ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ಯಾಕೆ
ಹಾಸನ,ಆಗಸ್ಟ್ 26: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ, ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಶನಿವಾರ ಹಾಸನದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ವಿಜ್ಞಾನಿಗಳ ಅವಿರತ ಶ್ರಮದಿಂದ ದೇಶದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಇವತ್ತು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಹೋಗಿದ್ದಾರೆ. ಹೀಗಾಗಿ ರಾಜಕಾರಣ ಬಗ್ಗೆ ಹೆಚ್ಚಿಗೆ ಚರ್ಚೆ ಮಾಡಲು ಹೋಗಲ್ಲ. ನೀವು ಸರಕಾರದ ಬಗ್ಗೆ ಕಠಿಣವಾಗಿ ಮಾತನಾಡುವುದು ಬೇಡ, ಇವರು ತಪ್ಪುಗಳನ್ನು ಮಾಡಿಕೊಂಡು ಹೋಗಲಿ ಬಿಟ್ಟು ಬಿಡಿ ಎಂದು ಬಹಳಷ್ಟು ಜನ ಹೇಳುತ್ತಿದ್ದಾರೆ. ಹಾಗಂತ ಬಿಟ್ಟುಬಿಟ್ಟರೆ ಇವರಿಗೆ ಹೇಳೋರು ಕೇಳೋರು ಇರುವುದಿಲ್ಲ, ಆ ಪರಿಸ್ಥಿತಿಗೆ ಬಂದು ಬಿಡ್ತಾರೆ. ಈಗಲೇ ಹೇಳೋರು, ಕೇಳೋರು ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಕುರಿತು ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಅವರು, ನಾನು ಸರಕಾರಕ್ಕೆ ಹೇಳುವುದು ಇಷ್ಟೇ. ನಿಮ್ಮ ಗ್ಯಾರಂಟಿ ಸ್ಕೀಂಗಳನ್ನು ಮಾಡಿಕೊಂಡು ಹೋಗಿ, ಸಂತೋಷ. ಅದು ಎಷ್ಟರಮಟ್ಟಿಗೆ ನಿಮ್ಮ ಗ್ಯಾರಂಟಿ ಸ್ಕೀಂಗಳಿಂದ ಇಡೀ ನಾಡಿನ ಜನತೆಗೆ ಅನೂಕೂಲ ಆಗುತ್ತಿದೆ ಎಂಬುದನ್ನು ಕಾದು ನೋಡೋಣ. ಅದಾನಿ, ಅಂಬಾನಿಗೆ ಸೇರುವ ದುಡ್ಡನ್ನು ಪ್ರತಿಯೊಬ್ಬರಿಗೂ ಹಂಚುತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದ್ಯಾರಿಗೆ ಹಂಚುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಗೃಹಜ್ಯೋತಿ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುವುದುನ್ನು ಪ್ರತಿನಿತ್ಯ ಕಾಣುತ್ತಿದ್ದೇವೆ. ಈಗಾಗಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಮಂತ್ರಿಗಳು ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಯಾವ ಸಮಯದಲ್ಲಿ ವಿದ್ಯುತ್ ಕೊಡುತ್ತಾರೆ ಎಂದು ಹಳ್ಳಿಜನ ಕಾಯುತ್ತಾ ಕೂರಬೇಕಿದೆ ಎಂದು ಸರ್ಕಾರಕ್ಕೆ ಚಾಟಿ ಬೀಸಿದರು.
ಅನಧಿಕೃತ ಲೋಡ್ ಶೆಡ್ಡಿಂಗ್ʼಗೆ ಯಾವುದೇ ರೀತಿಯ ಸಿದ್ದತೆಗಳಿಲ್ಲ, ಮುಂದೆ ಆಗುವ ಸಮಸ್ಯೆಗಳ ಬಗ್ಗೆ ಚಿಂತನೆಯೂ ಇಲ್ಲ. ಮೊದಲು ರೈತರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಯೋಚನೆ ಮಾಡಬೇಕಿತ್ತು ಇವರು. 130 ತಾಲ್ಲೂಕುಗಳಲ್ಲಿ ಬರದ ಛಾಯೆ ಮೂಡಿದೆ ಅಂತ ಕೃಷಿಮಂತ್ರಿಗಳೇ ಹೇಳೀದ್ದಾರೆ. ಭಿತ್ತನೆ ಸಂಪೂರ್ಣ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗ್ಯಾರೆಂಟಿ ಎಂದು ವಿಜೃಂಭಿಸುವುದನ್ನು ಬಿಟ್ಟು ಮೊದಲು ರೈತರ ಬದುಕು ಏನಾಗಿದೆ ಎಂಬುದನ್ನು ನೋಡಲಿ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ನಮ್ಮ ರೈತರ ಹಿತ ಕಡೆಗಣಿಸಿದೆ. ಸರ್ವಪಕ್ಷದ ಸಭೆಯಲ್ಲೂ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯವನ್ನು ನೇರವಾಗಿ ಹೇಳಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದಾಗಲೇ ಸರ್ವಪಕ್ಷದ ಸಭೆ ಕರೆದು ಚರ್ಚೆ ಮಾಡಬೇಕಿತ್ತು.
ಸುಪ್ರೀಂ ಕೋರ್ಟ್‌ಗೆ ತಮಿಳುನಾಡಿನವರು ಅರ್ಜಿ ಹಾಕಿಕೊಂಡಾಗ ತೀರ್ಪು ಬರುವವರೆಗೂ ಕಾಯಬೇಕಿತ್ತು. ಏಕಾಏಕಿ ನೀರು ಬಿಟ್ಟುಬಿಟ್ಟರು, ನಂತರ ರೈತರು ಪ್ರತಿಭಟನೆ ಮಾಡಲು ಹೋದಾಗ ʼನೀವು ಕೋರ್ಟ್‌ಗೆ ಕೇಸ್ ಹಾಕಿಕೊಳ್ಳಿʼ ಎಂದು ಉಪ ಮುಖ್ಯಮಂತ್ರಿ ಹೇಳಿದರು. ಇಂಥ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ ಎಂದು ಸಭೆಯಲ್ಲಿ ನೇರವಾಗಿಯೇ ಹೇಳಿದ್ದೇನೆ ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications