ಸುಮಲತಾ ಅಂಬರೀಶ್ ಬಿಜೆಪಿಗೆ : ಯಾರು, ಏನು ಹೇಳಿದರು?
Recommended Video

ಬೆಂಗಳೂರು, ಮಾರ್ಚ್ 05 : 'ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಅವರಿಗೆ ಟಿಕೆಟ್ ನೀಡಲಾಗುವುದು' ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗಲಿದೆಯೇ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ 2019ರ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಆದರೆ, ಯಾವ ಪಕ್ಷದಿಂದ ಎಂಬುದು ಇನ್ನೂ ಖಚಿತವಾಗಿಲ್ಲ. ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲು ಅವರು ಬಯಸಿದ್ದಾರೆ.
'ನಿಜವಾಗಿಯೂ ಅಂಬರೀಶ್ ಅವರ ಹೆಸರು ಉಳಿಸಬೇಕಾದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಅವರೇ ಪಾಠ ಕಲಿಸಬೇಕು. ಬುದ್ಧಿ ಕಲಿಸಬೇಕು ಎಂದರೆ ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಸುಮಲತಾ ಅವರು ಬಿಜೆಪಿಗೆ ಬರಲಿ. ಅವರಿಗೆ ಟಿಕೆಟ್ ಕೊಡಿಸುವ ವ್ಯವಸ್ಥೆಯನ್ನು ನಾವು ಮಾಡುತ್ತೇವೆ' ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುಮಲತಾ ಅಂಬರೀಶ್ ಅವರು ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಎರಡು ದಿನದಲ್ಲಿ ತಮ್ಮ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಅವರು ಮಂಡ್ಯದಲ್ಲಿ ಸೋಮವಾರ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ಬಂದರೆ ಸ್ವಾಗತ
'ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬಂದರೂ ಸ್ವಾಗತವಿದೆ. ಸ್ವತಂತ್ರ ಅಭ್ಯರ್ಥಿಯಾಗಿ ನಿಂತರೂ ಬಿಜೆಪಿ ಬೆಂಬಲ ನೀಡಲಿದೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡುವುದು ಪಕ್ಷದ ಆಂತರಿಕ ವಿಚಾರ' ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜೆಡಿಎಸ್‌ಗೆ ಕೊಡಲು ನಿರ್ಧಾರವಾಗಿದೆ
'ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಲು ನಿರ್ಧಾರವಾಗಿದೆ. ಹಾಲಿ ಜೆಡಿಎಸ್ ಸಂಸದರು ಇರುವಾಗ ಟಿಕೆಟ್ ಕೇಳಲು ಬರುವುದಿಲ್ಲ. ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಅವರಿಗೆ ಬಿಟ್ಟ ವಿಚಾರವಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಗೆ ಬರಲಿ, ಟಿಕೆಟ್ ಕೊಡಿಸುತ್ತೇವೆ
'ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಅವರಿಗೆ ಟಿಕೆಟ್ ನೀಡಲಾಗುವುದು. ನಿಜವಾಗಿಯೂ ಅಂಬರೀಶ್ ಅವರ ಹೆಸರು ಉಳಿಸಬೇಕಾದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಅವರೇ ಪಾಠ ಕಲಿಸಬೇಕು. ಬುದ್ಧಿ ಕಲಿಸಬೇಕು ಎಂದರೆ ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಸುಮಲತಾ ಅವರು ಬಿಜೆಪಿಗೆ ಬರಲಿ' ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಟಿಕೆಟ್ ನೀಡಲು ನನ್ನ ಬೆಂಬಲವಿದೆ
'ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ಗೆ ಸಿಕ್ಕರೆ ಪಕ್ಷದ ಟಿಕೆಟ್ ಅನ್ನು ಸುಮಲತಾ ಅಂಬರೀಶ್ ಅವರಿಗೆ ನೀಡಲು ನನ್ನ ಬೆಂಬಲವಿದೆ. ಇನ್ನು ಟಿಕೆಟ್ ಹಂಚಿಕೆ ಆಗಿಲ್ಲ, ಹಂಚಿಕೆ ವೇಳೆ ಮಂಡ್ಯ ಕಾಂಗ್ರೆಸ್‌ಗೆ ಸಿಕ್ಕರೆ ಸುಮಲತಾ ಅವರಿಗೆ ಟಿಕೆಟ್ ನೀಡುವುದಕ್ಕೆ ನನ್ನ ಬೆಂಬಲವಿದೆ' ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.












Click it and Unblock the Notifications