ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸೇರುವ ಕುರಿತು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮೇ 26 : 'ಮೈತ್ರಿ ಸರ್ಕಾರದ ವಿರುದ್ಧ ನನಗೆ ಅಸಮಾಧಾನ ಎನ್ನುವ ಪ್ರಶ್ನೆಯೇ ಇಲ್ಲ. ಏಕೆಂದರೆ ನನಗೆ ಸಮಾಧಾನವೇ ಆಗಿಲ್ಲ' ಎಂದು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಬಿ.ಸಿ.ಪಾಟೀಲ್ ಅವರು ಬಿಜೆಪಿ ಸೇರಲಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಅವರು ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.

ಬಿಜೆಪಿ ನನಗೆ ಸಚಿವ ಸ್ಥಾನ ನೀಡಲು ಮುಂದಾಗಿತ್ತು: ಬಿ.ಸಿ ಪಾಟೀಲ್ಬಿಜೆಪಿ ನನಗೆ ಸಚಿವ ಸ್ಥಾನ ನೀಡಲು ಮುಂದಾಗಿತ್ತು: ಬಿ.ಸಿ ಪಾಟೀಲ್

ಈ ಕುರಿತು ಮಾತನಾಡಿರುವ ಬಿ.ಸಿ.ಪಾಟೀಲ್, 'ನನಗೆ ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನ ಇದ್ದೇ ಇದೆ. ಜಿಲ್ಲೆಯಲ್ಲಿ ಏಕೈಕ ಶಾಸಕನಾಗಿ ಆಯ್ಕೆಯಾಗಿದ್ದರೂ ಕೂಡ ಸಚಿವ ಸ್ಥಾನ ಕೊಟ್ಟಿಲ್ಲ' ಎಂದು ಹೇಳಿದರು.

ಕಾಂಗ್ರೆಸ್ಸಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಸಿ ಪಾಟೀಲ್ ಟ್ವೀಟ್ಕಾಂಗ್ರೆಸ್ಸಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಸಿ ಪಾಟೀಲ್ ಟ್ವೀಟ್

BC Patil

'ರಮೇಶ್ ಜಾರಕಿಹೊಳಿ ಅವರನ್ನು ನಾನು ಭೇಟಿ ಮಾಡಿಲ್ಲ. ಬಿಜೆಪಿ ಸೇರುವ ಬಗ್ಗೆಯೂ ಚಿಂತನೆ ನಡೆಸಿಲ್ಲ. ನಾನು ಸನ್ಯಾಸಿಯಲ್ಲ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡುತ್ತೇನೆ, ಜನರು ಹೇಳುವುದನ್ನು ಕೇಳುತ್ತೇನೆ' ಎಂದು ತಿಳಿಸಿದರು.

ಅಸಮಾಧಾನ ನಿಜ ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಇಲ್ಲ: ಬಿಸಿ ಪಾಟೀಲ್ಅಸಮಾಧಾನ ನಿಜ ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಇಲ್ಲ: ಬಿಸಿ ಪಾಟೀಲ್

ರಿಲೀಸ್ ಆಗದ ಸಿನಿಮಾ : 'ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆಯಾಗುವ ವಿಚಾರ ರಿಲೀಸ್ ಆಗದ ಸಿನಿಮಾ ಇದ್ದಂತೆ' ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

'ಬಹಳ ಜನರು ಸಿನಿಮಾ ಮಾಡಿ ಡಬ್ಬಿಯಲ್ಲಿಯೇ ಇಟ್ಟಿರುತ್ತಾರೆ. ಹಾಗೆಯೇ ರಮೇಶ್ ಜಾರಕಿಹೊಳಿ ಕತೆಯೂ ಆಗಿದೆ' ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

English summary
Hirekerur Congress MLA B.C.Patil said that he has not interested in joining BJP. I have some difference with people but will not join BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X