7th Pay Commission: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾದರೆ ವೇತನ ಆಯೋಗದ ವರದಿ?
ಬೆಂಗಳೂರು, ಮೇ. 18: ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬೇಗ ಬರಲಿ ಎಂದು ಕಾಯುತ್ತಿರುವವರು ರಾಜಕೀಯ ಪಕ್ಷಗಳು ಮಾತ್ರವಲ್ಲ ಸರ್ಕಾರಿ ನೌಕರರು ಕೂಡ ಈ ಸಾಲಿನಲ್ಲಿದ್ದಾರೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕಾಗಿ, ಕೇಂದ್ರದಲ್ಲಿ ಎಂಟನೇ ವೇತನ ಆಯೋಗಕ್ಕಾಗಿ ಸರ್ಕಾರಿ ನೌಕರರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಏಳು ಹಂತಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಐದು ಹಂತಗಳ ಮತದಾನಕ್ಕೆ ದೇಶ ಸಿದ್ಧವಾಗುತ್ತಿದೆ. ಮತದಾನ ಎಲ್ಲಾ ಮುಗಿದು ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದಾದ ಬಳಿಕ ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಸಡಿಲವಾಗಲಿದೆ. ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರು ಕಾಯುತ್ತಿದ್ದಾರೆ. ಇದರ ನಡುವೆ ನೌಕರರ ತಲೆಗೆ ಮತ್ತೊಂದು ಚಿಂತೆ ಅಂಟಿಕೊಂಡಿದೆ. ಅದೇ ಚುನಾವಣಾ ಫಲಿತಾಂಶ ವರದಿ ಅನುಷ್ಠಾನದ ಮೇಲೆ ಪರಿಣಾಮ ಬೀರಲಿದೆಯೇ ಎಂಬುದು.

ಕಾಂಗ್ರೆಸ್ ಗೆಲುವಿನ ಮೇಲೆ ವರದಿ ಅನುಷ್ಠಾನವೇ?
ಹೌದು... ರಾಜ್ಯದಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಗಳನ್ನು ಗಳಿಸಿದರೆ ಅಥವಾ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆಯಾದರೆ ರಾಜ್ಯದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ತೊಂದರೆ ಆಗಲಿದೆಯೇ ಎಂಬ ಚಿಂತೆ ಸರ್ಕಾರಿ ನೌಕರರನ್ನು ಕಾಡುತ್ತಿದೆ. ಹೀಗಾಗಿಯೇ ಲೋಕಸಭಾ ಚುನಾವಣೆಯ ಫಲಿತಾಂಶದತ್ತ ಮುಖ ಮಾಡಿದ್ದಾರೆ.
ಈಗಾಗಲೇ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಹಿಂದೆ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗದ ವರದಿ ಸರ್ಕಾರದ ಕೈ ಸೇರಿದೆ. ಬೇಕು ಬೇಕು ಎಂದೇ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು ವರದಿ ಸ್ವೀಕರಿಸಲಾಗಿದೆ ಎಂಬ ಆರೋಪ ಕೂಡ ಸರ್ಕಾರದ ಮೇಲಿದೆ. ಹೀಗಿರುವಾಗ ಸರ್ಕಾರದ ಬಗ್ಗೆ ನೌಕರರು ಆತಂಕ ಹೊಂದಿರುವುದರಲ್ಲಿ ಎರಡು ಮಾತಿಲ್ಲ.

ಕಾಂಗ್ರೆಸ್‌ಗೆ ಹಿನ್ನಡೆ ಆದರೆ ಬದಲಾಗುತ್ತಾ ಸರ್ಕಾರದ ನಿರ್ಧಾರ?
ಇನ್ನು, ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಹಿನ್ನಡೆಯಾದರೆ ರಾಜ್ಯದಲ್ಲಿಯೂ ವರದಿ ಅನುಷ್ಠಾನಕ್ಕೆ ಅಡ್ಡಿಯಾಗುತ್ತೆ ಎನ್ನುತ್ತಾರೆ ಕೆಲವು ಸರ್ಕಾರಿ ನೌಕರರು. ಚುನಾವಣಾ ಫಲಿತಾಂಶ ಕಾಂಗ್ರೆಸ್‌ಗೆ ಉಲ್ಟಾ ಹೊಡೆದರೆ ಆರ್ಥಿಕ ಬಿಕ್ಕಟ್ಟಿನ ನೆಪದಲ್ಲಿ ವರದಿ ಜಾರಿ ಮಾಡದೆ ಇರಬಹುದು ಎಂಬ ಊಹಾಪೋಹಗಳು ಕೂಡ ರಾಜ್ಯ ಸರ್ಕಾರಿ ನೌಕರರರ ಒಳಗಡೆ ಓಡಾಡುತ್ತಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗವು ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿ 27.50% ಹೆಚ್ಚಳ ಹಾಗೂ ಅಸ್ತಿತ್ವದಲ್ಲಿರುವ ಮೂಲ ವೇತನವನ್ನು 17 ಸಾವಿರ ರೂಪಾಯಿಗಳಿಂದ 27 ಸಾವಿರ ರೂಪಾಯಿಗಳಿಗೆ ಏರಿಸಬೇಕು ಎಂಬ ಶಿಫಾರಸು ಮಾಡಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ಮಾಸಿಕ 1.4 ಸಾವಿರ ಕೋಟಿ, ವರ್ಷಕ್ಕೆ ಸರಾಸರಿ 17 ಸಾವಿರ ಕೋಟಿ ರೂಪಾಯಿ ಹೊರೆ ಬೀಳಲಿದೆ. ಹೀಗಾಗಿ ಆರ್ಥಿಕ ಬಿಕ್ಕಟ್ಟಿನ ನೆಪ ಹೂಡಬಹುದು ಎನ್ನಲಾಗುತ್ತಿದೆ.
ಗ್ಯಾರಂಟಿ ಯೋಜನೆಗಳಿಗಾಗಿ ವರದಿ ಅನುಷ್ಠಾನಕ್ಕೆ ಹಿಂದೇಟು!?
ಕೆ. ಸುಧಾಕರ ರಾವ್ ವರದಿ ಅನುಷ್ಠಾನ ಮಾಡಿದರೆ ಸರ್ಕಾರದ ಬೊಕ್ಕಸದ ಮೇಲೆ ವರ್ಷಕ್ಕೆ ಸರಾಸರಿ 17 ಸಾವಿರ ಕೋಟಿ ರೂಪಾಯಿ ಹೊರೆ ಬೀಳಲಿದೆ. ಈಗಾಗಲೇ ಕಾಂಗ್ರೆಸ್ ತನ್ನ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಬಜೆಟ್‌ನಿಂದ ಹಣ ತೆಗೆದಿರಿಸಿದೆ. ಯೋಜನೆಗಳಿಗೆ ಕೋಟ್ಯಾಂತರ ರೂಪಾಯಿ ಬೇಕಾದ ಕಾರಣ ಈ ಹೊಸ ಹೊರೆಗೆ ಇಷ್ಟೊಂದು ಹಣ ಹಾಕುವುದು ಅಷ್ಟು ಸಲೀಸಲ್ಲ ಎನ್ನಲಾಗುತ್ತಿದೆ.
ಸರ್ಕಾರವೆನೋ ಬಜೆಟ್‌ನಲ್ಲಿ ವೇತನ ಆಯೋಗದ ವರದಿ ಜಾರಿಗಾಗಿ ಹಣವನ್ನು ತೆಗೆದಿರಿಸುವ ಘೋಷಣೆ ಮಾಡಿದೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ಸಡಿವಾದ ಬಳಿಕ ವರದಿ ಅನುಷ್ಠಾನ ಮಾಡುವ ಭರವಸೆ ಕೂಡ ನೀಡಿದೆ. ಆದರೆ, ರಾಜಕೀಯ ಬೆಳವಣಿಗೆಗಳ ನಡುವೆ ಸರ್ಕಾರಿ ನೌಕರರ ಆತಂಕ ಮಾತ್ರ ಇನ್ನು ಕಡಿಮೆಯಾಗಿಲ್ಲ. ವರದಿ ಜಾರಿಯಾಗುವ ತನಕ ಅವರ ಆತಂಕ ಕಡಿಮೆಯಾಗುವ ಯಾವ ಲಕ್ಷಣಗಳು ಇಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications