ಬೆಳಗಾವಿ ಹಳ್ಳಿಗಳಿಗೆ ಮಹಾರಾಷ್ಟ್ರದ ವಿಮೆ ಬಗ್ಗೆ ಶೀಘ್ರ ಕ್ರಮ: ಡಿಕೆ ಶಿವಕುಮಾರ್‌

ನವದೆಹಲಿ, ಅಕ್ಟೋಬರ್‌ 19: ಬೆಳಗಾವಿ ಗಡಿ ಭಾಗಗಳಲ್ಲಿ ವಾಸಿಸುವ ಜನರಿಗೆ ಆರೋಗ್ಯ ವಿಮಾ ಪ್ರಯೋಜನ ಯೋಜನೆಗಳನ್ನು ಮಹಾರಾಷ್ಟ್ರ ನೀಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ನಿಲುವು ತೆಗೆದುಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಅವರು ಯಾವುದೇ ವಿವಾದ ಸೃಷ್ಟಿಸಲು ಬಯಸುವುದಿಲ್ಲ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ಗಡಿ ಭಾಗದ ಜನರಿಗೆ ಆರೋಗ್ಯ ವಿಮಾ ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನಲ್ಲಿ ಮಹಾರಾಷ್ಟ್ರ ಕಚೇರಿ ಸ್ಥಾಪಿಸಿರುವುದು ನಮಗೆ ತಿಳಿದಿದೆ ಎಂದು ಹೇಳಿದರು.

dk-shivakumar

ಬೆಳಗಾವಿಯು ರಾಜ್ಯದ ಅವಿಭಾಜ್ಯ ಅಂಗ ಮತ್ತು ಅದರ ಎರಡನೇ ರಾಜಧಾನಿ ಎಂಬ ಸಂದೇಶವನ್ನು ರವಾನಿಸಲು ಇಲ್ಲಿ ಸುವರ್ಣ ವಿಧಾನಸೌಧವನ್ನು ನಿರ್ಮಿಸಲಾಗಿದೆ. ಬೆಳಗಾವಿ ಕರ್ನಾಟಕದಲ್ಲಿಯೇ ಉಳಿಯುತ್ತದೆ ಎಂದರು. ಗುರುವಾರ ನ್ಯಾಯಾಲಯ ನೀಡಲಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪಿನ ಕುರಿತು ಶಿವಕುಮಾರ್, ನನ್ನ ವಕೀಲರು ಅಸಮರ್ಪಕ ಎಫ್‌ಐಆರ್ ಕುರಿತು ಅರ್ಜಿ ಸಲ್ಲಿಸಿದ್ದು, ದೋಷಗಳಿದ್ದು, ಪ್ರಕರಣವನ್ನು ವಕೀಲರು ನೋಡಿಕೊಳ್ಳುತ್ತಾರೆ ಎಂದರು.

ಶಿವಕುಮಾರ್‌ಗೆ ಸಿಎಂ ಸ್ಥಾನಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬೆಂಬಲ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು, ನಾನು ಈ ಬಗ್ಗೆ ಗಮನ ಹರಿಸಿಲ್ಲ, ಐದು ವರ್ಷಗಳಿಂದ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಮತ್ತು ನಾವು ಜನರಿಗೆ ಉತ್ತಮ ಆಡಳಿತವನ್ನು ನೀಡಲು ಬಯಸುತ್ತೇವೆ ಎಂದು ವಿವರಿಸಿದರು

ಮುಂಗಾರು ಕೊರತೆಯಿಂದಾಗಿ ಕರ್ನಾಟಕದಲ್ಲಿ ಸುಮಾರು 60 ರಿಂದ 70 ದಿನಗಳ ಕಾಲ ಮಾತ್ರ ಮಳೆಯಾಗಿದೆ. ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರವು ಒತ್ತು ನೀಡುತ್ತಿದೆ ಮತ್ತು ನಾನು ಇತ್ತೀಚೆಗೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರೊಂದಿಗೆ ಸಭೆ ನಡೆಸಿದ್ದೇನೆ. ರೈತರಿಗೆ 6 ಗಂಟೆ ತ್ರೀಫೇಸ್ ವಿದ್ಯುತ್ ನೀಡುತ್ತಿದ್ದು, 7 ಗಂಟೆಗೆ ವಿಸ್ತರಿಸಲು ಸಿಎಂ ಜತೆ ಮಾತುಕತೆ ನಡೆಸುತ್ತೇವೆ, ರೈತರೂ ನೀರನ್ನು ನ್ಯಾಯಯುತವಾಗಿ ಬಳಸಬೇಕು ಎಂದು ಶಿವಕುಮಾರ್ ಹೇಳಿದರು.

"ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದರಿಂದ ಸರಕಾರಕ್ಕೆ ಅಪಾರ ನಷ್ಟ ಉಂಟಾಗಿದೆ. ನೀರು ಕಳ್ಳತನ ತಡೆಗಟ್ಟಲು ಕಾನೂನು ತಿದ್ದುಪಡಿ ಮಾಡಲಾಗುವುದು ಮತ್ತು ನೀರಿನ ಬಳಕೆದಾರರ ಸಹಕಾರ ಸಂಘಗಳನ್ನು ಪುನಶ್ಚೇತನಗೊಳಿಸಲಾಗುವುದು" ಎಂದು ಶಿವಕುಮಾರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+