Sriramulu: ಕಾಂಗ್ರೆಸ್‌ ಸೇರಲಿದ್ದಾರೆಯೇ ಬಿಜೆಪಿ ನಾಯಕ ಶ್ರೀರಾಮುಲು, ಈ ವಿಷಯದ ಬಗ್ಗೆ ಹೇಳಿದ್ದೇನು ?

ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಶ್ರೀರಾಮುಲು ಅವರು ಕಾಂಗ್ರೆಸ್‌ ಸೇರುವ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ. ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ನಡುವೆ ವಾಕ್ಸಮರ ಜೋರಾಗಿದ್ದು. ಬಿಜೆಪಿ ತೊರೆಯುವ ಮಾತುಗಳನ್ನು ಶ್ರೀರಾಮುಲು ಅವರು ಹೇಳಿದ್ದಾರೆ. ಈ ಚರ್ಚೆಗಳ ನಡುವೆ ಶ್ರೀರಾಮುಲು ಅವರು ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ದಶಕಗಳಿಂದ ಗುರುತಿಸಿಕೊಂಡಿರುವ ಶ್ರೀರಾಮುಲು ಇತ್ತೀಚಿನ ದಿನಗಳಲ್ಲಿ ರಾಜಕೀಯದಲ್ಲಿ ಅಷ್ಟು ಸಕ್ಸಸ್ ಕಂಡಿಲ್ಲ. ಅಲ್ಲದೆ ಶ್ರೀರಾಮುಲು ಅವರು ಈಚೆಗೆ ನಡೆದ ಸಂಡೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿಲ್ಲ ಎನ್ನುವ ಆರೋಪವನ್ನು ಜನಾರ್ದನ ರೆಡ್ಡಿ ಅವರು ಮಾಡಿದ್ದಾರೆ. ಇದು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇನ್ನು ಇದೀಗ ಶ್ರೀರಾಮುಲು ಅವರು ಕಾಂಗ್ರೆಸ್‌ ಸೇರಲಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಟಕ್ಕರ್‌ ಕೊಡುವುದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕರ್ನಾಟಕದ ಮತ್ತೊಬ್ಬ ವಾಲ್ಮೀಕಿ ಸಮುದಾಯದ ನಾಯಕರೊಬ್ಬರನ್ನು ಹುಡುಕುತ್ತಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಜನಾರ್ದನ ರೆಡ್ಡಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಶ್ರೀರಾಮುಲು ಅವರು ಕಾಂಗ್ರೆಸ್‌ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Will BJP leader Sriramulu join Congress

ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರು ಅಣ್ಣ - ತಮ್ಮನ ರೀತಿ ಹಾಗೂ ಸ್ನೇಹಿತರ ರೀತಿ ಇದ್ದರು. ಅಲ್ಲದೆ ಇಬ್ಬರು ರಾಜಕೀಯದಲ್ಲಿ ಹಾಗೂ ಉದ್ಯಮದಲ್ಲೂ ಒಂದಾಗಿ ಸಾಗಿದ್ದರು. ಆದರೆ ನೆನ್ನೆ ನಡೆದಿರುವ ಬಿಜೆಪಿ ಸಭೆಯಲ್ಲಿ ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಅವರ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದು. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಅವರು ಕಾಂಗ್ರೆಸ್‌ ಸೇರಲಿದ್ದಾರೆಯೇ. ಏಕಾಏಕಿ ಯಾಕೆ ಬಿಜೆಪಿ ಬಿಡುವ ಬಗ್ಗೆ ಮಾತನಾಡಿದ್ದಾರೆ ಎನ್ನುವ ವಿಷಯಗಳ ಬಗ್ಗೆ ಚರ್ಚೆ ಜೋರಾಗಿದೆ. ಇನ್ನು ಬಿಜೆಪಿಯಲ್ಲಿ ಬಣ ರಾಜಕೀಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯಗಳು ಜೋರಾಗಿ ಚರ್ಚೆ ನಡೆಯುತ್ತಿದ್ದವು. ಇದೀಗ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ನಡುವೆ ಟಾಕ್‌ಫೈಟ್‌ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ಎನ್ನುವ ವಿಷಯಗಳನ್ನು ಸೈಡ್‌ಲೈನ್‌ ಮಾಡಿದೆ.

ಇಷ್ಟೆಲ್ಲ ಗೊಂದಲಗಳ ನಡುವೆ ಶಾಸಕ ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಬಾಂಬ್‌ ಸಿಡಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ಶ್ರೀರಾಮುಲು ಅವರು ಸಹ ಖಡಕ್‌ ರಿಪ್ಲೈ ಕೊಟ್ಟಿದ್ದಾರೆ.

ಕಾಂಗ್ರೆಸ್‌ ಸೇರುವ ಬಗ್ಗೆ ಶ್ರೀರಾಮುಲು ಹೇಳಿದ್ದೇನು ?

ಇನ್ನು ಈ ಗೊಂದಲಗಳಿಗೆ ಶ್ರೀರಾಮುಲು ಅವರು ಬ್ರೇಕ್‌ ಹಾಕಿದ್ದಾರೆ. ನೆನ್ನೆ ಬಿಜೆಪಿ ತೊರೆಯುವ ಮಾತನಾಡಿದ್ದ ಶ್ರೀರಾಮುಲು ಅವರು ಇಂದು ಬಿಜೆಪಿ ತೊರೆಯುವುದಿಲ್ಲ ಎಂದಿದ್ದಾರೆ. ಅಲ್ಲದೆ ನಾನು ಕಾಂಗ್ರೆಸ್‌ ಸೇರುವುದಿಲ್ಲ ಎಂದೂ ಹೇಳಿದ್ದಾರೆ. ಅಲ್ಲದೆ ಜನಾರ್ದನ ರೆಡ್ಡಿ ಅವರು ನನ್ನನ್ನು ರಾಜಕೀಯವಾಗಿ ಮುಳುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದೂ ಆರೋಪಿಸಿದ್ದಾರೆ.

ಇನ್ನು ಈ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಸಹ ರಿಯಾಕ್ಟ್‌ ಮಾಡಿದ್ದಾರೆ. ನನ್ನನ್ನು ಇಲ್ಲಿಯ ವರೆಗೆ ಯಾರೂ ಸಹ ಭೇಟಿ ಮಾಡಿಲ್ಲ. ಈ ಬಿಜೆಪಿಯಲ್ಲಿ ನಡೆಯುತ್ತಿರುವುದು ಅವರ ಆಂತರಿಕ ಸಂಘರ್ಷ ಅಷ್ಟೇ. ನನಗೂ ಈ ಬಿಜೆಪಿಯಲ್ಲಿ ಈಗ ನಡೆಯುತ್ತಿರುವ ಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+