ಸವದಿ vs ರಮೇಶ ಜಾರಕಿಹೊಳಿ ನಡುವೆ ಫೈಟ್; ಇಬ್ಬರ ನಡುವಿನ ಅಸಮಾಧಾನ ಶಮನಕ್ಕೆ ಯತ್ನ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ, ಮಾರ್ಚ್31: ರಾಜ್ಯ ರಾಜಕಾರಣದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಬೆಳಗಾವಿ ರಾಜಕಾರಣ ಯಾವಾಗಲೂ ಚರ್ಚೆಯಲ್ಲಿರುತ್ತದೆ. ಈ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿಚಾರಕ್ಕೆ ಚರ್ಚೆಯಲ್ಲಿದ್ದ ಬೆಳಗಾವಿ, ಇದೀಗ ಬಿಜೆಪಿ ನಾಯಕರ ನಡುವಿನ ಅಸಮಾಧಾನಕ್ಕೆ ಹೆಚ್ಚು ಚರ್ಚೆಯಲ್ಲಿದೆ.
ಈಗಾಗಲೇ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಗೆಲ್ಲುವ ತಂತ್ರಗಾರಿಕೆಯನ್ನ ರಾಜಕೀಯ ಪಕ್ಷಗಳು ನಡೆಸಿವೆ. ಆದರೆ, ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಜೆಪಿ ಇಬ್ಬರು ಘಟಾನುಘಟಿ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.

ಹೌದು, ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಇನ್ನು ಏಪ್ರಿಲ್ 10 ರೊಳಗೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ. ಇತ್ತ ಅಥಣಿ ಕ್ಷೇತ್ರದ ಟಿಕೆಟ್ ಗಾಗಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹಾಗೂ ಮಹೇಶ್ ಕುಮಟಳ್ಳಿ ರೇಸ್ ನಲ್ಲಿದ್ದು, ತನ್ನ ಸ್ನೇಹಿತನಿಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಬೆಳಗಾವಿ ಸಾಹುಕರ್ ರಮೇಶ್ ಜಾರಕಿಹೊಳಿ ಪ್ರಯತ್ನ ಪಟ್ಟಿದ್ದು, ಇದು ಬಿಜೆಪಿಗೆ ದೊಡ್ಡ ತಲೆನೋವಾಗಿದೆ.
ಇನ್ನೂ ಈ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಎಲ್ಲಾ ಪಕ್ಷದಲ್ಲಿ ಆಕಾಂಕ್ಷಿಗಳು ಬಹಳ ಜನ ಇದ್ದಾರೆ. ಟಿಕೆಟ್ ಫೈನಲ್ ಆದ ಬಳಿಕ ಅಸಮಾಧಾನ ಸಹಜ. ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕು. ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮಣ್ ಸವದಿಗೆ ಜೊತೆಗೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಚುನಾವಣೆಯಲ್ಲಿ 10 ಕ್ಷೇತ್ರದಲ್ಲಿ 8 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆಪರೇಷನ್ ಕಮಲದ ಮೂಲಕ ಮೂರು ಜನ ಶಾಸಕರು ಬಿಜೆಪಿ ಬಂದಿದ್ದಾರೆ. ಈ ಚುನಾವಣೆಯಲ್ಲಿ 13 ಸ್ಥಾನ ಉಳಿಸಿಕೊಳ್ಳುವ ಯತ್ನ ನಡೆದಿದೆ. ಕ್ಷೇತ್ರ ವಾರು ಮತದಾನ ಮಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಇದು ಒಳ್ಳೆಯ ವ್ಯವಸ್ಥೆ ಎಂದು ನಾವು ಭಾವಿಸಿದ್ದೇನೆ. ಕ್ಷೇತ್ರದ ಜನರ ಭಿನ್ನಾಭಿಪ್ರಾಯ ಏನು ಅಂತ ಗೊತ್ತಾಗಲಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಶಾಸಕರು ಕಾರ್ಯಕರ್ತರ ಜೊತೆಗೆ ಸರಿಯಾಗಿ ಇದ್ದಾರೋ ಇಲ್ಲವೋ ಗೊತ್ತಾಗುತ್ತೆ. ಸರ್ವೇ ಇಟ್ಟುಕೊಂಡು ಟಿಕೆಟ್ ಹಂಚಿಕೆ ಮಾಡುತ್ತಾರೆ. ಹೈಕಮಾಂಡ್ ಘೋಷಣೆ ಮಾಡಿದ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ಮಾಡುತ್ತೇವೆ, ಕೆಲ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಲಿದೆ. ಶಾಂತಿ, ಸಮಾಧಾನದಿಂದ ಚುನಾವಣೆ ಆಗಬೇಕು ಎನ್ನುವ ಬಯಕೆ ನಮ್ಮದು ಎಂದು ತಿಳಿಸಿದರು.
ಬಣ ರಾಜಕೀಯ, ಭಿನ್ನಾಭಿಪ್ರಾಯ ಎಲ್ಲಾ ಪಕ್ಷದಲ್ಲಿ ಇರುತ್ತದೆ. ಎಲ್ಲವನ್ನೂ ವರಿಷ್ಠರು ಸರಿ ಮಾಡುತ್ತಾರೆ, ಮಾಧ್ಯಮಗಳಲ್ಲಿ ಬಣ ರಾಜಕೀಯದ ಬಗ್ಗೆ ನೋಡಿದ್ದೇನೆ. ಯಾರು ಯಾರನ್ನು ಸೋಲಿಸಲು ಆಗಲ್ಲ, ಅವರ ಕ್ಷೇತ್ರದಲ್ಲಿ ಅವರು ಗಟ್ಟಿಯಾಗಿ ಇರುತ್ತಾರೆ. ಸೋಲು ಅನ್ನುವುದು ನಮ್ಮ ಕಡೆ ಇಲ್ಲ. ಕ್ಷೇತ್ರದ ಜನರಿಂದಲೇ ಮಾತ್ರ ಸೋಲಿಸಲು, ಗೆಲ್ಲಿಸಲು ಸಾಧ್ಯ. ಹೊರಗಿನವರು ಬಂದು ಸೋಲಿಸಲು ಆಗಲ್ಲ. ಪಕ್ಷದ ಹಿತದೃಷ್ಟಿಯಿಂದ ಪ್ರತಿಷ್ಠೆ ಆಗಬಾರದು. ಇನ್ನೊಂದು ಸಲ ಸವದಿ, ರಮೇಶ ಹಾಗೂ ಅಣ್ಣಾ ಸಾಹೇಬ್ ಜೊಲ್ಲೆಗೆ ವಿನಂತಿ ಮಾಡುತ್ತೇವೆ.ಬೆಂಗಳೂರಿನಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಚುನಾವಣೆಗೆ ಇನ್ನೂ 40 ದಿನ ಮಾತ್ರ ಉಳಿದಿದೆ. ಎಲ್ಲಾ ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಬೇಕು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಬೇಕು. ಯಾರು ಜಗಳ ಆಡಬಾರದು ಎಂಬುದು ಎಲ್ಲರ ಇಚ್ಛೆ ಇದೆ, ಮೂರ್ನಾಲ್ಕು ಜನ ನಾಯಕರಿಗೆ ನಾವು ಮನವಿ ಮಾಡುತ್ತೇವೆ, ಬಿಜೆಪಿ ಸರ್ಕಾರ ಎಲ್ಲಾ ಸಮಾಜಕ್ಕೆ ಸರಿಯಾದ ಮೀಸಲಾತಿ ನೀಡಿದೆ.

ಯಾರೇ ಹೊರಗಿನಿಂದ ಬಂದು ಸೋಲಿಸಲು ಆಗಲ್ಲ, ಎಲ್ಲಾ ಸಮುದಾಯದ ಬಿಜೆಪಿ ಜೊತೆಗೆ ಇದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಜಿಲ್ಲೆಯಲ್ಲಿನ ಗೊಂದಲ ಇತ್ಯರ್ಥ ಮಾಡಲು ಪ್ರಯತ್ನ ಮಾಡಲಾಗುವುದು ಎಂದರು.
ಶಾಸಕ ಎನ್ ವೈ ಗೋಪಾಲಕೃಷ್ಣ ರಾಜೀನಾಮೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ನಿಂದ ಬಂದಿದ್ದರು ವಾಪಸ್ ಹೋಗಿದ್ದಾರೆ. ಇನ್ನೂ ಯಾರು ಪಕ್ಷ ಬಿಟ್ಟು ಹೋಗಲ್ಲ, ಗೆಲ್ಲುವ ಪಕ್ಷ ಬಿಟ್ಟು ಹೋಗಲು ಯಾರು ಇಚ್ಛೆ ಪಡುತ್ತಾರೆ. ಎಷ್ಟು ಸ್ಥಾನ ಬರ್ತಾವೇ ಅಂತ ನಾನು ಶಾಸ್ತ್ರ ಹೇಳಲಾ, ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications