Get Updates
Get notified of breaking news, exclusive insights, and must-see stories!

ಎನ್​ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗ್ತೀರಾ? ಕುಮಾರಸ್ವಾಮಿ ಏನಂದ್ರು ?

ಬೆಂಗಳೂರು, ಜೂನ್‌ 04: ಎಕ್ಸಿಟ್‌ ಪೋಲ್‌ ಸಮೀಕ್ಷೆಯಂತೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಭರ್ಜರಿ ಗೆಲುವು ಸಾಧಿಸಲಿದೆ. ಕೇಂದ್ರದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದ ವರೆಗೂ ಮುನ್ನಡೆಯಲ್ಲಿ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಎನ್​ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬಮಾಧ್ಯಮಗಳ ಪ್ರಶ್ನೆ ಕುಮಾರಸ್ವಾಮಿ ಮಾತನಾಡಿ, ಆ ಬಗ್ಗೆ ನನಗೆ ಹೆಚ್ಚಿನ ಆಸಕ್ತಿ ಏನೂ ಇಲ್ಲ. ಮಂಡ್ಯ ಜಿಲ್ಲೆಗೆ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತೇನೆ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುವುದು ನನ್ನ ಮೊದಲ ಆದ್ಯತೆ ಎಂದು ಕುಮಾರಸ್ವಾಮಿ ಹೇಳಿದರು.

Will You Become Union Minister If NDA Comes To Power See What HD Kumaraswamy Said Here

ಮಂಡ್ಯ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ. ಎಕ್ಸಿಟ್​ ಪೋಲ್​​ ಸರ್ವೆ ಶೇ 90ರಷ್ಟು ಸತ್ಯವಾಗುತ್ತದೆ ಎಂದರು. ಕರ್ನಾಟಕದಲ್ಲಿ 25 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ದೇಶದಲ್ಲಿ ಎನ್​ಡಿಎ ಹೆಚ್ಚು ಸ್ಥಾನಗಳು ಗೆಲ್ಲುವ ವಿಶ್ವಾಸವಿದೆ ಎಂದರು.

ಹಣಕಾಸಿನ ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಇದಕ್ಕೆಲ್ಲ ನೇರ ಜವಾಬ್ದಾರಿ ಹೊರಬೇಕು. ಹಗರಣದ ತನಿಖೆ ಬಗ್ಗೆ ಆಮೆ ವೇಗ! ಆದರೆ ಹಣ ವರ್ಗಾವಣೆ ಮಾಡಿಕೊಳ್ಳಲು ರಾಕೆಟ್ ವೇಗ!! ಇದು ಇವರ ಕಾರ್ಯವೈಖರಿ. ಇಷ್ಟು ಮೊತ್ತದ ಹಣವನ್ನು ಯಾರ ನಿರ್ದೇಶನದ ಮೇರೆಗೆ ಮಾಡಿದ್ದರು. ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಇದೆಲ್ಲಾ ಚರ್ಚೆ ನಡೆದು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಜನರ ತೆರಿಗೆ ಹಣ, ಅವರ ಬೆವರಿನ ಹಣ. ಜನರ ದುಡ್ಡನ್ನು ಇಷ್ಟು ಸ್ವೇಚ್ಚಾಚಾರವಾಗಿ ಬಳಕೆ ಮಾಡಿಕೊಂಡಿದ್ದಾರೆ. ನಿಮಗೆ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ? ಬಡವರ ದುಡ್ಡನ್ನೇ ಕೊಳ್ಳೆ ಹೊಡೆಯೋದು, ಅವರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ನಾಟಕ ಆಡೋದು. ಇದು ಯಾವ ಸೀಮೆ ಅಭಿವೃದ್ಧಿ? ಎಂದು ಪ್ರಶ್ನಿಸಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಹಳ ಮಾತಾನಾಡುತ್ತಾರೆ. ಪ್ರತಿಯೊಂದಕ್ಕೂ ಮುಂದೆ ಬಂದು ಹೇಳಿಕೆ ಕೊಡುತ್ತಾರೆ. ಇದಕ್ಕೂ ಅವರು ಉತ್ತರ ಕೊಡಲಿ. ಯಾರಪ್ಪನ ಮನೆಯ ದುಡ್ಡು ಇದು? ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಇರುವ ಹಣವನ್ನು ಹೀಗೆ ಲೂಟಿ ಮಾಡುತ್ತೀರಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಈಗ ಎಸ್ ಐಟಿ ರಚನೆ ಮಾಡಿ ಯಾರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಇವರು? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ಸಚಿವ ನಾಗೇಂದ್ರ ಹೆಸರನ್ನೂ ಬರೆದಿಲ್ಲ. 36 ಜನ ಸಚಿವರಿದ್ದಾರೆ, ನಾವು ಯಾರೂ ಅಂತ ಅಂದುಕೊಳ್ಳಬೇಕು ಹಲವಾರು ನಿಗಮ ಮಂಡಳಿಗಳಲ್ಲಿ ಹೀಗೆ ಆಗುತ್ತಿದೆ. ಎಲ್ಲವೂ ತನಿಖೆ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.

ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್ ಐಟಿ ರಚನೆ ಮಾಡಿದೆ. ಎಸ್ ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನೆ ಡ್ರೈವ್ ತೆಗೆದುಕೊಂಡು ತೆಗೆದುಕೊಂಡು ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಯಾಕೋ.. ಈ ಬಾರಿ ಪೆನ್ ಡ್ರೈ ಹೆಚ್ಚು ಸದ್ದು ಮಾಡುತ್ತಿದೆ ಎಂದು ಸರ್ಕಾರಕ್ಕೆ ಟಾಂಗ್ ಕೊಟ್ಟರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+