ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿಯಲ್ಲಿ ಅತಿ ಹೆಚ್ಚು ಮಳೆ: ಇನ್ನೆರಡು ದಿನ ಭಾರಿ ಮಳೆ ಎಚ್ಚರಿಕೆ

|
Google Oneindia Kannada News

Recommended Video

ಉಡುಪಿಯಲ್ಲಿ ಅಧಿಕ ಮಳೆ | ಇನ್ನೆರಡು ದಿನ ಭಾರಿ ಮಳೆ ಎಚ್ಚರಿಕೆ | Oneindia Kannada

ಬೆಂಗಳೂರು, ಜುಲೈ 23: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಉಡುಪಿಯಲ್ಲಿ 295 ಮಿ.ಮೀ ಮಳೆ ದಾಖಲಾಗಿದೆ.

24 ಗಂಟೆಗಳ ಕರ್ನಾಟಕ ಮಳೆ ನಕ್ಷೆಯಲ್ಲಿ ಜುಲೈ 22ರ ಬೆಳಗ್ಗೆ 8.30ರಿಂದ ರಿಂದ ಜುಲೈ 23 ಬೆಳಗ್ಗೆ 8.30ರವರೆಗೆ ಒಟ್ಟು 295 ಮಿ.ಮೀ ಮಳೆಯಾಗಿದೆ. ಕುಂದಾಪುರದ ಕೋಣಿಯಲ್ಲಿ ಹೆಚ್ಚು ಮಳೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪೂರ್ವ ಕುಶಾಲ್‌ನಗರದಲ್ಲಿ 19 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್; ಇಂದು ಶಾಲಾ ಕಾಲೇಜುಗಳಿಗೆ ರಜೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್; ಇಂದು ಶಾಲಾ ಕಾಲೇಜುಗಳಿಗೆ ರಜೆ

ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆ ಮುಂದುವರೆದಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಚಿಸಲಾಗಿದೆ.

With in 24 hours heavy rainfall in Udupi

ಹವಾಮಾನ ಇಲಾಖೆ ಹೊರಡಿಸಿರುವ ಸೂಚನೆ ಪ್ರಕಾರ, ಜುಲೈ 25ರವರೆಗೆ ಪ್ರತಿದಿನ 200 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಜಿಲ್ಲೆಯ ಅನುದಾನಿತ, ಖಾಸಗಿ, ಅಂಗನವಾಡಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಪ್ರತಿದಿನ 200 ಮಿ.ಮಿ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 3 ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿರುವ ಪರಿಣಾಮ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಮಳೆ ಮತ್ತೆ ತೀವ್ರತೆ ಪಡೆಯುವ ಸಾಧ್ಯತೆ ಇರುವ ಕಾರಣ ಜುಲೈ 24ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕಾರವಾರ ಮಳೆ ಬೀಳುವ ಮುನ್ಸೂಚನೆ ದೊರೆತಿದ್ದು, ಅಲ್ಲೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಟ್ಕಳದಲ್ಲಿ 14 ಸೆಂ.ಮೀ, ಪಣಂಬೂರಿನಲ್ಲಿ 13 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಶಿರಾಲಿ, ಪುತ್ತೂರು, ಹೊಸನಗರ, ಧರ್ಮಸ್ಥಳ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಮಂಗಳವಾರವೂ ಕೂಡ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.

ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 27.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 26.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

English summary
Indian meteorological department said that With in 24 hours heavy rainfall in Udupi, 295 mm rain occurs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X