Get Updates
Get notified of breaking news, exclusive insights, and must-see stories!

Idli: ಬಾಣಂತಿ ಸಾವಿನ ಹಿಂದೆ ಇಡ್ಲಿ ಹೆಸರು, ಏನಿದು ಹೊಸ ಟ್ವಿಸ್ಟ್‌

ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇನ್ನೂ ನಿಂತಿಲ್ಲ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಳಿಕ ಬೆಳಗಾವಿ, ಕೊಪ್ಪಳದಲ್ಲೂ ಇಂತಹ ಪ್ರಕರಣಗಳು ಬೆಳಕಿಗೆ ಬಂದು ರಾಜ್ಯ ಸರ್ಕಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರವಾಗಿ ಬಿಜೆಪಿ ಕೂಡ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿತ್ತು. ಇದೀಗ ಬಾಣಂತಿಯೊಬ್ಬರ ಸಾವು ಪ್ರಕರಣದಲ್ಲಿ ಅಚ್ಚರಿ ವಿಚಾರವೊಂದು ಮುನ್ನೆಲೆಗೆ ಬಂದಿದೆ.

ಎಲ್ಲೆಡೆ ಬಾಣಂತಿಯರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿತ್ತು. ಇದಕ್ಕೆ ವೈದ್ಯಕೀಯ ಕಾರಣಗಳು, ಔಷಧ ಸೇರಿದಂತೆ ಹಲವು ಕಾರಣಗಳನ್ನು ಹೇಳಲಾಗಿತ್ತು. ಆದರೆ, ಬಾಣಂತಿಯೊಬ್ಬರ ಸಾವಿನ ಹಿಂದೆ ಇಡ್ಲಿ ಹೆಸರು ಕೂಡ ಕೇಳಿಬಂದಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯೊಬ್ಬರ ಸಾವಿಗೆ ಇಡ್ಲಿ ಕಾರಣನಾ? ಎನ್ನುವ ಅನುಮಾನ ವ್ಯಕ್ತವಾಗಿದೆ.

Woman Death In Koppal Hospital Sparks Suspicion Over Idli Consumption

ಇವರಿಗೆ ಸಿಸೇರಿಯನ್‌ ಮೂಲಕ ಹೆರಿಗೆಯಾಗಿತ್ತು. ಬಳಿಕ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ. ಇವರ ಸಾವಿಗೆ ಹೊರಗಿನಿಂದ ತಂದು ಸೇವಿಸಿದ್ದ ಇಡ್ಲಿಯೇ ಕಾರಣ ಎಂದು ಶಂಕಿಸಲಾಗಿದೆ. ಈ ಮಹಿಳೆಯು ಹೆರಿಗೆಯಾದ ನಂತರ ನಾಲ್ಕು ದಿನ ಆರೋಗ್ಯವಾಗಿಯೇ ಇದ್ದರು. ಬಳಿಕ ಹೊರಗಿನಿಂದ ಇಡ್ಲಿಯನ್ನು ತಂದು ತಿನ್ನಿಸಲಾಗಿತ್ತು. ಇದಾದ ನಂತರ ಅವರಿಗೆ ವಾಂತಿ, ಭೇದಿ ಶುರುವಾಗಿತ್ತು. ಆದರೆ, ಈ ರೀತಿ ಬೇರೆಯವರಿಗೆ ಆಗಿರಲಿಲ್ಲ ಎಂದೂ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಹಾಗಾಗಿ ಆ ಇಡ್ಲಿಯನ್ನು ಯಾವ ಸ್ಥಳದಿಂದ ತರಲಾಗಿತ್ತು ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗಿದೆ.

ಮೊದಲಿಗೆ ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಗಳು ವರದಿಯಾಗಿತ್ತು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ತರಾಟೆಗೆ ತೆಗೆದುಕೊಂಡಿದ್ದರು. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರವು ಬೆಳಗಾವಿಯ ಚಳಿಗಾಲದ ಅಧಿವೇಶನವನ್ನು ಸಂಪೂರ್ಣ ವ್ಯರ್ಥ ಮಾಡುತ್ತಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳು ಸೇರಿದಂತೆ ಸಚಿವರೂ ತಯಾರಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರ ಸಾವು, ಶಿಶುಗಳ ಮರಣ ಇದರ ಕುರಿತು ಚರ್ಚೆಗೂ ಸಿದ್ಧರಿಲ್ಲ. ಸದನದ ದಿಕ್ಕು ತಪ್ಪಿಸುವ ಕೆಲಸವನ್ನಷ್ಟೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದ್ದರು.

Woman Death In Koppal Hospital Sparks Suspicion Over Idli Consumption

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಸಂಬಂಧ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸರ್ಕಾರ ಆದೇಶಿಸಿತ್ತು.

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದ್ದು, ಡ್ರಗ್ ಪೂರೈಸಿದ ಕಂಪನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಿತ್ತು. ಅಲ್ಲದೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿತ್ತು.

ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆದು, ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆದಿತ್ತು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಿತ್ತು. ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+