ಯಗಳನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅರಣ್ಯ ಮಹತ್ವ ತಿಳಿಸಿದರು.

ಪಶ್ಚಿಮ ಘಟ್ಟದಲ್ಲಿ ಹರಿಯುವ ಬಹುತೇಕ ನದಿಗಳು ಬಂಗಾಳಕೊಲ್ಲಿಗೆ ಸೇರುತ್ತವೆ. ರಾಜ್ಯದ ಉದ್ದಗಲಕ್ಕೂ ಕೂಡ ನೀರಿನ ಸಂಪತ್ತು ಲಭ್ಯವಿದೆ. ಮಳೆಯೂ ವಿಸ್ತೃತವಾಗಿ ಕರ್ನಾಟಕ, ಕೇರಳ, ಆಂದ್ರಪದೇಶ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್ ಭಾಗಗಳಿಗೆ ಪಶ್ಚಿಮ ಘಟ್ಟಗಳಿಂದ ಬರುತ್ತದೆ. ಒಂದು ಪಶ್ಚಿಮ ಘಟ್ಟದಿಂದ ಇಷ್ಟೆಲ್ಲಾ ಅನುಕೂಲಗಳಿರುವಾಗ ಇತರ ಪ್ರದೇಶಗಳ ಅರಣ್ಯಗಳ ರಕ್ಷಣೆ ಅತ್ಯಗತ್ಯ. ಪರಿಸರ ಅಸಮತೋಲನ ನಮ್ಮ ಜೀವನಶೈಲಿಯಿಂದ ಆಗುತ್ತಿದೆ. ಹಲವಾರು ವರ್ಷಗಳಿಂದ ಮನುಷ್ಯ ತನ್ನ ಬೇಡಿಕೆಗೆ ಬಳಸುತ್ತಿರುವುದರಿಂದ ಆಗುತ್ತಿದೆ ಎಂದು ಸಂಶೋಧಕರೊಬ್ಬರು ಹೇಳಿದ್ದರು ಎಂಬುದನ್ನು ಬೊಮ್ಮಾಯಿ ವಿವರಿಸಿದರು.

 2,000 ವರ್ಷಕ್ಕೆ ಆಗಬೇಕಿದ್ದ ಅರಣ್ಯ ಬಳಕೆ 20 ವರ್ಷಕ್ಕೆ ಆಗಿದೆ

2,000 ವರ್ಷಕ್ಕೆ ಆಗಬೇಕಿದ್ದ ಅರಣ್ಯ ಬಳಕೆ 20 ವರ್ಷಕ್ಕೆ ಆಗಿದೆ

ಪ್ರಕೃತಿಗೆ ಹೊಂದಿಕೊಂಡು ಬದುಕಿದಾಗಲೇ ಆ ಬದುಕು ಶ್ರೀಮಂತವಾಗುತ್ತದೆ. ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡರೆ ನಿಸರ್ಗ ತನ್ನ ಇನ್ನೊಂದು ಸ್ವರೂಪವನ್ನು ತೋರುತ್ತದೆ. ಈಗ ಹವಾಮಾನ ಬದಲಾವಣೆ ಆಗುತ್ತಿದೆ. ನದಿಯಲ್ಲಿ ಪ್ರವಾಹ ಉಂಟಾಗುತ್ತಿದೆ. ಮಳೆಗಾಲ ಬದಲಾಗಿದೆ. ಕೆಲವು ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯನ್ನು ನೋಡುತ್ತಿದ್ದೇವೆ. ಈ ಅಸಮತೋಲನವನ್ನು ಸರಿಪಡಿಸಬೇಕಾಗಿದೆ. ಒಂದು ಅಧ್ಯಯನದ ಪ್ರಕಾರ ಕಳೆದ 2,000 ವರ್ಷಗಳಲ್ಲಿ ಆಗಬೇಕಿದ್ದ ಬಳಕೆ ಕೇವಲ 20 ವರ್ಷಗಳಲ್ಲಿ ಆಗಿದೆ. ಅಷ್ಟು ವೇಗವಾಗಿ ನಿಸರ್ಗ ನಾಶವಾಗುತ್ತಿದೆ. ಇದನ್ನು ತಡೆಗಟ್ಟುವು ಅನಿವಾರ್ಯವೂ ಹೌದು ತುರ್ತು ಅಗತ್ಯತೆ ಇದೆ ಎಂದು ಭವಿಷ್ಯ ಕುರಿತು ಅವರು ತಿಳಿಸಿದರು.

ನಮ್ಮ ಹಿರಿಯರು ಇವುಗಳನ್ನು ಉಳಿಸಿ ನಮಗೆ ಬಳುವಳಿಯಾಗಿ ನೀಡಿದ್ದಾರೆ. ಅದನ್ನು ಮುಂದಿನ ಪೀಳಿಗೆಗೆ ದಾಟಿಸದಿದ್ದರೆ ನಮ್ಮದು ಕರ್ತವ್ಯ ಲೋಪವಾಗುತ್ತದೆ. ನಮ್ಮ ಮಕ್ಕಳ ಹಕ್ಕಾಗಿರುವ ಶುದ್ಧ ಗಾಳಿ, ಆಹಾರ, ಇದರಿಂದ ವಂಚಿತರಾಗುತ್ತಾರೆ. ಅವರ ಹಕ್ಕನ್ನು ನಾವು ಕಸಿದುಕೊಂಡಂತಾಗುತ್ತದೆ. ಭವಿಷ್ಯಕ್ಕೆ ನೀಡದೆ ನಾವು ಈಗಲೇ ಕದ್ದಂತೆ ಆಗುತ್ತದೆ. ಆದ್ದರಿಂದ ಅರಣ್ಯದ ರಕ್ಷಣೆ ಮಾಡುವ ಅವಶ್ಯಕತೆ ಇದೆ. ನಮ್ಮ ಅರಣ್ಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ಅರಣ್ಯ ಸಂರಕ್ಷಣೆ. ಮಾಡುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ್ದಾರೆ.

ಅರಣ್ಯ ಹುತಾತ್ಮರನ್ನು ನೆನೆಯಬೇಕು

ಅರಣ್ಯ ಹುತಾತ್ಮರನ್ನು ನೆನೆಯಬೇಕು

ಸಂದರ್ಭಕ್ಕೆ ತಕ್ಕಂತೆ ದಿಟ್ಟತನ ತೋರಿ ಶೌರ್ಯದಿಂದ ಮೆರೆದಿದ್ದಾರೆ. ಕೆಲವು ಸಂದರ್ಭಗಳಲ್ಲಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ತ್ಯಾಗ ನೆನೆಯದಿದ್ದರೆ ಅಪಚಾರವಾಗುತ್ತದೆ. ಅರಣ್ಯ, ನಿಸರ್ಗ, ಪರಿಸರದ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಗಿಡಗಳನ್ನು ನೆಟ್ಟು ಅವುಗಳ ರಕ್ಷಣೆ ಮಾಡಬೇಕು. ನಮ್ಮ ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕು. ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರಲು ಅಲ್ಲಿನ ಆಹಾರ ಕೊರತೆ ಕಾರಣ. ಮನುಷ್ಯ ಕಾಡಿನಲ್ಲಿರಲು ಪ್ರಯತ್ನಿಸಿದಾಗ ಅಲ್ಲಿರುವ ಪ್ರಾಣಿಗಳು ಕೂಡ ಹೊರ ಬರಲು ಪ್ರಯತ್ನಿಸುತ್ತವೆ. ಮನುಷ್ಯ ಮತ್ತು ಪ್ರಾಣಿಗಳು ಸಹಬಾಳ್ವೆ ಮಾಡಬೇಕು ಎಂದರು.

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್‌ ಕಿಶೋರ್‌ ಸಿಂಗ್ ಮತ್ತಿತರರು ಪಾಲ್ಗೊಂಡಿದ್ದರು.

English summary
BJP Govt will Increase Compensation of forest martyrs from 30 lakhs to 50 lakhs said CM Basavaraj Bommai said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X