ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿಗೆ ಸಿದ್ದರಾಮಯ್ಯ ಮಾಡಿದ ಮನವಿ ಏನು?

ಮೈಸೂರು, ಏಪ್ರಿಲ್‌ 22: ಜಾತ್ಯಾತೀತ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ನ್ನು ಬೆಂಬಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮನವಿ ಮಾಡಿದರು. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ ಎಂದು ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ, ಬರ ಪರಿಹಾರ ನೀಡಿಲ್ಲದ್ದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೊರೆ ಹೊದಿದ್ದೇವೆ. ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಪ್ರಕಾರ ಕೇಂದ್ರ ತಂಡ ವರದಿ ನೀಡಿದ ಒಂದು ತಿಂಗಳೊಳಗೆ ಇತ್ಯರ್ಥ ಮಾಡಬೇಕು. ಅಕ್ಟೋಬರ್ ತಿಂಗಳಲ್ಲಿ ವರದಿ ಸಲ್ಲಿಸಲಾಗಿದ್ದು ಆರು ತಿಂಗಳಾದರೂ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ.

Withdraw Candidature Of Dingaleshwar Swami And Support The Congress Says siddaramaiah

ನಾನೇ ಖುದ್ದು ಪ್ರಧಾನಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಡಿಸೆಂಬರ್ 23 ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಹೇಳಿದ್ದರು. ರಾಜ್ಯದಿಂದ ರೈತರಿಗೆ 2000 ರೂ.ಗಳವರೆಗೆ ಪರಿಹಾರ ನೀಡಿದ್ದೇವೆ. 34 ಲಕ್ಷ ರೈತರಿಗೆ 650 ಕೋಟಿ ರೂಪಾಯಿಗಳ ನ್ನು ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರು, ಮೇವು, ಎನ್.ಆರ್. ಇ.ಜಿ.ಎಸ್. ಅಡಿಯಲ್ಲಿ ಕೆಲಸ ಮಾಡಿಸುತ್ತಿದ್ದು, ಮೇವಿಗೆ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಯಡಿಯೂರಪ್ಪನವರ ಹೇಳಿರುವ ಬಗ್ಗೆ ಉತ್ತರಿಸಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಯಡಿಯೂರಪ್ಪನವರು ಈ ರೀತಿ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗವನ್ನೂ ಸೇರಿದಂತೆ 20 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ ಎಂದು ಹೇಳಿದರು.

ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಯಾವ ಆಧಾರದ ಮೇಲೆ ಇಂತಹ ಹೇಳಿಕೆಯನ್ನು ನೀಡಿದ್ದಾರೆ ಎಂಬುದನ್ನು ಮಾಧ್ಯಮದವರು ಪ್ರಶ್ನಿಸಬೇಕು. ಈ ಬಾರಿ ಗ್ಯಾರಂಟಿಗಳಿಗೆ 36 ಸಾವಿರ ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದ್ದು, 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಮೀಸಲಿರಿಸಿದೆ. ಕುಮಾರಸ್ವಾಮಿಯವರು ಕೇವಲ ರಾಜಕೀಯಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, 2022 ರಲ್ಲಿ ಹೋಲಿಸಿದರೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಅಪರಾಧಗಳು ಕಡಿಮೆಯಾಗಿದೆ. 2023 ರಲ್ಲಿ 1295 ಅಪರಾಧ ಪ್ರಕರಣಗಳು ನಡೆದಿದ್ದರೆ, ಅವರ ಕಾಲದಲ್ಲಿ 2022 ರಲ್ಲಿ 1370 ಪ್ರಕರಣಗಳು ನಡೆದಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+