Karnataka Rain: ಮಳೆ.. ಮಳೆ.. ಮಾರ್ಚ್ 31ರಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಹಲವೆಡೆ ಮಳೆ
ಬೆಂಗಳೂರು, ಮಾರ್ಚ್ 25: ರಾಜ್ಯಾದಾದ್ಯಂತ ಒಣಹವೆ ಮುಂದುವರೆದಿದ್ದು, ಕೆಲವೆಡೆ ಮೋಡ ಕವಿದ ವಾತಾವರಣವಿದ್ದರೆ ಇನ್ನೂ ಕೆಲವೆಡೆ ಮಳೆಯಾಗುತ್ತಿದೆ. ಇನ್ನೂ ಕರ್ನಾಟಕದಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರೈತನ ಮುಖದಲ್ಲಿ ಮಂದಹಾಸ ಮೂಡಿದೆ

ಇನ್ನೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಕಳೆದ ವಾರವಷ್ಟೇ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗಿತ್ತು. ಕರ್ನಾಟಕದ ಕರಾವಳಿ ಜಿಲ್ಲೆ ಸೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಬಿಸಿಲು ಕಾಡುತ್ತಿದೆ. ಹೀಗಿದ್ದಾಗ ಭಾನುವಾರ ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಮಳೆಯಾಗಿದೆ.
ಹಾಸನ, ಕೊಡಗು ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆಯು ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಮುಂದುವರಿದಿದೆ. ಆದರೂ, ಮುಂದಿನ ಕೆಲವು ದಿನಗಳ ಕಾಲ ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಲಘು ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.












Click it and Unblock the Notifications