ರಾಹುಲ್ ಗಾಂಧಿ ಭೇಟಿಗೆ ಪ್ರಯತ್ನಿಸಿದ್ದ ಜೆಡಿಎಸ್ ಅತೃಪ್ತ ಶಾಸಕರು!

Posted By:
Subscribe to Oneindia Kannada

ರಾಮನಗರ, ಆಗಸ್ಟ್ 17 : 'ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎರಡು ಬಾರಿ ಭೇಟಿ ಮಾಡಲು ಉದ್ದೇಶಿಸಿದ್ದೆವು. ಆದರೆ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ' ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.

ಮಾಗಡಿಯಲ್ಲಿ ಮಂಗಳವಾರ ಮಾತನಾಡಿದ ಬಾಲಕೃಷ್ಣ ಅವರು, 'ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದ 8 ಶಾಸಕರು ದೆಹಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದೆವು' ಎಂದು ಹೇಳಿದರು.[ಜೆಡಿಯುನತ್ತ ಹೊರಟ JDSನ 8 ಶಾಸಕರು?]

Will not join Congress says Magadi MLA HC Balakrishna

'ರಾಜ್ಯಸಭೆ ಚುನಾವಣೆಯಲ್ಲಿ ವೇಳೆಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಕೆಲವು ದಿನಗಳ ಹಿಂದೆ ಮತ್ತೊಮ್ಮೆ ಅವರ ಭೇಟಿಗೆ ಪ್ರಯತ್ನ ನಡೆಸಿದ್ದೆವು. ದಿನಾಂಕವೂ ನಿಗದಿಯಾಗಿತ್ತು. ಆದರೆ, ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಮರಣದಿಂದಾಗಿ ಭೇಟಿ ರದ್ದಾಯಿತು' ಎಂದು ಬಾಲಕೃಷ್ಣ ತಿಳಿಸಿದರು.[ಜೆಡಿಎಸ್ 8 ಶಾಸಕರ ಅಮಾನತು, ಮುಂದೇನು?]

'ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ವಿಚಾರವನ್ನು ಸದ್ಯಕ್ಕೆ ಕೈ ಬಿಟ್ಟಿದ್ದೇವೆ. ತಾವು ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ' ಎಂದು ಬಾಲಕೃಷ್ಣ ಅವರು ಸ್ಪಷ್ಟನೆ ನೀಡಿದರು.['ಪಕ್ಷಕ್ಕೆ ದ್ರೋಹ ಮಾಡಿದವರನ್ನು ಒಂದು ಕ್ಷಣವೂ ಇರಲು ಬಿಡಲ್ಲ']

ಅಮಾನತುಗೊಂಡಿದ್ದಾರೆ : ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಸೇರಿದಂತೆ 8 ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ವಿರುದ್ಧವಾಗಿ ಮತಹಾಕಿ ಕಾಂಗ್ರೆಸ್ ಬೆಂಬಲಿಸಿದ ಕಾರಣಕ್ಕೆ ಜೆಡಿಎಸ್‌ನಿಂದ ಅಮಾನತುಗೊಂಡಿದ್ದಾರೆ.

ಅಮಾನತುಗೊಂಡವರು : ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಪುರ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ) ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Magadi MLA HC Balakrishna (JDS) said, He will not join Congress. JDS suspended HC Balakrishna and other 7 MLA's who voted against its official candidate and supported Congress in the Rajya Sabha election.
Please Wait while comments are loading...