ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ; ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುತ್ತಾ ಹೈಕಮಾಂಡ್? ಇಲ್ಲಿದೆ ಇನ್ ಸೈಡ್ ಸ್ಟೋರಿ
ಬೆಂಗಳೂರು, ಸೆಪ್ಟೆಂಬರ್ 07: ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನಿತರು ಬಹಿರಂಗವಾಗಿಯೇ ಅಸಮಾಧಾನವನ್ನ ಹೊರ ಹಾಕಿದ್ದು, ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ಮುಂದಾಗಿದೆ.
ಹೌದು, ಬಿಜೆಪಿ ರಾಜ್ಯಾಧ್ಯಕ್ಷ ಅವರು ಕಾರ್ಯವೈಖರಿಯ ಮೇಲೆ ಕೆಲ ಬಿಜೆಪಿ ನಾಯಕರಯ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕನ ಹುಡುಕಾಟವನ್ನ ಹೈಕಮಾಂಡ್ ನಡೆಸುತ್ತಿದೆ ಎನ್ನಲಾಗಿದೆ. ಇತ್ತ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರನ ಪರ ಲಾಬಿ ಮಾಡುತ್ತಿದ್ದಾರೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ.

ವಿಧಾನಸಭಾ ಸೋಲಿನಿಂದ ಚೇತರಿಸಿಕೊಳ್ಳುತ್ತಿರುವ ಬಿಜೆಪಿಗೆ ಉತ್ತಮ ಸಾರಥಿ ಅನಿವಾರ್ಯ ಎಂಬ ಮಾತುಗಳು ಕೇಳಿ ಬಂದಿವೆ. ಇತ್ತ ಅಧ್ಯಕ್ಷರ ಆಯ್ಕೆಯೇ ಬಿಜೆಪಿ ಹೈಕಮಾಂಡ್ಗೆ ದೊಡ್ಡ ಚಿಂತೆಯಾಗಿದೆ. ಇದರ ನಡುವೆ ಮಾಜಿ ಸಿಎಂ ಪುತ್ರ ಹಾಗೂ ಬಿಜೆಪಿಯ ರಾಜ್ಯ ಉಪಾಧ್ಯಕ್ಷರಾಗಿರುವ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿಬಿಡುತ್ತಾರೇನೋ ಎಂಬ ಆತಂಕ ರಾಜ್ಯ ಬಿಜೆಪಿಯ ಹಲವು ನಾಯಕರಲ್ಲಿ ಸೃಷ್ಠಿಯಾಗಿದೆ.
ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಹಾಗೂ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿ ನಾಯಕರಲ್ಲಿ ಹಲವು ಪ್ರಶ್ನೆಗಳು ಮೂಡಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಲು ಪಟ್ಟು ಹಿಡಿದಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಅಲ್ಲದೇ ಹೈಕಮಾಂಡ್ ವಿಳಂಬ ಮಾಡುತ್ತಿರುವ ಕಾರಣದಿಂದ ಯಡಿಯೂರಪ್ಪ ವಿರೋಧಿ ಬಣಗಳು ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ.

ಇತ್ತ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಸಹ ಬಿಜೆಪಿ ನಾಯಕರ ವಿರುದ್ದ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದು, ಯಡಿಯೂರಪ್ಪ ಅವರನ್ನ ಕಡೆಗಣಿಸಿದಕ್ಕೆ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ ಎಂದು ವಾಗ್ದಾಳಿ ನಡೆಸಿದ್ರು. ಇನ್ನೂ ಈ ಬಗ್ಗೆ ಶಾಸಕ ವಿಜಯೇಂದ್ರ ಮಾಧ್ಯಮಗಳ ಮೂಲಕ ಸ್ಪಷ್ಟನೇ ನೀಡಿದ್ದು, ತಮ್ಮ ಪರವಾಗಿ ತಂದೆ ಡಿಮ್ಯಾಂಡ್ ಮಾಡಿಲ್ಲ ಎಂದು ಮೊದಲ ಬಾರಿಗೆ ಸ್ಪಷ್ಟಪಡಿಸಿದ್ದಾರೆ.
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಬಿ ಎಸ್ ಯಡಿಯೂರಪ್ಪ ಅವರ ಫ್ಯಾಕ್ಟರ್ ಏನು ಎಂಬುದನ್ನ ಅರಿತುಕೊಂಡಿದ್ದು, ಇದೀಗ ಹೈಕಮಾಂಡ್ ಯಡಿಯೂರಪ್ಪ ಅವರ ವರ್ಚಸ್ಸನ್ನ ಅರ್ಥ ಮಾಡಿಕೊಂಡಂತೆ ಕಾಣುತ್ತಿದೆ. ಹೀಗಾಗಿ ಯಡಿಯೂರಪ್ಪ ಅವರ ಒತ್ತಡಕ್ಕೆ ಮಣಿದು ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕುತ್ತಾ ಎನ್ನುವ ಮಾತುಗಳು ಸಹ ಕಮಲ ಪಾಳಯದಲ್ಲಿ ಕೇಳಿ ಬಂದಿವೆ.
ಒಟ್ನಲಿ ಸ್ವತಃ ಶಾಸಕ ಬಿ ವೈ ವಿಜಯೇಂದ್ರ ಅವರೇ ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಹೇಳಿಇದ್ದು, ಲೋಕಸಭಾ ಚುನಾವಣೆಯಲ್ಲೂ ಈ ರೀತಿಯಾಗಿ ಸೋಲು ಮತ್ತೆ ಮರುಕಳಿಸಬಾರದು ಎಂದು ಬಿಜೆಪಿ ಹೈಕಮಾಂಡ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನ ಸಾರಥಿಯಾಗಿ ಮಾಡುತ್ತದೆ. ಮತ್ತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಹೇಗೆ ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತದೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications