ನಾನು ರಾಜ್ಯ ರಾಜಕಾರಣದತ್ತ ಬರಲ್ಲ: ಹೆಚ್ಡಿಕೆ ಗೆ ತಿರುಗೇಟು ಕೊಟ್ಟ ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ನವರು ಬಜೆಟ್ ಮಂಡನೆ ವೇಳೆ ಕಿವಿಯಲ್ಲಿ ಹೂವಿಟ್ಟುಕೊಂಡು ಸದನಕ್ಕೆ ಬಂದಿದ್ದಾರೆ. ಎಲ್ಲ ಕಡೆ ಜನ ಈಗಾಗಲೇ ಹೂವಿಟ್ಟಿದ್ದು, ಇನ್ನು ಮುಂದೆ ತಾವಾಗಿಯೇ ಹೂವಿಟ್ಟುಕೊಂಡು ಅಡ್ಡಾಡೋ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಹುಬ್ಬಳ್ಳಿ,ಫೆಬ್ರವರಿ18: ಪೇಶ್ವೆ ಮೂಲದವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ದ ಕಿಡಿಕಾರಿದ್ದರೆ.
ಈ ಕುರಿತು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಕುಮಾರಸ್ವಾಮಿ ಹೇಳಿಕೆ ಕುರಿತು ಹೆಚ್ಚಿಗೆ ಏನು ಮಾತನಾಡಲಾರೆ. ಇಂತಹ ಅಪ್ರಬುದ್ಧ ಹೇಳಿಕೆಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಕೈಕೆಳಗೆ ಕೆಲಸ ಮಾಡಲು ನನಗೆ ಅತ್ಯಂತ ಖುಷಿಯಿದೆ. ಅದು ನನ್ನ ಸೌಭಾಗ್ಯವೂ ಹೌದು. ನರೇಂದ್ರ ಮೋದಿಯಂತಹ ನಾಯಕರು ಸಿಗುವುದು ಶತಮಾನಕ್ಕೊಬ್ಬರು ಎಂದು ಸಂತಸ ವ್ಯಕ್ತಪಡಿಸಿದ ಅವರು ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ನಂಬರ್ ಒನ್ ನತ್ತ ದಾಪುಗಾಲು ಹಾಕ್ತಿದೆ ಇದೊಂದು ಕ್ರಾಂತಿಕಾರಿ ಬದಲಾವಣೆ. ಇನ್ನು ಕಲ್ಲಿದ್ದಲು ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದೇವೆ, ಇಡೀ ವಿಶ್ವವೇ ಮೋದಿಯನ್ನು ನಿಬ್ಬೆರಗಾಗಿ ನೋಡುತ್ತಿದೆ, ಹೀಗಿರುವಾಗ ನಾನು ರಾಜ್ಯ ರಾಜಕಾರಣದತ್ತ ಬರೋಲ್ಲ. ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ನವರು ಇನ್ನು ಮುಂದೆ ಕಿವಿ ಮೇಲೆ ಹೂವಿಟ್ಟುಕೊಂಡ ಅಡ್ಡಾಡಬೇಕಾಗುತ್ತೆ. ಕಾಂಗ್ರೆಸ್ ಇಡೀ ದೇಶದಲ್ಲಿ ಕಾಂಗ್ರೆಸ್ ಜನರಿಂದ ತಿರಸ್ಕೃತಗೊಂಡಿದ್ದು, ಅಷ್ಟಿದ್ದರೂ ಕಾಂಗ್ರೆಸ್ ನವರು ಬಜೆಟ್ ಮಂಡನೆ ವೇಳೆ ಕಿವಿಯಲ್ಲಿ ಹೂವಿಟ್ಟುಕೊಂಡು ಸದನಕ್ಕೆ ಬಂದಿದ್ದಾರೆ. ಎಲ್ಲ ಕಡೆ ಜನ ಈಗಾಗಲೇ ಹೂವಿಟ್ಟಿದ್ದು, ಇನ್ನು ಮುಂದೆ ತಾವಾಗಿಯೇ ಹೂವಿಟ್ಟುಕೊಂಡು ಅಡ್ಡಾಡೋ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದರು.

ಜವಾಹರಲಾಲ್ ನೆಹರೂ ನಿಧನದ ನಂತರ ಅವರ ಹೆಸರಲ್ಲಿ ಇಂದಿರಾ ಗಾಂಧಿ ಅಧಿಕಾರಕ್ಕೆ ಬಂದರು. ಇಂದಿರಾಗಾಂಧಿ ಸಾವಿನ ನಂತರ ಅವರ ಹೆಸರಲ್ಲಿ ಗದ್ದುಗೆ ಹಿಡಿದರು. ಹೀಗೇ ನೋಡಿದರೆ ಸ್ವಂತ ಶಕ್ತಿಯ ಮೇಲೆ ಎಂದೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ, ಈಗ ಅದು ಅಧಿಕಾರ ಕಳೆದುಕೊಂಡು ಪರಿತಪಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಹರಿಹಾಯ್ದರು.












Click it and Unblock the Notifications