ಹಾಸನದಲ್ಲಿ ಪ್ರಜ್ವಲ್ ಹೀನಾಯ ಸೋಲು: ನಿಖಿಲ್ ಕುಮಾರಸ್ವಾಮಿ ಏನಂದ್ರು?
ಬೆಂಗಳೂರು, ಜೂನ್ 13: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಗೆಲುವು ಸೋಲು ಸಹಜ. ಸೋತ ಮಾತ್ರಕ್ಕೆ ನಾವು ಕೈ ಕಟ್ಟಿ ಮನೆಯಲ್ಲಿ ಕೂರುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಾಸನದಲ್ಲಿ ಪಕ್ಷವನ್ನು ನಂಬಿಕೊಂಡ ಹಲವಾರು ಕಾರ್ಯಕರ್ತರು ಇದ್ದಾರೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ. ಹಾಸನ ಜಿಲ್ಲೆಯಲ್ಲಿ ಮುಂದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರಿಗೆ ಧೈರ್ಯ ತುಂಬಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ನಿಖಿಲ್ ಹೇಳಿದರು.

ಭಾನುವಾರ ತಮಗೆ ರಾಜಕೀಯ ಜನ್ಮ ನೀಡಿದ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ತಮಗೆ ರಾಜಕೀಯ ಶಕ್ತಿ ತುಂಬಿದ ಮಂಡ್ಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಎರಡೂ ಕಡೆ ನಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಭೆಗಳನ್ನು ಹಮ್ಮಿಕೊಂಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ. ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರ ಪರ, ರೈತರ ಪರ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಈ ಅವಕಾಶ ದೊರಕಿರುವುದು ಅತ್ಯಂತ ಸಂತೋಷದ ಸಂಗತಿ. ಅತ್ಯಂತ ಪ್ರಮುಖ ಸ್ಥಾನವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದಾರೆ.
ಪ್ರತಿ ಕಾರ್ಯಕರ್ತನಿಗೂ ನಿರೀಕ್ಷೆ ಇದೆ, ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಈಗಾಗಲೇ ಕೆಲಸ ಆರಂಭ ಮಾಡಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದಾರೆ. ಉಕ್ಕು ಸಚಿವಾಲಯದಲ್ಲಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಕೆಲಸ ಆರಂಭ ಮಾಡಿದ್ದಾರೆ ಎಂದು ನಿಖಿಲ್ ಅವರು ತಿಳಿಸಿದರು.
ಮಂಡ್ಯ ಜಿಲ್ಲೆಯ ಎಲ್ಲ ಜನತೆ, ನಾಯಕರಿಗೆ ಧನ್ಯವಾದಗಳನ್ನು ಹೇಳುತ್ತೇನೆ. 2018ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯ ಶಾಸಕರನ್ನು ಆಯ್ಕೆ ಮಾಡಿದ್ದರು. ಅದೇ ರೀತಿ ಈ ಸಲ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ರಾಮನಗರದಲ್ಲಿ ರಾಜಕೀಯ ಬದುಕನ್ನು ಕಟ್ಟಿಕೊಟ್ಟ ಜನತೆಗೂ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಪರವಾಗಿ ದೇಶದ ಮತ್ತು ರಾಜ್ಯದ ಜನತೆ ಐತಿಹಾಸಿಕ ತೀರ್ಪು ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ಮೋದಿ ಅವರು ಅನೇಕ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಮೋದಿಯವರು ಪ್ರಧಾನಿ ಆಗಲು ಜನ ತೀರ್ಪು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ದೇವೇಗೌಡರು ಮೋದಿ ಅವರ ನಾಯಕತ್ವ ಮೆಚ್ಚಿ ಮೈತ್ರಿ ಭಾಗವಾಗಲು ತೀರ್ಮಾನ ಮಾಡಿದರು. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ನಿಖಿಲ್ ಅವರು ತಿಳಿಸಿದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications