ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರು ದಕ್ಷಿಣದಲ್ಲಿ ನಳಿನ್ ಕುಮಾರ್ ಕಟೀಲ್ ಕಣಕ್ಕೆ?

|
Google Oneindia Kannada News

ಮಂಗಳೂರು, ಫೆಬ್ರವರಿ 7: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಬಿರುಸುಗೊಂಡಿದೆ. ಚುನಾವಣಾ ಅಖಾಡಕ್ಕಿಳಿಯಲು ಅಭ್ಯರ್ಥಿಗಳ ಪೈಪೋಟಿ, ಲಾಬಿ, ಆರಂಭಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಆಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ.

ಕಾರ್ಕಳ ಕ್ಷೇತ್ರ ದಿಂದ ಕಣಕ್ಕಿಳಿಯಲಿದ್ದಾರೆ ಹರ್ಷ ಮೊಯ್ಲಿ?ಕಾರ್ಕಳ ಕ್ಷೇತ್ರ ದಿಂದ ಕಣಕ್ಕಿಳಿಯಲಿದ್ದಾರೆ ಹರ್ಷ ಮೊಯ್ಲಿ?

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಶಾಸಕ ಜೆ.ಆರ್ ಲೋಬೊ ಸ್ಪರ್ಧಿಸುವುದು ಖಚಿತಗೊಂಡಿದೆ. ಆದರೆ ಬಿಜೆಪಿ ಪಾಳಯದಲ್ಲಿ ಅಭ್ಯರ್ಥಿಯ ಆಯ್ಕೆ ಕಗ್ಗಾಂಟಾಗಿದೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ.

Will Naleen Kumar Kateel become the Candidate of Mangaluru South Constituency?

ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಉದ್ಯಮಿಗಳಾದ ವೇದವ್ಯಾಸ ಕಾಮತ್, ಬದ್ರಿನಾಥ್ ಕಾಮತ್, ಮಾಜಿ ಶಾಸಕ ಯೋಗಿಶ್ ಭಟ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಯುವ ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರೊ. ಎಂ.ಬಿ.ಪುರಾಣಿಕ್ ಸೇರಿದಂತೆ ಒಟ್ಟು 7 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ.

ಈ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ, ಲಾಬಿ ತಾರಕ್ಕಕೇರಿದ್ದು ಹೈಕಮಾಂಡ್ ಗೆ ತಲೆನೋವಾಗಿದೆ. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಕಮಲ ಪಾಳಯ ದಲ್ಲಿ ಈಗಾಗಲೇ 3 ಸಲ ಸಭೆ ನಡೆದಿದೆ.

ಈಗಾಗಲೇ ಅಭ್ಯರ್ಥಿಯ ಆಯ್ಕೆಗೆ ಆಂತರಿಕ ಬೈಠಕ್ ನಡೆಸಲಾಗಿದ್ದು ಚರ್ಚೆಯ ಬಳಿಕವೂ ಒಮ್ಮತದ ಅಭ್ಯರ್ಥಿ ಆಯ್ಕೆ ನಡೆದಿಲ್ಲ. ಹೀಗಾಗಿ ಟಿಕೆಟ್ ಗಾಗಿ ಅಭ್ಯರ್ಥಿಗಳ ನಡುವೆ ಭುಗಿಲೆದ್ದಿರುವ ಅಸಮಾಧಾನ , ಪೈಪೋಟಿ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀಳುವ ಆತಂಕ ಬಿಜೆಪಿ ಮುಖಂಡರನ್ನು ಕಾಡುತ್ತಿದೆ.

ಮಂಗಳೂರು ದಕ್ಷಿಣ ಕ್ಷೇತ್ರವನ್ನು ಮರಳಿ ವಶಪಡಿಸಿಕೊಳ್ಳುವ ತಂತ್ರಗಾರಿಕೆ ಹೆಣೆದಿರುವ ಬಿಜೆಪಿ ಮುಖಂಡರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಣಕ್ಕಿಳಿಸಿದರೆ ಹೇಗೆ ಎಂಬ ಚಿಂತನೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ನಿನ್ನೆ ನಡೆದ ಬೈಠಕ್ ನಲ್ಲಿ ಈ ಪ್ರಸ್ತಾಪ ಮಾಡಲಾಗಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸಿ ರಾಜ್ಯ ರಾಜಕಾರಣಕ್ಕೆ ಕರೆ ತರುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ.

ಈ ಪ್ರಸ್ತಾಪ ಕಳೆದ 1 ವರ್ಷಗಳಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರುವ ಪ್ರಸ್ತಾಪಗಳು ನಡೆಯುತ್ತಿದ್ದರೂ, ಈಗ ಅದಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಈ ಬೆಳವಣಿಗೆ ಯಾವೆಲ್ಲ ತಿರುವು ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.

English summary
The BJP members of Mangaluru have planned to bring MP Nalin Kumar Kateel into the state politics in order to avoid chaos between the ticket aspirants of Mangaluru South constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X