Hd Deve Gowda: NDAನೂ ಇಲ್ಲ, INDIAನೂ ಇಲ್ಲ; ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ದ: ಹೆಚ್ ಡಿ ದೇವೇಗೌಡ
ಬೆಂಗಳೂರು, ಜುಲೈ 21: ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಊಹಾಪೋಹಗಳಿಗೆ ಕೊನೆಗೂ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ತೆರೆ ಎಳೆದಿದ್ದಾರೆ.
ಈ ಕುರಿತು ಗುರುವಾರ ತಡರಾತ್ರಿಯವರೆಗೂ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ನಮ್ಮದು ಪ್ರಾದೇಶಿಕ ಪಕ್ಷ. ವಿಧಾನಸಭೆಯ ಸದಸ್ಯರು ಎಲ್ಲಾ ಸೇರಿ ಇಂದು ಸಭೆ ಮಾಡಿದ್ದಾರೆ. ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ.

ನಾನು ಎಲ್ಲರನ್ನು ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಅನ್ನೋ ಸಲಹೆ ನೀಡಿದ್ದೇನೆ. ಒಂದು ಕಡೆ ಎನ್ ಡಿಎ, ಮತ್ತೊಂದು ಕಡೆ ಇಂಡಿಯಾ, ಹೀಗಾಗಿ ನನಗಿರುವ ಅನುಭವವನ್ನ ಅವರ ಬಳಿ ಹಂಚಿಕೊಂಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ, ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನ ಅವರಿಗೂ ಹೇಳಿದ್ದೇನೆ, ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿರು.
ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪಕ್ಷ ಉಳಿಸುವುದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ, ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನ ಜನರೆ ಮುಂದೆ ಇಟ್ಟು,
ಕರ್ನಾಟಕದಲ್ಲಿ ಸಾಮರ್ಥ್ಯ ಇದೆ ಅನ್ನೋದನ್ನ ಸಾಬೀತು ಮಾಡುತ್ತೇವೆ, ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ್ದುಕ್ಕೂ ಹೋರಾಟ ಮಾಡುತ್ತೇವೆ. ಎನ್ ಡಿ ಎ ನೂ ಇಲ್ಲ, ಯುಪಿಎ ನೂ ಇಲ್ಲ. ಸ್ವಾತಂತ್ರ್ಯ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ನಮ್ಮ ಹೋರಾಟ ನಾವು ಮಾಡುತ್ತೇವೆ
ಈ ಹಿಂದೆ ಕುಮಾರಸ್ವಾಮಿ ಒಂದು ಟ್ವೀಟ್ ಮಾಡಿದ್ದರು. ಈ ವಿಚಾರವನ್ನೇ ಸದನದಲ್ಲಿಟ್ಟು ಬಿಜೆಪಿ ಹೋರಾಟ ಮಾಡಿತ್ತು. ಹೀಗಾಗಿ ಬಿಜೆಪಿ, ಜೆಡಿಎಸ್ ಒಂದಾಗಿದೆ ಅಂತಾ ಕಾಂಗ್ರೆಸ್ ಬಿಂಬಿಸಿತ್ತು. ಬಿಜೆಪಿಗೆ ಸಂಖ್ಯಾ ಬಲ ಇದೆ, ಅವರು ಕುಮಾರಸ್ವಾಮಿ ಟ್ವೀಟ್ ಅಂಶವನ್ನ ಇಟ್ಟಕೊಂಡು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ಜೆಡಿಎಸ್ ಬಿಜೆಪಿ ಮಧ್ಯೆ ಯಾವುದೇ ಸಂಬಂಧ ಕಲ್ಪಿಸಬೇಡಿ. ನಮ್ಮ ಹೋರಾಟ ನಾವು ಮಾಡ್ತೇವೆ ಎಂದು ತಿಳಿಸಿದರು.












Click it and Unblock the Notifications