ಬ್ಲಾಕ್‌ಮೇಲ್ ರಾಜಕೀಯಕ್ಕೆ ಬಗ್ಗಲ್ಲ : ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಸೆಪ್ಟೆಂಬರ್ 23 : 'ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಬ್ಲಾಕ್ ಮೇಲ್ ರಾಜಕೀಯದ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಎಚ್ಚರಿಕೆ ನೀಡಿದರು.

ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಸಿ.ವೇಣುಗೋಪಾಲ್, 'ಪಕ್ಷದಲ್ಲಿ ಇದ್ದುಕೊಂಡೇ ಇಂಥದ್ದನ್ನೆಲ್ಲಾ ಮಾಡಿದರೆ ಸಹಿಸುವುದಿಲ್ಲ. ಒತ್ತಡ ತಂತ್ರಕ್ಕೆ ಪಕ್ಷ ಎಂದಿಗೂ ಮಣಿಯುವುದಿಲ್ಲ' ಎಂದರು.

'ಬಿಜೆಪಿಯವರು ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷವೊಡ್ಡಿದ್ದಾರೆ. ಈ ರೀತಿಯ ರಾಜಕೀಯವನ್ನು ಸಹಿಸಲಾಗದು' ಎಂದು ವೇಣುಗೋಪಾಲ್ ಹೇಳಿದರು.

Will not allow blackmail politics says KC Venugopal

'ಕರ್ನಾಟಕದ ಜನರು ಇಂತಹ ಆಮಿಷದ ರಾಜಕಾರಣವನ್ನು ಒಪ್ಪುವುದಿಲ್ಲ. ಇಂತಹ ರಾಜಕೀಯಕ್ಕೆ ಜನರು ತಕ್ಕ ಉತ್ತರ ನೀಡುತ್ತಾರೆ. ಯಾವ ಕಾಂಗ್ರೆಸ್ ಶಾಸಕರು ಪಕ್ಷವನ್ನು ಬಿಟ್ಟು ಬಿಜೆಪಿ ಸೇರುವುದಿಲ್ಲ' ಎಂದು ವೇಣುಗೋಪಾಲ್ ಸ್ಪಷ್ಟನೆ ನೀಡಿದರು.

ಹೋಟೆಲ್‌ನಲ್ಲಿ ಸಭೆ : ಕೆಪಿಸಿಸಿ ಕಚೇರಿಯಿಂದ ಕೆ.ಸಿ.ವೇಣುಗೋಪಾಲ್ ಅವರು ಖಾಸಗಿ ಹೋಟೆಲ್‌ಗೆ ತೆರಳಿದರು. ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಹೋಟೆಲ್‌ನಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರ ಸಭೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+