ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದ ಮತ್ತೊಬ್ಬ ಬಿಜೆಪಿ ಸಂಸದ
ಮೈಸೂರು, ನವೆಂಬರ್ 11: ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಚುನಾವಣೆ ಹತ್ತರವಾಗುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಸಾಕಷ್ಟು ಮಹತ್ವದ ಬೆಳವಣೆಗಳಾಗುತ್ತಿವೆ. ಮೊನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ರು, ಇದೀಗ ಮತ್ತೊಬ್ಬ ಹಿರಿಯ ಬಿಜೆಪಿ ಸಂಸದ ರಾಜಕೀಯ ನಿವೃತ್ತಿ ತೀರ್ಮಾನವನ್ನ ಕೈಗೊಂಡಿದ್ದಾರೆ.
ಹೌದು, ಈ ಕುರಿತು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿ, ಮುಂದಿನ ವರ್ಷ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.

ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ. ಮಾರ್ಚ್ 17, 2024ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಹೀಗಾಗಿ ಮಾರ್ಚ್ 17 ರಂದು ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ.
ಬಿಜೆಪಿಯ ಈ ನಾಯಕರಿಗೆ ಟಿಕೆಟ್ ಇಲ್ಲ?
ಮುಂದಿನ ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಂದ ಬದಲಾವಣೆಯಂತೆ ವಯೋಮಿತಿಯ ಆಧಾರದ ಮೇಲೆ ಹಾಗೂ ಯುವಕರನ್ನ ಸೆಳೆಯುವ ನಿಟ್ಟಿನಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟೆಕೆಟ್ ಕೊಡದಿರುವಂತೆ ನಿರ್ಧರಿಸಲಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಈಗಾಗಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಚಾಮರಾಜನಗರದ ಸಂಸದ ಶ್ರೀನಿವಾಸ ಪ್ರಸಾದ್ ಅವರು ಮುಂದಿನ ಮಾರ್ಚ್ ನಲ್ಲಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದಾರೆ,
ಅಲ್ಲದೇ ಚಿಕ್ಕಬಳ್ಳಾಪುರದ ಸಂಸದ ಬಚ್ಚೇಗೌಡ, ಕೋಲಾರ ಸಂಸದ ಮುನಿಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ತುಮಕೂರು ಸಂಸದ ಜಿ.ಎಸ್. ಬಸವರಾಜು, ಕೊಪ್ಪಳದ ಸಂಸದ ಸಂಗಣ್ಣ ಕರಡಿ, ದಾವಣಗೆರೆಯ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಸೇರಿದಂತೆ ಹಲವು ನಾಯಕರಿಗೆ ಈ ಬಾರೀ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ.
ಈ ನಾಯಕರು ಮಾತ್ರವಲ್ಲದೇ ನಳೀನ್ ಕುಮಾರ್ ಕಟೀಲ್ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಪಕ್ಷದ ಕಾರ್ಯಚಟುವಟಿಕೆಯಿಂದ ಅಂತರವನ್ನ ಕಾಯ್ದ ಕೊಡಿರುವ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗ್ಡೆಯವರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications